ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ನಾಯಕನ ಭೀಕರ ಹತ್ಯೆ: ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು
ಸುರೇಂದರ್ ಮಟಿಯಾಲಾ ತನ್ನ ಕಚೇರಿಯೊಳಗೆ ಕುಳಿತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಶಸ್ತ್ರಾಸ್ತ್ರಗಳೊಂದಿಗೆ ಪ್ರವೇಶಿಸಿ ಅವರ ಮೇಲೆ ಗುಂಡು ಹಾರಿಸಿದರು. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇಬ್ಬರು ವ್ಯಕ್ತಿಗಳು ಅವರ ಕಚೇರಿಗೆ ನುಗ್ಗಿ ಇತರರ ಸಮ್ಮುಖದಲ್ಲಿ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ದೆಹಲಿ (ಏಪ್ರಿಲ್ 15, 2023): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಶುಕ್ರವಾರ ಸಂಜೆ ನಡೆದಿರುವ ಘಟನೆಯಲ್ಲಿ ದ್ವಾರಕಾ ಪ್ರದೇಶದಲ್ಲಿ ತನ್ನ ಕಚೇರಿಯಲ್ಲಿದ್ದ 60 ವರ್ಷದ ಬಿಜೆಪಿ ನಾಯಕ ಸುರೆಂದರ್ ಕುಮಾರ್ ಅಲಿಯಾಸ್ ಸುರೇಂದರ್ ಮಟಿಯಾಲಾ ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ನಜಾಫ್‌ಗಢ ಪ್ರದೇಶದಲ್ಲಿ ವಾಸ ಮಾಡುತ್ತಿದ್ದ ಇವರು ಬಿಜೆಪಿಯ ಕಿಸಾನ್ ಮೋರ್ಚಾ ಅಧ್ಯಕ್ಷರಾಗಿದ್ದರು. ಇನ್ನು, ದೆಹಲಿಯ ಬೀಮದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: Maharashtra Accident: ಕಮರಿಗೆ ಬಿದ್ದ ಬಸ್: 12 ಜನ ದುರ್ಮರಣ, 27 ಕ್ಕೂ ಹೆಚ್ಚು ಮಂದಿಗೆ ಗಾಯ
ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದ್ದು, ಈ ವೇಳೆ ಸುರೇಂದರ್ ಕುಮಾರ್ ತನ್ನ ಕಚೇರಿಯಲ್ಲೇ ಕುಳಿತಿದ್ದರು. ಆರೋಪಿಗಳನ್ನು ವಶಕ್ಕೆ ಪಡೆಯಲು ಹಲವಾರು ತಂಡಗಳನ್ನು ರಚಿಸಲಾಗಿದೆ. ಸದ್ಯ, ಈ ಹಂತದಲ್ಲಿ ಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ. ನಾವು ಎಲ್ಲ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದೇವೆ ಎಂದೂ ದ್ವಾರಕಾ ಪ್ರದೇಶದ ಡೆಪ್ಯುಟಿ ಕಮೀಷನರ್ ಆಫ್ ಪೊಲೀಸ್ ಎಂ. ಹರ್ಷವರ್ಧನ್ ತಿಳಿಸಿದ್ದಾರೆ.
ಅಲ್ಲದೆ, ಈ ಪ್ರದೇಶದ ಎಲ್ಲ ಸಿಸಿ ಕ್ಯಾಮೆರಾಗಳನ್ನು ಪೊಲೀಸ್ ತಂಡಗಳು ಪರಿಶೀಲನೆ ಮಾಡುತ್ತಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಹಾಗೂ, ತನಿಖೆ ಮುಂದುವರಿದಿದೆ ಎಂದೂ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬಾಯ್‌ಫ್ರೆಂಡ್ ಜತೆ ಸೆಕ್ಸ್‌ಚಾಟ್ ಬಹಿರಂಗ: ಮೊಬೈಲ್ ಕಸಿದುಕೊಂಡ ಸಿಟ್ಟಿಗೆ ಅತ್ತೆ - ಮಾವನನ್ನೇ ಹತ್ಯೆಗೈದ ಪಾಪಿ ಸೊಸೆ
ಘಟನೆಯ ವಿವರ..
ಸುರೇಂದರ್ ಮಟಿಯಾಲಾ ತನ್ನ ಕಚೇರಿಯೊಳಗೆ ಕುಳಿತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಶಸ್ತ್ರಾಸ್ತ್ರಗಳೊಂದಿಗೆ ಪ್ರವೇಶಿಸಿ ಅವರ ಮೇಲೆ ಗುಂಡು ಹಾರಿಸಿದರು. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇಬ್ಬರು ವ್ಯಕ್ತಿಗಳು ಅವರ ಕಚೇರಿಗೆ ನುಗ್ಗಿ ಇತರರ ಸಮ್ಮುಖದಲ್ಲಿ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಗುಂಡು ಹಾರಿಸಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮಟಿಯಾಲಾ ಅವರ ಎದೆ ಮತ್ತು ಹೊಟ್ಟೆ ಸೇರಿದಂತೆ ಅವರ ದೇಹದ ಮೇಲೆ ನಾಲ್ಕು ಬುಲೆಟ್ ಗಾಯಗಳಾಗಿವೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದೂ ದೆಹಲಿ ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ದೇವಸ್ಥಾನದ ಬಳಿ ಬಿರುಗಾಳಿಗೆ ಉರುಳಿದ ಬೃಹತ್ ಮರ: 7 ಭಕ್ತರು ಬಲಿ, 20 ಕ್ಕೂ ಹೆಚ್ಚು ಮಂದಿಗೆ ಗಾಯ
ಸುರೇಂದರ್ ಮಟಿಯಾಲ ಅವರು ಕೌನ್ಸಿಲರ್ ಚುನಾವಣೆಗೆ ಸ್ಪರ್ಧಿಸಿದ್ದರು ಮತ್ತು 2020 ರ ವಿಧಾನಸಭಾ ಚುನಾವಣೆಯಲ್ಲಿ ಮಟಿಯಾಲಾದಿಂದ ಬಿಜೆಪಿ ಅಭ್ಯರ್ಯೂ ಆಗಿದ್ದರು.
ಪೊಲೀಸ್ ತನಿಖೆಯಲ್ಲಿ ಹೇಳಿದ್ದೇನು:
ಆರೋಪಿಗಳ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಗಿದೆ ಎಂದು ದ್ವಾರಕಾ ಉಪ ಪೊಲೀಸ್ ಆಯುಕ್ತ ಎಂ. ಹರ್ಷವರ್ಧನ್ ತಿಳಿಸಿದ್ದಾರೆ. ಕೊಲೆಯ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ ಎಂದು ಹೇಳಿದ ಡಿಸಿಪಿ, "ನಾವು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದೇವೆ" ಎಂದು ಹೇಳಿದರು.
ಇದನ್ನೂ ಓದಿ: ಕುಡುಕ ಪತಿ ಕಾಟಕ್ಕೆ ಬೇಸತ್ತು 3 ಮಕ್ಕಳನ್ನು ನದಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡ್ಕೊಂಡ ಮಹಿಳೆ..!
ಘಟನೆಯ ವೇಳೆ ಸ್ಥಳದಲ್ಲಿದ್ದವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದ್ದು, ಅವರ ಕುಟುಂಬ ಸದಸ್ಯರು ಇದುವರೆಗೆ ಯಾರ ಮೇಲೂ ಅನುಮಾನ ವ್ಯಕ್ತಪಡಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು, ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ಗಳನ್ನು ಸಹ ಸೇರಿಸಲಾಗಿದೆ ಎಂದೂ ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.