ಹಿಂದುಗಳ ಭಾವನೆಗೆ ಧಕ್ಕೆ ಉಂಟಾಗುವಂತೆ ಪೋಸ್ಟ್ ಮಾಡಿದ್ದ ನಟ ಚೇತನ್ 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದರು. ಇಂದು ಜಾಮೀಜು ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು (ಮಾ.23): ಕಳೆದ ಎರಡು ದಿನಗಳ ಹಿಂದೆ ಹಿಂದುಗಳ ಭಾವನೆಗೆ ಧಕ್ಕೆ ಉಂಟಾಗುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದ ನಟ ಚೇತನ್ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆದರೆ, ಇಂದು 32ನೇ ಮೆಟ್ರೋ ಪಾಲಿಟಿನ್ ನ್ಯಾಯಾಲಯ ನಟ ಚೇತನ್ ಅವರಿಗೆ ಈಗ ಜಾಮೀನು ನೀಡಿದೆ.
ಕಳೆದ ಎರಡು ದಿನಗಳ ಹಿಂದೆ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಬಂಧಿತನಾಗಿದ್ದ ನಟ ಚೇತನ್ ಗೆ 32ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇನ್ನು ಜಾಮೀನು ಪಡೆಯುವ ಮುನ್ನ 25 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಒಬ್ಬರ ಭದ್ರತೆ ನೀಡುವಂತೆ ನ್ಯಾಯಾಧೀಶೆ ಲತಾ ಅವರು ಆದೇಶಿಸಿದ್ದಾರೆ. ಈ ಮೂಲಕ ಎರಡು ದಿನಗಳ ಕಾಲ ಜೈಲು ವಾಸವನ್ನು ಅನುಭವಿಸಿದ್ದ ನಟ ಚೇತನ್ ಇಂದು ಹೊರಗೆ ಬಂದಿದ್ದಾರೆ.
ನಟ ಚೇತನ್ 14 ದಿನ ನ್ಯಾಯಾಂಗ ಬಂಧನ: ಹಿಂದುತ್ವ ವಿರೋಧಿಗೆ ಪೋಸ್ಟ್‌ಗೆ ಜೈಲೂಟ ಫಿಕ್ಸ್
ಸುಳ್ಳಿನ ಆಧಾರದಲ್ಲಿ ಹಿಂದುತ್ವ ಸೃಷ್ಟಿ: ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿಕೊಂಡು ಅದಕ್ಕೊಂದು ಫೋಟೋವನ್ನು ಕೂಡ ಹಂಚಿಕೊಂಡಿದ್ದರು. ಜೊತೆಗೆ, ಉರಿಗೌಡ ಮತ್ತು ನಂಜೇಗೌಡ ಬಗ್ಗೆ ಟ್ವೀಟ್ ಮಾಡಿಕೊಂಡಿದ್ದರು. ಇನ್ನು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ ಬೆನ್ನಲ್ಲೇ ಶಿವಕುಮಾರ್ ಎಂಬುವರು ಶೇಷಾದ್ರಿಪುರ ಠಾಣೆಗೆ ದೂರು ದಾಖಲಿಸಿದ್ದರು. ಹೀಗೆ, ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಶೇಷಾದ್ರಿಪುರ ಠಾಣೆ ಪೊಲೀಸರು ನಟ ಅಹಿಂಸಾ ಚೇತನ್ ಅವರನ್ನು ಬಂಧಿಸಿದ್ದರು. ನಂತರ ಅವರನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಮಂಗಳವಾರ ಕೋರ್ಟ್ ಕರೆದೊಯ್ದಿದ್ದರು.
ಈ ವೇಳೆ ವಿಚಾರಣೆ ನಡೆಸಿದ್ದ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತ್ತು. ಆದರೆ, ಈ ವೇಳೆ ಆ ಚೇತನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯನ್ನು ತಕ್ಷಣವೇ ವಿಚಾರಣೆ ಮಾಡದ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿತ್ತು. ಇಂದು ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಾಲಯ, ಜಾಮೀನು ಮಂಜೂರು ಮಾಡಿ ಆದೇಶವನ್ನು ಗಹೊರಡಿಸಿದೆ.
ನಟ ಅಹಿಂಸಾ ಚೇತನ್ ಬಂಧನ: ಹಿಂದುತ್ವದ ವಿರುದ್ಧ ಕೆಟ್ಟದಾಗಿ ಪೋಸ್ಟ್
ಪೋಸ್ಟ್‌ನಲ್ಲಿ ಏನಿತ್ತು?
- ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ: ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದುರಿಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು- ಇದೊಂದು ಸುಳ್ಳು.
- 1992ರಲ್ಲಿ: ಬಾಬರಿ ಮಸೀದಿ ರಾಮನ ಜನ್ಮಭೂಮಿ- ಇದು ಒಂದು ಸುಳ್ಳು.
- ಈಗ 2023ರಲ್ಲಿ: ಉಡಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು.
- ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು- ಸತ್ಯವೇ ಸಮಾನತೆ ಎಂದು ಬರೆದುಕೊಂಡಿದ್ದರು.
