Asianet Suvarna News Asianet Suvarna News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಇಂದು ದರ್ಶನ್‌ ಪರಪ್ಪನ ಅಗ್ರಹಾರ ಜೈಲಿಗೆ?

ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ನಗರದ ಎಸಿಎಂಎಂ ನ್ಯಾಯಾಲಯಕ್ಕೆ ದರ್ಶನ್ ಹಾಗೂ ಅವರ ಆಪ್ತರಾದ ವಿನಯ್‌, ಪ್ರದೂಷ್‌ ಹಾಗೂ ಧನರಾಜ್‌ರನ್ನು ಶನಿವಾರ ಹಾಜರುಪಡಿಸಲಾಗುತ್ತದೆ. ಈಗಾಗಲೇ ಪ್ರಕರಣದ ತನಿಖೆ ಸಲುವಾಗಿ ಮೂರು ಬಾರಿ ವಶಕ್ಕೆ ಪಡೆದಿರುವ ಕಾರಣ ಮತ್ತೊಮ್ಮೆ ಆರೋಪಿಗಳನ್ನು ಪೊಲೀಸರು ಸುಪರ್ದಿಗೆ ಪಡೆಯುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೊಳಗಾಗದರೆ ದರ್ಶನ್‌ ಗ್ಯಾಂಗ್ ಅಂತಿಮವಾಗಿ ಜೈಲು ಸೇರಲಿದೆ.

Darshan is Almost Certain Go to Parappana Agrahara Jail in Bengaluru grg
Author
First Published Jun 22, 2024, 4:40 AM IST

ಬೆಂಗಳೂರು(ಜೂ.22):  ಕಳೆದ 12 ದಿನಗಳಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ.

ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ನಗರದ ಎಸಿಎಂಎಂ ನ್ಯಾಯಾಲಯಕ್ಕೆ ದರ್ಶನ್ ಹಾಗೂ ಅವರ ಆಪ್ತರಾದ ವಿನಯ್‌, ಪ್ರದೂಷ್‌ ಹಾಗೂ ಧನರಾಜ್‌ರನ್ನು ಶನಿವಾರ ಹಾಜರುಪಡಿಸಲಾಗುತ್ತದೆ. ಈಗಾಗಲೇ ಪ್ರಕರಣದ ತನಿಖೆ ಸಲುವಾಗಿ ಮೂರು ಬಾರಿ ವಶಕ್ಕೆ ಪಡೆದಿರುವ ಕಾರಣ ಮತ್ತೊಮ್ಮೆ ಆರೋಪಿಗಳನ್ನು ಪೊಲೀಸರು ಸುಪರ್ದಿಗೆ ಪಡೆಯುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೊಳಗಾಗದರೆ ದರ್ಶನ್‌ ಗ್ಯಾಂಗ್ ಅಂತಿಮವಾಗಿ ಜೈಲು ಸೇರಲಿದೆ.

ದರ್ಶನ್ ನಿರ್ಮಾಪಕರಿಗೆ ನಷ್ಟ ಸಂಕಷ್ಟ: 14 ಸಿನಿಮಾ 30 ಕೋಟಿ ಅಡ್ವಾನ್ಸ್ ಕತೆಯೇನು?

ನ್ಯಾಯಾಲಯದ ಮುಂದೆ ಗುರುವಾರ ದರ್ಶನ್‌ ಸೇರಿದಂತೆ ನಾಲ್ವರನ್ನು ಹಾಜರುಪಡಿಸಿ ಮತ್ತೆರೆಡು ದಿನ ಕಸ್ಟಡಿಗೆ ಪೊಲೀಸರು ಪಡೆದಿದ್ದರು. ಈ ಅವಧಿ ಮುಕ್ತಾಯವಾಗುವ ಹಿನ್ನಲೆಯಲ್ಲಿ ಅವರನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಇನ್ನು ಕಾನೂನಿನಲ್ಲಿ ಕೂಡ ಮತ್ತೆ ಕಸ್ಟಡಿಗೆ ಪಡೆಯಲು ಪೊಲೀಸರಿಗೆ ಅ‍ವಕಾಶವಿಲ್ಲ ಎನ್ನಲಾಗಿದೆ.

ಇನ್ನು ಈಗಾಗಲೇ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್‌ ಪ್ರಿಯತಮೆ ಪವಿತ್ರಾಗೌಡ ಸೇರಿದಂತೆ 13 ಆರೋಪಿಗಳು ಸೆರೆಮನೆ ವಾಸ ಶುರುವಾಗಿದೆ. ಹೀಗಾಗಿ ಬಾಕಿ ಉಳಿದಿರುವ ದರ್ಶನ್ ಸೇರಿ ನಾಲ್ವರು ಸಹ ಶನಿವಾರ ಸಂಜೆ ವೇಳೆಗೆ ಪೊಲೀಸ್ ಠಾಣೆಯ ಲಾಕಪ್‌ನಿಂದ ಸೆಂಟ್ರಲ್ ಜೈಲ್‌ನ ಕತ್ತಲ ಕೋಣೆಗೆ ಸ್ಥಳಾಂತರವಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್‌ಸ್ಟಾಗ್ರಾಂನಲ್ಲಿ ತಮ್ಮ ಪ್ರಿಯತಮೆ ಪವಿತ್ರಾಗೌಡಳಿಗೆ ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಕ್ರೂರವಾಗಿ ಹಲ್ಲೆ ನಡೆಸಿ ಕೊಂದ ಆರೋಪದ ಮೇರೆಗೆ ನಟ ದರ್ಶನ್ ಹಾಗೂ ಅವರ 16 ಮಂದಿ ಸಹಚರರನ್ನು ಪೊಲೀಸರು ಬಂಧಿಸಿದ್ದರು.

Latest Videos
Follow Us:
Download App:
  • android
  • ios