ತನ್ನ ಮನೆ ಪಕ್ಕದ ನಿರ್ಮಾಣ ಹಂತದ ಕಟ್ಟಡದ ಆವರಣದಲ್ಲಿನ ತೆರೆದ ನೀರಿನ ಸಂಪ್‌ಗೆ ಆಕಸ್ಮಿಕವಾಗಿ ಬಿದ್ದು 14 ವರ್ಷದ ಬುದ್ಧಿಮಾಂದ್ಯ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು (ಜೂ.29): ತನ್ನ ಮನೆ ಪಕ್ಕದ ನಿರ್ಮಾಣ ಹಂತದ ಕಟ್ಟಡದ ಆವರಣದಲ್ಲಿನ ತೆರೆದ ನೀರಿನ ಸಂಪ್‌ಗೆ ಆಕಸ್ಮಿಕವಾಗಿ ಬಿದ್ದು 14 ವರ್ಷದ ಬುದ್ಧಿಮಾಂದ್ಯ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಡೇರಹಳ್ಳಿಯ ಮುನೇಶ್ವರ ಬಡಾವಣೆ ನಿವಾಸಿ ಸಾಯಿ ಚರಣ್‌ (14) ಮೃತ ದುರ್ದೈವಿ. ತನ್ನ ಮನೆ ಪಕ್ಕದ ನಿರ್ಮಾಣದ ಮನೆ ಕಟ್ಟಡದ ನೀರಿನ ಸಂಪ್‌ಗೆ ಸಂಜೆ 5.30ರ ಸುಮಾರಿಗೆ ಬಿದ್ದು ಸಾಯಿ ಮೃತಪಟ್ಟಿದ್ದು, ಕೆಲ ಹೊತ್ತಿನ ಬಳಿಕ ಮಗುವಿಗಾಗಿ ಪೋಷಕರು ಹುಡುಕಾಡಿದಾಗ ನೀರಿನ ಸಂಪ್‌ನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಟೈಲರ್‌ ರಾಜು ಅವರು, ಮುನೇಶ್ವರ ಬಡಾವಣೆಯಲ್ಲಿ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳ ಜತೆ ನೆಲೆಸಿದ್ದರು. ಅವರ ಕಿರಿಯ ಪುತ್ರ ಚರಣ್‌ ಬುದ್ಧಿಮಾಂದ್ಯನಾಗಿದ್ದು, ಹಲವು ಕಡೆ ವೈದ್ಯಕೀಯ ಚಿಕಿತ್ಸೆ ಕೊಡಿಸಿದರೂ ಆರೋಗ್ಯ ಸುಧಾರಣೆ ಕಂಡಿರಲಿಲ್ಲ. ಮನೆಯಲ್ಲಿ ತಾಯಿ ಇದ್ದಾಗ ಹೊರಗೆ ಬಂದ ಆತ, ಆಟವಾಡುತ್ತ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ಕಟ್ಟಡದ ಬಳಿಗೆ ತೆರಳಿದ್ದಾನೆ. ಆ ವೇಳೆ ಆಕಸ್ಮಿಕವಾಗಿ ತೆರೆದ ನೀರಿನ ಸಂಪ್‌ಗೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Bengaluru: ಸಾಲ ಕಟ್ಟದ್ದಕ್ಕೆ ಮಹಿಳೆಯ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ

ಪತ್ನಿ, ಮಗುವನ್ನು ಕೊಂದ ಆರೋಪ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿವಗಂಗೆ ಬೆಟ್ಟದ ಮೇಲಿಂದ ಪತ್ನಿ ಮತ್ತು ಮೂರು ತಿಂಗಳ ಮಗುವನ್ನು ತಳ್ಳಿ ಕೊಲೆ ಮಾಡಿದ ಆರೋಪದಿಂದ ವ್ಯಕ್ತಿಯೊಬ್ಬರನ್ನು ಖುಲಾಸೆಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ತುಮಕೂರಿನ ನಿವಾಸಿ ಗಿರೀಶ್‌ (28) ಎಂಬುವರನ್ನು ಖುಲಾಸೆಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಹೊರಡಿಸಿದ್ದ ಆದೇಶ ರದ್ದು ಕೋರಿ ರಾಜ್ಯ ಸರ್ಕಾರ (ದಾಬಸ್‌ಪೇಟೆ ಠಾಣಾ ಪೊಲೀಸರು) ಹೈಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ. 

