ಹಾಡಹಗಲೇ ನಡು ರಸ್ತೆಯಲ್ಲಿ ಇಬ್ಬರು ದುಷ್ಕರ್ಮಿಗಳು ದ್ವಿಚಕ್ರ ವಾಹನ ಸವಾರನ ಅಡ್ಡಗಟ್ಟಿಮಾರಕಾಸ್ತ್ರ ತೋರಿಸಿ ಸುಲಿಗೆ ಮಾಡಿರುವ ಘಟನೆ ಜೆ.ಸಿ.ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಲಿಗೆ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಬೆಂಗಳೂರು (ಆ.4) :  ಹಾಡಹಗಲೇ ನಡು ರಸ್ತೆಯಲ್ಲಿ ಇಬ್ಬರು ದುಷ್ಕರ್ಮಿಗಳು ದ್ವಿಚಕ್ರ ವಾಹನ ಸವಾರನ ಅಡ್ಡಗಟ್ಟಿಮಾರಕಾಸ್ತ್ರ ತೋರಿಸಿ ಸುಲಿಗೆ ಮಾಡಿರುವ ಘಟನೆ ಜೆ.ಸಿ.ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಲಿಗೆ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಬುಧವಾರ ಮಧ್ಯಾಹ್ನ 2.36ರ ಸುಮಾರಿಗೆ ವಿಲಿಯಮ್ಸ್‌ ಟೌನ್‌ನಲ್ಲಿ ಈ ಘಟನೆ ನಡೆದಿದೆ. ಸುಲಿಗೆಗೆ ಒಳಗಾದ ಭೂಪಸಂದ್ರ ನಿವಾಸಿ ನವೀದ್‌ ಎಂಬುವವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿರುವ ಜೆ.ಸಿ.ನಗರ ಠಾಣೆ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Bengaluru: ಯೂಟ್ಯೂಬ್‌ ಚಾನಲ್‌ ಆರಂಭಿಸಿ ದಂಧೆ, ಮಾಂಸದಂಗಡಿಗಳಲ್ಲಿ ಹಫ್ತಾ ವಸೂಲಿ: 4 ಪತ್ರಕರ್ತರ ಸೆರೆ

ಬಿಹಾರ ಮೂಲದ ನವೀದ್‌ ನಗರದ ಭೂಪಸಂದ್ರದಲ್ಲಿ ನೆಲೆಸಿದ್ದು, ಬಟ್ಟೆವ್ಯಾಪಾರ ಮಾಡುತ್ತಾರೆ. ಬುಧವಾರ ಮಧ್ಯಾಹ್ನ ದ್ವಿಚಕ್ರ ವಾಹನದಲ್ಲಿ ಬಟ್ಟೆಬಂಡಲ್‌ ಇರಿಸಿಕೊಂಡು ವಿಲಿಮಯ್‌್ಸ ಟೌನ್‌ನಲ್ಲಿ ಹೋಗುವಾಗ, ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ಬಂದಿರುವ ಇಬ್ಬರು ದುಷ್ಕರ್ಮಿಗಳು, ಏಕಾಏಕಿ ನವೀದ್‌ ಅವರನ್ನು ಅಡ್ಡಗಟ್ಟಿಮಾರಕಾಸ್ತ್ರ ತೋರಿಸಿ, ಮೊಬೈಲ್‌ ಹಾಗೂ ಪರ್ಸ್‌ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸುಲಿಗೆ ಘಟನೆ ಕಟ್ಟಡವೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಜೆ.ಸಿ.ನಗರ ಠಾಣೆ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕೆ ಶೋಧಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹನಿಟ್ರ್ಯಾಪ್‌ ಮಾಡಿ 30 ಜನರಿಗೆ 30 ಲಕ್ಷ ಟೋಪಿ: ಮೂವರ ಬಂಧನ