Asianet Suvarna News Asianet Suvarna News

Bengaluru: ಮನೆಗಳ್ಳತನ ಮಾಡುತ್ತಿದ್ದ ಚಾಲಾಕಿ ದಂಪತಿ ಬಂಧನ

ಜ್ಞಾನಭಾರತಿ ಸೇರಿ ವಿವಿಧ ಪ್ರದೇಶಗಳಲ್ಲಿ ಒಂಟಿ ಮನೆಗಳನ್ನು ಗುರುತಿಸಿ ಮನೆಗಳ್ಳತನ ಮಾಡುತ್ತಿದ್ದ ದಂಪತಿಯನ್ನು ಜ್ಞಾನಭಾರತಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮನೆಗಳ್ಳತನದ ಮೂಲಕವೇ ಐಷಾರಾಮಿ ಜೀವನ ನಡೆಸುತ್ತಿದ್ದ ದಂಪತಿ ಈಗ ಪೊಲೀಸರ ಅತಿಥಿಯಾಗಿದ್ದಾರೆ.

Couple was arrested for burglarizing a house
Author
First Published Dec 4, 2022, 2:24 PM IST

ಬೆಂಗಳೂರು (ಡಿ.4 ):  ನಗರದ ಜ್ಞಾನಭಾರತಿ ಸೇರಿ ವಿವಿಧ ಪ್ರದೇಶಗಳಲ್ಲಿ ಒಂಟಿ ಮನೆಗಳನ್ನು ಗುರುತಿಸಿ ಮನೆಗಳ್ಳತನ ಮಾಡುತ್ತಿದ್ದ ದಂಪತಿಯನ್ನು ಜ್ಞಾನಭಾರತಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮನೆಗಳ್ಳತನದ ಮೂಲಕವೇ ಐಷಾರಾಮಿ ಜೀವನ ನಡೆಸುತ್ತಿದ್ದ ದಂಪತಿ ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಒಂಟಿ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ ನಾಗರಾಜ್ ಹಾಗೂ ರಮ್ಯಾ ಬಂಧಿತ ದಂಪತಿ ಆಗಿದ್ದಾರೆ. ಬಂಧಿತರಿಂದ 5 ಲಕ್ಷ ರೂಪಾಯಿ ಮೌಲ್ಯದ 65 ಗ್ರಾಂ ಚಿನ್ನಾಭರಣ ಹಾಗೂ 500 ಗ್ರಾಂ ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ. ಜ್ಞಾನಭಾರತಿ ಸೇರಿ ವಿವಿಧ ಸುತ್ತಲಿನ ಪ್ರದೇಶಗಳಲ್ಲಿ ಒಂಟಿ ಮನೆಗಳಲ್ಲಿ ಕಳ್ಳತನ ಆಗುತ್ತಿರುವ ಬಗ್ಗೆ ಜ್ಞಾನ ಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಾಚರಣೆಗೆ ಇಳಿದಿದ್ದ ಪೊಲೀಸರು ಸಿಸಿಟಿವಿ ಪೋಟೇಜ್‌ ಮತ್ತು ಇತರೆ ಸಾಕ್ಷಿಗಳ ನೆರವಿನಿಂದ ಕಳ್ಳ ದಂಪತಿಯನ್ನು ಬಂಧಿಸಿದ್ದಾರೆ.

Dharwad: ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಪಾಲ್ಗೊಂಡಿದ್ದ ಆರೋಪಿಗಳಿಗೆ 3 ವರ್ಷ ಶಿಕ್ಷೆ

ವಿವಿಧೆಡೆ 4 ಪ್ರಕರಣ ದಾಖಲು: ಈ ಚಾಲಾಕಿ ದಂಪತಿಗಳ ಕಳ್ಳತನದ ಕರಾಮತ್ತು ಕೇವಲ ಜ್ಞಾನಭಾರತಿ ಪ್ರದೇಶದಲ್ಲಿ ಮಾತ್ರವಲ್ಲದೇ ಮಾದನಾಯಕನಹಳ್ಳಿ ಮತ್ತು ರಾಜರಾಜೇಶ್ವರಿ ನಗರದಲ್ಲಿಯೂ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸ್‌ ಠಾಣೆಗಳಲ್ಲಿಯೂ ಇವರಿಬ್ಬರ ವಿರುದ್ಧ 4 ಪ್ರಕರಣಗಳು ದಾಖಲಾಗಿದ್ದವು. ಇನ್ನು ಹಗಲು ಹೊತ್ತಿನಲ್ಲಿ ಒಬ್ಬಂಟಿ ಮನೆಗಳನ್ನು ಗುರುತಿಸುತ್ತಿದ್ದ ದಂಪತಿ ಯಾವಾಗಲೂ ಮಾಸ್ಕ್‌ ಧರಿಸಿಯೇ ಓಡಾಡುತ್ತಿದ್ದರು. ಇನ್ನು ಸಿಸಿ ಕ್ಯಾಮರಾ ಇರುವ ಪ್ರದೇಶಗಳಲ್ಲಿ ಅಪ್ಪಿತಪ್ಪಿಯೂ ತಮ್ಮ ಕೈಚಳಕ ತೋರಿಸುತ್ತಿರಲಿಲ್ಲ. ಹೀಗಾಗಿಯೇ ಬಹಳ ದಿನದಿಂದಲೂ ಕಳ್ಳತನ ಮಾಡುತ್ತಿದ್ದರೂ ಪೊಲೀಸರ ಕೈಗೆ ಸಿಕ್ಕಿಕೊಂಡಿರಲಿಲ್ಲ.

Follow Us:
Download App:
  • android
  • ios