ಆರೋಪಿ ಗಿರೀಶ್‌ ತನ್ನ ಪತ್ನಿ ಹಾಗೂ ಮೂರು ತಿಂಗಳ ಮಗುವನ್ನು ಬೆಟ್ಟದ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾರೆ ಎಂಬ ಆರೋಪವನ್ನು ಸಾಕ್ಷ್ಯಧಾರಗಳ ಸಮೇತ ಸಾಬೀತುಪಡಿಸಲು ಪೊಲೀಸರು ವಿಫಲರಾಗಿದ್ದಾರೆ. ಪೊಲೀಸರು ಒದಗಿಸಿರುವ ಸಾಕ್ಷ್ಯಗಳು ಒಂದೊಕ್ಕೊಂದು ತದ್ವಿರುದ್ಧವಾಗಿದೆ. ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿಗಳೇ ಇಲ್ಲ. ಸಾಂದರ್ಭಿಕ ಸಾಕ್ಷ್ಯಗಳು ಸಹ ನಂಬಲಾರ್ಹವಾಗಿಲ್ಲ. ಹಾಗಾಗಿ, ಗಿರೀಶ್‌ನನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಕ್ರಮ ಸೂಕ್ತವಾಗಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಅಭಿಪ್ರಾಯಪಟ್ಟಿತು.

ಬಾಗಲಕೋಟೆ: ಊಟ, ಒಳ ಉಡುಪುಗಳನ್ನು ಕದಿಯೋದೆ ಈ ಖದೀಮನ ಟಾರ್ಗೆಟ್‌..!

ಅನೈತಿಕ ಸಂಬಂಧ ಶಂಕಿಸಿ ಪತ್ನಿಯ ತಲೆ ಕಡಿದು ಬೇರ್ಪಡಿಸಿದ ಪತಿ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ತನ್ನ ಪತ್ನಿಯ ರುಂಡ- ಮುಂಡ ಬೇರ್ಪಡಿಸಿ ಭೀಕರವಾಗಿ ಕೊಲೆಗೈದಿರುವ ಘಟನೆ ಮೈಸೂರು ತಾಲೂಕಿನ ಚೆಟ್ಟನಹಳ್ಳಿಯಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ಪುಟ್ಟಮ್ಮ (40) ಕೊಲೆಯಾದವರು. ಪತಿ ದೇವರಾಜ್‌ ಹತ್ಯೆ ಮಾಡಿದ ಆರೋಪಿ. ಪುಟ್ಟಮ್ಮ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ನಿತ್ಯ ಜಗಳವಾಡುತ್ತಿದ್ದ ದೇವರಾಜ್‌ ಹಲವು ಬಾರಿ ಹಲ್ಲೆ ಮಾಡಿದ್ದ. ದೇವರಾಜ್‌ ತನ್ನ ಮೊದಲ ಪತ್ನಿಯನ್ನೂ ಕೊಲೆ ಮಾಡಲು ಯತ್ನಿಸಿ ಜೈಲುವಾಸ ಅನುಭವಿಸಿದ್ದ. ಮೊದಲ ಪತ್ನಿಯಿಂದ ಬೇರ್ಪಟ್ಟಬಳಿಕ 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನು 2ನೇ ವಿವಾಹವಾಗಿದ್ದ. 20 ವರ್ಷದ ಮಗಳಿದ್ದರೂ ಪತ್ನಿ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಸೋಮವಾರ ರಾತ್ರಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ದೇವರಾಜ, ಮಚ್ಚಿನಿಂದ ಕತ್ತು ಕತ್ತರಿಸಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.