ಶಿಮ್ಜಿತಾಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕುನ್ನಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನಂತರ ಆಕೆಯನ್ನು 14 ದಿನಗಳ ಕಾಲ ಮಂಜೇರಿ ಮಹಿಳಾ ಜೈಲಿಗೆ ಕಳುಹಿಸಲಾಗಿದೆ. ಇದರ ನಡುವೆ ಜಾಮೀನಿಗಾಗಿ ಅರ್ಜಿ ದಾಖಲಿಸಿದ್ದಳು. ಆದರೆ, ಅರ್ಜಿಯ ಕಥೆ ಏನಾಗಿದೆ?

ದೀಪಕ್ ಸಾವು ಕೇಸ್- ಶಿಮ್ಜಿತಾ ಗತಿ ಏನು?

ಕೊಚ್ಚಿ: ಕೇರಳ ಮೂಲದ ದೀಪಕ್ ಸಾವು ಪ್ರಕರಣ ( Deepak Death Case ) ಇಡೀ ದೇಶದಲ್ಲಿ ಸಾಕಷ್ಟು ಸದ್ದು ಮಾಡಿದ್ದು ಬಹುತೇಕರಿಗೆ ಗೊತ್ತಿದೆ. ತಾನು ಮಾಡದೇ ಇರುವ ತಪ್ಪಿಗೆ ಅಮಾಯಕ ದೀಪಕ್ ಸಾವಿಗೆ ಶರಣಾಗಿದ್ದಾನೆ. ತನ್ನ ವೀಲ್ಸ್ ಹುಚ್ಚಿಗೆ ಮಾನವೀಯತೆಯನ್ನು ಮರೆತು ವರ್ತಿಸಿದ ಆರೋಪಿ ಶಿಮ್ಮಿತಾ ಮುಸ್ತಫಾ (Shimjitha Musthafa) ವಿರುದ್ಧ ದೇಶಾದ್ಯಂತ ತೀವ್ರ ಟೀಕೆಗಳು ವ್ಯಕ್ತವಾಗಿವೆ. ಆದರೂ ಕೂಡ ಆಕೆಗೆ ಸ್ವಲ್ಪವೂ ಪಶ್ಚಾತ್ತಾಪವಿಲ್ಲ ಎಂಬುದನ್ನು ನ್ಯಾಯಾಲಯವೂ ಗಮನಿಸಿದೆ.

ನ್ಯಾಯಾಲಯದಲ್ಲೂ ತೀವ್ರ ಹಿನ್ನಡೆ ಅನುಭವಿಸಿದ ಶಿಮ್ಮಿತಾ:

ಪ್ರಸ್ತುತ ನ್ಯಾಯಾಂಗದ ಬಂಧನದಲ್ಲಿರುವ ಆರೋಪಿ ಶಿಮ್ಮಿತಾ, ಇನ್ನಷ್ಟು ದಿನಗಳ ಕಾಲ ಜೈಲಿನ ಕೋಣೆಯಲ್ಲಿ ಕಾಲ ಕಳೆಯಬೇಕಾಗಿರುವ ಅನಿವಾರ್ಯತೆ ಸೃಷ್ಟಿಯಾಗಿದೆ. ಏಕೆಂದರೆ, ಕುಂದಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆಕೆಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅಲ್ಲಿಗೆ ಕಾನೂನು ಹೋರಾಟ ಆಕೆಯ ಪಾಲಿಗೆ ಇನ್ನಷ್ಟು ಕಗ್ಗಂಟಾಗಿ ಪರಣಮಿಸಿದೆ.

ನ್ಯಾಯಾಲಯವು ಪ್ರಾಸಿಕ್ಯೂಷನ್ ವಾದಗಳನ್ನು ಎತ್ತಿಹಿಡಿದಿದೆ. ಸದ್ಯ ಈ ಪ್ರಕರಣ, ತನಿಖೆಯ ಪ್ರಾಥಮಿಕ ಹಂತದಲ್ಲಿದೆ. 'ಈ ಪರಿಸ್ಥಿತಿಯಲ್ಲಿ ಜಾಮೀನು ನೀಡುವುದು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು' ಎಂದು ಪ್ರಾಸಿಕ್ಯೂಷನ್ ವಾದಿಸಿದೆ. ಬಸ್ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರ ಹೇಳಿಕೆಗಳನ್ನು ದಾಖಲಿಸಬೇಕಾಗಿರುವು ಕಾರಣಕ್ಕೆ ಆರೋಪಿಯನ್ನು ಬಿಡುಗಡೆ ಮಾಡುವುದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪೊಲೀಸ್ ವರದಿಯಲ್ಲಿ ಸೂಚಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಆಕೆಗೆ ಈಗ ಜಾಮೀನು ತಿರಸ್ಕರಿಸಿದೆ.

ಏನಿದು ಪ್ರಕರಣ?

