Delhi Accident: 2 ಟ್ರಕ್‌ ನಡುವೆ ಸಿಲುಕಿ ನಜ್ಜುಗುಜ್ಜಾದ ಕಾರು: ಮಹಿಳೆ ಬಲಿ, ಮತ್ತೊಬ್ಬರ ಸ್ಥಿತಿ ಗಂಭೀರ

ಟ್ರಾಫಿಕ್ ಸಿಗ್ನಲ್‌ನಲ್ಲಿ ಮಾರುತಿ ಕಾರು ಚಾಲಕ ಟ್ರಕ್‌ನ ಹಿಂದೆ ನಿಲ್ಲಿಸಿದಾಗ, ಕಾರಿನ ಹಿಂದೆ ಬಂದ ಇನ್ನೊಂದು ಟ್ರಕ್‌ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದಲ್ಲಿ ಮಹಿಳೆ ಬಲಿಯಾಗಿದ್ದಾರೆ. 

delhi woman 22 dies after car gets crushed between two trucks ash

ದೆಹಲಿ (ಆಗಸ್ಟ್‌ 7, 2023): ರಾಷ್ಟ್ರ ರಾಜಧಾನಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಬಲಿಯಾಗಿದ್ದರೆ, ಮತ್ತೊಬ್ಬರು ತೀವ್ರ ಗಾಯಗೊಂಡಿದ್ದಾರೆ. 

ಟ್ರಾಫಿಕ್ ಸಿಗ್ನಲ್‌ನಲ್ಲಿ ಮಾರುತಿ ಕಾರು ಚಾಲಕ ಟ್ರಕ್‌ನ ಹಿಂದೆ ನಿಲ್ಲಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಾರು ನಿಲ್ಲಿಸಿದ ಬಳಿಕ ಹಿಂದಿನಿಂದ ಮತ್ತೊಂದು ಟ್ರಕ್ ಬಂದು ಕಾರಿಗೆ ಡಿಕ್ಕಿ ಹೊಡೆದಿದೆ. ಮೃತ ಮಹಿಳೆಯನ್ನು 22 ವರ್ಷದ ಅಮನ್‌ದೀಪ್ ಕೌರ್ ಎಂದು ಗುರುತಿಸಲಾಗಿದೆ. ಸಿಗ್ನಲ್‌ನಲ್ಲಿ ಎರಡು ಟ್ರಕ್‌ಗಳ ನಡುವೆ ಸಿಲುಕಿದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಸ್ಥಳದ ವಿಡಿಯೋ ತೋರಿಸುತ್ತದೆ. 

ಇದನ್ನು ಓದಿ: ಬಾಲಕಿ ಮೇಲೆ ಗ್ಯಾಂಗ್‌ರೇಪ್‌ ಮಾಡಿ ಸುಟ್ಟು ಕೊಂದ ಪಾಪಿಗಳು: ಮನನೊಂದ ತಂದೆ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನ

ಕಾರು ಚಲಾಯಿಸುತ್ತಿದ್ದವನನ್ನು ಹರ್ಮಿಂದರ್ ಸಿಂಗ್ ಎಂದು ಗುರುತಿಸಲಾಗಿದ್ದು, ತನ್ನ ಚಿಕ್ಕಮ್ಮ ಮತ್ತು ಅವರ ಸೋದರಸಂಬಂಧಿಗಳೊಂದಿಗೆ ಗುರುದ್ವಾರ ಸಿಸ್ ಗಂಜ್ ಸಾಹಿಬ್‌ನಿಂದ ತಿಮಾರ್‌ಪುರದ ನೆಹರು ವಿಹಾರ್‌ಗೆ ಪ್ರಯಾಣಿಸುತ್ತಿದ್ದರು. ಕಾರು ಚಲಾಯಿಸುತ್ತಿದ್ದವನ ಚಿಕ್ಕಮ್ಮ ಪುಷ್ಪಾ ಮತ್ತು ಅವರ ಮಗಳು ಅಮನ್‌ದೀಪ್‌ ಕೌರ್‌ ಹಿಂದಿನ ಸೀಟಿನಲ್ಲಿ ಕುಳಿತಿದ್ದರೆ, ಇನ್ನೊಬ್ಬ ಸೋದರಸಂಬಂಧಿ ಬಂಟಿ ಮುಂದಿನ ಸೀಟಿನಲ್ಲಿ ಕುಳಿತಿದ್ದರು ಎಂದು ತಿಳಿದುಬಂದಿದೆ.

ಈ ಪೈಕಿ, ಅಪಘಾತದಲ್ಲಿ ಅಮನ್‌ದೀಪ್ ಕೌರ್ ಮತ್ತು ಬಂಟಿ ಇಬ್ಬರೂ ