Asianet Suvarna News Asianet Suvarna News

ಮೇಲ್ಜಾತಿಯವರ ನೀರಿನ ಮಡಿಕೆ ಮುಟ್ಟಿದ್ದಕ್ಕೆ ದಲಿತ ವಿದ್ಯಾರ್ಥಿಯ ಹಲ್ಲೆ: ಬಾಲಕ ಸಾವು

ದಲಿತ ವಿದ್ಯಾರ್ಥಿ ಮೇಲ್ಜಾತಿಯವರು ಬಳಸುವ ಮಡಿಕೆಯನ್ನು ಮುಟ್ಟಿದ ಎಂಬ ಕಾರಣಕ್ಕೆ ಶಿಕ್ಷಕ ಆತನ ಮೇಲೆ ನಿರ್ದಯವಾಗಿ ಥಳಿಸಿದ್ದಾರೆ ಎಂದು ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಬಾಲಕ ಶನಿವಾರ ಮೃತಪಟ್ಟಿದ್ದಾನೆ.

dalit boy beaten to death for touching pot meant for upper caste people in rajasthan jalore ash
Author
Bangalore, First Published Aug 14, 2022, 2:59 PM IST

ದೇಶ ಈಗ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ಸ್ವಾತಂತ್ರ್ಯ ಬಂದು 75 ವರ್ಷ ತುಂಬುತ್ತಿದೆ. ಆದರೂ, ಜಾತಿ - ಜಾತಿ ನಡುವಿನ ವೈಷಮ್ಯ, ಧರ್ಮಗಳ ನಡುವಿನ ಸಂಘರ್ಷ ಇನ್ನೂ ಮರೆಯಾಗಿಲ್ಲ ಎನ್ನುವುದಕ್ಕೆ ಈ ಸ್ಟೋರಿ ಒಂದು ಉತ್ತಮ ಉದಾಹರಣೆ. ಮೇಲ್ಜಾತಿಯ ಜನರಿಗೆ ಮೀಸಲಾದ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ದಲಿತ ಬಾಲಕನನ್ನು ನಿರ್ದಯವಾಗಿ ಥಳಿಸಲಾಗಿದೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಅಲ್ಲದೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ಮೇಲ್ಜಾತಿಯ ಜನರಿಗೆ ಮೀಸಲಾದ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕಾಗಿ ಶಿಕ್ಷಕರು ನಿರ್ದಯವಾಗಿ ಥಳಿಸಿದ್ದಾರೆ ಎಂದು ಶನಿವಾರ ಅಹಮದಾಬಾದ್‌ ಆಸ್ಪತ್ರೆಯಲ್ಲಿ ಮೃತಪಟ್ಟ ರಾಜಸ್ಥಾನದ 9 ವರ್ಷದ ದಲಿತ ಬಾಲಕನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಮೃತ ಬಾಲಕನನ್ನು ಇಂದ್ರ ಮೇಘವಾಲ್ ಎಂದು ಗುರುತಿಸಲಾಗಿದ್ದು, ಜಾಲೋರ್‌ನ ಸುರಾನಾ ಗ್ರಾಮದ ಸರಸ್ವತಿ ವಿದ್ಯಾ ಮಂದಿರದಲ್ಲಿ ಮೂರನೇ ತರಗತಿಯಲ್ಲಿ ಓದುತ್ತಿತ್ತು ಎಂದು ತಿಳಿದುಬಂದಿದೆ. ಇನ್ನು, ಆರೋಪಿ ಶಿಕ್ಷಕನನ್ನು ಜಾಲೋರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಿಜ್ಬುಲ್‌ ಮುಖ್ಯಸ್ಥನ ಮಗ, ಬಿಟ್ಟಾ ಕರಾಟೆ ಪತ್ನಿ ಸೇರಿ 4 ಉದ್ಯೋಗಿಗಳನ್ನು ವಜಾ ಮಾಡಿದ ಜಮ್ಮು ಕಾಶ್ಮೀರ ಸರ್ಕಾರ

