Chamarajanagar: ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಸಾಲಭಾದೆ ತಾಳಲಾರದೆ ರೈತನೊರ್ವ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮಹದೇವೇಗೌಡ 50 ಎಂಬ ರೈತ ಬೆಳಗ್ಗೆ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. 

debt ridden farmer commits suicide in chamarajanagar gvd

ಚಾಮರಾಜನಗರ (ಜ.06): ಸಾಲಭಾದೆ ತಾಳಲಾರದೆ ರೈತನೊರ್ವ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮಹದೇವೇಗೌಡ 50 ಎಂಬ ರೈತ ಬೆಳಗ್ಗೆ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಂಗೂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ರೈತ ಮಹಾದೇವೇಗೌಡ ರಂಗೂಪುರದ ಪಿಎಸಿಸಿ ಬ್ಯಾಂಕ್, ಸ್ವ ಸಹಾಯ ಸಂಘ ಸೇರಿದಂತೆ ಹಲವೆಡೆ ಮೂರು ಲಕ್ಷ ರೂ.ನಷ್ಟು ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನೂ ಪ್ರಕರಣ ದಾಖಲಾಗಿಲ್ಲ.

ಸಾಲದಿಂದ ಬೇಸತ್ತು ರೈತ ಆತ್ಮಹತ್ಯೆ: ವಡೂರು ಗ್ರಾಮದಲ್ಲಿ ರೈತ ಆತ್ಮಹತ್ಯೆಸಾಲದ ಬಾಧೆ ತಾಳಲಾರದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆಳಗೋಡು ಹೋಬಳಿ ಕುನಿಗನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಡೂರು ಗ್ರಾಮದಲ್ಲಿ ಸಂಭವಿಸಿದೆ. ಹೊನ್ನಪ್ಪ (58) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ರೈತ ಹೊನ್ನಪ್ಪ ರಾಷ್ಟ್ರೀಕೃತ ಬ್ಯಾಂಕಿನಲ್ಲಿ 3 ಲಕ್ಷಕ್ಕೂ ಹೆಚ್ಚು ಸಾಲವನ್ನು ಪಡೆದಿದ್ದರು ಹಾಗೂ ಸ್ಥಳೀಯವಾಗಿ 8 ಲಕ್ಷ ರುಪಾಯಿ ಸಾಲವನ್ನು ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. 

ವಿಚಾರಣೆಗೆ ಕರೆತಂದಿದ್ದ ಆರೋಪಿ ಅನುಮಾನಾಸ್ಪದ ಸಾವು: ಲಾಕಪ್‌ಡೆತ್‌ ಆರೋಪ

ಕಾಫಿ, ಮೆಣಸು ಹಾಗೂ ಅಡಿಕೆ ಸೇರಿದಂತೆ ಭತ್ತದ ಬೆಳೆಯನ್ನು ಬೆಳೆಯುತ್ತಿದ್ದರು. ಆದರೆ, ಇತ್ತೀಚಿಗೆ ಬಿದ್ದ ಅಕಾಲಿಕ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲ ಕಚ್ಚಿದ್ದು ಮತ್ತೊಂದೆಡೆ ಕಾಡಾನೆ ಹಾವಳಿಯಿಂದ ಭತ್ತ ಬೆಳೆಯುವುದನ್ನು ನಿಲ್ಲಿಸಿದರು. ಇತ್ತೀಚಿಗಷ್ಟೇ ಸಾಲವನ್ನು ತೀರಿಸುವಂತೆ ಬ್ಯಾಂಕಿನಿಂದ ನೋಟಿಸ್‌ ನೀಡಲಾಗಿತ್ತು. ಇದರಿಂದ ಸಾಲಕ್ಕೆ ಹೆದರಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷ ಸೇವಿಸಿ ರೈತ ಆತ್ಮಹತ್ಯೆ: ಕೃಷಿ ಚಟುವಟಿಕೆಗಳಿಗಾಗಿ ಬ್ಯಾಂಕ್‌ನಲ್ಲಿ ಸಾಲ ಪಡೆದುಕೊಂಡಿದ್ದ ರೈತ ರವಿ ದ್ಯಾವಣ್ಣ (28) ಸಕಾಲಕ್ಕೆ ಸಾಲ ಮರು ಪಾವತಿಸಲಾಗದೆ ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೊರ ಗ್ರಾಮದಲ್ಲಿ ಜರುಗಿದೆ.

ಗ್ರಾಹಕರ ಮೊಬೈಲ್‌ ಸಂಖ್ಯೆ ಬಳಸಿ ದೋಖಾ: ಆರೋಪಿಯ ಬಂಧನ

ರೈತ ರವಿ ಕೊರ ಗ್ರಾಮದ ಸೀಮಾದಲ್ಲಿರುವ ತನ್ನ ಹೊಲದಲ್ಲಿ ಉತ್ತಮ ಬೆಳೆ ಬೆಳೆಯಲು ಮಾನ್ವಿ ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ಕಳೆದ 4 ವರ್ಷಗಳ ಹಿಂದೆ ರು.6 ಲಕ್ಷ ಸಾಲ ಪಡೆದುಕೊಂಡಿದ್ದನು. ಸಾಲ ಮತ್ತು ಬಡ್ಡಿಯನ್ನು ಮರುಪಾವತಿ ಮಾಡದೆ ಡಿ.21 ರಂದು ಬೆಳಗ್ಗೆ ಹೊಲಕ್ಕೆ ಹೋಗುವುದಾಗಿ ಹೇಳಿ ಹೊಲದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಕುರಿತಂತೆ ಮೃತನ ಸಹೋದರ ಶಿವಪ್ಪ ನೀಡಿದ ದೂರಿನನ್ವಯ ಮಾನ್ವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Latest Videos
Follow Us:
Download App:
  • android
  • ios