ಇತ್ತೀಚೆಗೆ, ಆರೋಪಿ ಶಿಮ್ಮಿತಾ, ತನಗೆ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಅಸಭ್ಯಕರವಾಗಿ ಮುಟ್ಟುತ್ತಿದ್ದಾನೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ, ಸುಳ್ಳು ಸಂದೇಶವನ್ನು ಹರಿಯಬಿಟ್ಟಿದ್ದಳು. ಈ ವಿಡಿಯೋ ಸೋಷಿಯಲ್ಮೀಡಿಯಾಗಳಲ್ಲಿ ಕ್ಷಣಮಾತ್ರದಲ್ಲಿ ವೈರಲ್ ಆಗಿ, 'ಆ ವ್ಯಕ್ತಿಗೆ ಅಲ್ಲೇ ಹಿಗ್ಗಾಮುಗ್ಗಾ ಥಳಿಸಬೇಕಿತ್ತು' ಎಂಬ ಕಮೆಂಟ್‌ಗಳಿಂದ ತುಂಬಿತು. ಸಾಕಷ್ಟು ಜನರು, 'ಆತನಿಗೆ ಸರಿಯಾಗಿ ಬುದ್ಧಿ ಕಲಿಸಬೇಕಿತ್ತು' ಎಂದೆಲ್ಲ ಆಕ್ರೋಶ ಹೊರಹಾಕಿದರು. ತನ್ನದೇನು ತಪ್ಪಿಲ್ಲದಿದ್ದರೂ ಸುಖಾಸುಮ್ಮನೆ ನನ್ನನ್ನು ವಿಡಿಯೋದಲ್ಲಿ ತೋರಿಸಿ, ಮಾನ-ಮರ್ಯಾದೆ ಕಳೆದಳು ಎಂದು ಭಾವಿಸಿದ ದೀಪಕ್, ಮನನೊಂದು ಆತ್ಮಹತ್ಯೆಗೆ ಶರಣಾದರು. ಈ ಘಟನೆ ಇಡೀ ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಯಿತು.

ಮೃತ ದೀಪಕ್ ವಿರುದ್ಧವೇ ದೂರು ಕೊಟ್ಟ ಶಿಮ್ಜಿತಾ!

ತನ್ನ ತಪ್ಪಿನಿಂದ ಓರ್ವ ಅಮಾಯಕನ ಜೀವ ಹೋಗಿದ್ದರು ಕೂಡ ಆ ಬಗ್ಗೆ ಪಶ್ಚಾತಾಪವಿಲ್ಲದೇ ಶಿಮ್ಮಿತಾ ವರ್ತಿಸುತ್ತಿದ್ದಾಳೆ. ಮೃತ ದೀಪಕ್ ವಿರುದ್ಧವೇ ಆಕೆ ದೂರು ನೀಡಿದ್ದಾಳೆ. 'ಘಟನೆ ನಡೆದ ದಿನ ಬೆಳಗ್ಗೆ ನಾನು ಪಯ್ಯನ್ನೂರು ರೈಲು ನಿಲ್ದಾಣದಿಂದ ಬಸ್ ಹತ್ತಿದೆ. ಪಯ್ಯನ್ನೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ, ಓರ್ವ ವ್ಯಕ್ತಿ ನನ್ನನ್ನು ಅನುಚಿತವಾಗಿ ಮುಟ್ಟಿದನು. ಇದಾದ ನಂತರ, ನಾನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ' ಎಂದು ಶಿಮಿತಾ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಆದರೆ, ದೂರಿನಲ್ಲಿ, ಆ ವ್ಯಕ್ತಿಯ ಗುರುತನ್ನು ಆಕೆ ಬಹಿರಂಗಪಡಿಸಿಲ್ಲ.

ಆರೋಪಿ ಶಿಮ್ಜಿತಾ ಬಂಧನ

ಕೇರಳದ ವಡಕರದ ಮುತ್ತುಂಗಲ್ ಪಶ್ಚಿಮದಲ್ಲಿರುವ ತನ್ನ ಸಹೋದರಿಯ ಮನೆಯಲ್ಲಿದ್ದ ಆರೋಪಿ ಶಿಮ್ಮಿತಾ ಮುಸ್ತಫಾಳನ್ನು ಜನವರಿ 22ರಂದು ಕೇರಳ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆಕೆಯನ್ನು ರಿಮಾಂಡ್‌ನಲ್ಲಿ ಇಟ್ಟಿದ್ದಾರೆ. ಇದಕ್ಕೂ ಮುನ್ನ ದೀಪಕ್ ಅವರ ತಾಯಿ, ಶಿಮ್ಮಿತಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದೂರು ದಾಖಲಿಸಿದ್ದರು. ತನ್ನ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಶಿಮ್ಮಿತಾ ತಲೆಮರೆಸಿಕೊಂಡಿದ್ದಳು. ಆಕೆಗೆ ವಿದೇಶಿ ಸಂಪರ್ಕಗಳು ಇದ್ದ ಕಾರಣ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಆದರೆ, ವಡಕರದಲ್ಲಿದ್ದಾರೆ ಎಂಬ ಸುಳಿವು ದೊರೆತ ನಂತರ ಆಕೆಯನ್ನು ಬಂಧಿಸಲಾಯಿತು.

ಬಳಿಕ, ಕೊಯಿಲಾಂಡಿ ತಾಲೂಕು ಆಸ್ಪತ್ರೆಯಲ್ಲಿ ಶಿಮ್ಜಿತಾಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕುನ್ನಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನಂತರ ಆಕೆಯನ್ನು 14 ದಿನಗಳ ಕಾಲ ಮಂಜೇರಿ ಮಹಿಳಾ ಜೈಲಿಗೆ ಕಳುಹಿಸಲಾಗಿದೆ. ಇದರ ನಡುವೆ ಜಾಮೀನಿಗಾಗಿ ಅರ್ಜಿ ದಾಖಲಿಸಿದ್ದಳು. ಆದರೆ, ಅರ್ಜಿಯನ್ನು ತಿರಸ್ಕರಿಸಲಾಗಿದೆ. ವೀವ್ಸ್‌ ಹುಚ್ಚಿಗೆ ಅಮಾಯಕನ ಜೀವ ಬಲಿ ಪಡೆದ ಆಕೆಗೆ ತಕ್ಕ ಶಾಸ್ತಿ ಆಗಲೇಬೇಕು ಎಂದು ಸೋಷಿಯಲ್ ಮೀಡಿಯಾಗಲಲ್ಲಿ ಕಾಮೆಂಟ್‌ಗಳು ಹರಿದುಬರುತ್ತಿವೆ.