ಈ ಸಂಬಂಧ ಮಾಹಿತಿ ನೀಡಿದ ಪೊಲೀಸರು, ಆರೋಪಿ ಶಿಕ್ಷಕ ಚೈಲ್ ಸಿಂಗ್ (40) ಅವರನ್ನು ಬಂಧಿಸಲಾಗಿದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಮಧ್ಯೆ, ಬಾಲಕನ ಸಾವಿನಿಂದ ಅಶಾಂತಿಯ ಭಯದಿಂದ ಜಾಲೋರ್‌ನಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಈ ಘಟನೆಯನ್ನು ಖಂಡಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತ್ವರಿತ ತನಿಖೆಗಾಗಿ ಕೇಸ್ ಆಫೀಸರ್ ಸ್ಕೀಮ್ ಅಡಿಯಲ್ಲಿ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.  “ಜಾಲೋರ್‌ನ ಸೈಲಾ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರ ಹಲ್ಲೆಯಿಂದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವುದು ದುರಂತ. ಆರೋಪಿ ಶಿಕ್ಷಕನ ವಿರುದ್ಧ ಕೊಲೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ’’ ಎಂದು ಗೆಹ್ಲೋಟ್ ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ. 5 ಲಕ್ಷ ಪರಿಹಾರ ಘೋಷಿಸಲಾಗಿದೆ.

ಜುಲೈ 20 ರಂದು ರಾಜಸ್ಥಾನದ ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಯಲ್ಲಿ ನೀರಿನ ಮಡಿಕೆಯನ್ನು ಮುಟ್ಟಿದ್ದಕ್ಕಾಗಿ ಶಿಕ್ಷಕ ಅಪ್ರಾಪ್ತ ಬಾಲಕನನ್ನು ಥಳಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಗೂ, ಬಾಲಕನನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ನಂತರ ಆತನನ್ನು ಉದಯಪುರದಲ್ಲಿ ಸುಮಾರು ಒಂದು ವಾರ ಚಿಕಿತ್ಸೆ ನೀಡಿದರು. ನಂತರ  ಅಹಮದಾಬಾದ್‌ಗೆ ಕರೆದೊಯ್ಯಲಾಯಿತು, ಆದರೆ ಅವನ ಸ್ಥಿತಿ ಹದಗೆಡುತ್ತಲೇ ಇತ್ತು ಮತ್ತು ಅಂತಿಮವಾಗಿ ವಿದ್ಯಾರ್ಥಿ ಶನಿವಾರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೊಂದೆಡೆ, ಮೃತ ಬಾಲಕನ ಮುಖ ಹಾಗೂ ಕಿವಿಗೆ ಗಂಭೀರ ಗಾಯಗಳಾಗಿವೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ನಿದ್ರೆ ಹಾಳು ಮಾಡಿದ್ದಕ್ಕೆ 1.5 ವರ್ಷದ ಕಂದಮ್ಮನನ್ನು ಕತ್ತು ಹಿಸುಕಿ ಕೊಂದ ಪಾಪಿ ತಂದೆ..!

ಆದರೆ, ಬಾಲಕ ಮಣ್ಣಿನ ಮಡಿಕೆ ಮೇಲೆ ಕೈ ಹಾಕಿದ್ದರಿಂದ ಈ ಘಟನೆ ನಡೆದಿದೆಯೇ ಎಂಬುದನ್ನು ಜಾಲೋರ್ ಎಸ್ಪಿ ಹರ್ಷವರ್ಧನ್ ಅಗರ್ವಾಲ್ ಖಚಿತಪಡಿಸಿಲ್ಲ. ಶಾಲೆಯಲ್ಲಿ ನೀರು ಕುಡಿಯಲು ಟ್ಯಾಂಕ್ ಇದ್ದು, ಅದರ ನಲ್ಲಿಯನ್ನೇ ಎಲ್ಲರೂ ಬಳಸುತ್ತಾರೆ ಎಂದೂ ಅವರು ಹೇಳಿದ್ದಾರೆ. 

ರಾಜಸ್ಥಾನದ ವಿರೋಧ ಪಕ್ಷದ ಉಪನಾಯಕ ರಾಜೇಂದ್ರ ರಾಥೋಡ್ ಈ ಘಟನೆಯನ್ನು ಖಂಡಿಸಿದ್ದು, ಶಿಕ್ಷಕನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Follow Us:
Download App:
  • android
  • ios