ಹುಬ್ಬಳ್ಳಿ(ನ.20): ಬಸ್‌ ನಿಲ್ದಾಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ ಸಾರ್ವಜನಿಕರು ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇಲ್ಲಿನ ಚೇತನಾ ಕಾಲೇಜ್‌ ಬಳಿಯಿರುವ ಬಸ್‌ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಸುಮಾರು 40 ವರ್ಷ ವಯಸ್ಸಿನ ವ್ಯಕ್ತಿಯಾಗಿರುವ ಈತ, ಜೀನ್ಸ್‌ ಪ್ಯಾಂಟ್‌, ಟೀ ಶರ್ಟ್‌ ಧರಿಸಿದ್ದಾನೆ. 

ಆನ್‌ಲೈನ್ ಕ್ರೆಡಿಟ್ ಆಪ್ ಸಾಲ ತೀರಿಸಲಾಗದೆ ನೇಣಿಗೆ ಶರಣಾದ ಯುವತಿ

ಬೆಳಿಗ್ಗೆ ಈ ರಸ್ತೆಯಲ್ಲಿ ವಾಯುವಿಹಾರಕ್ಕೆ ತೆರಳುವವರು ಈತನ ಶವ ನೋಡಿ ಆಘಾತಕ್ಕೊಳಗಾಗಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದು ಆತ್ಮಹತ್ಯೆಯೋ ಕೊಲೆಯೋ ಎಂಬ ಅನುಮಾನ ಮೂಡಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಗೋಕುಲ ರಸ್ತೆ ಠಾಣೆಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.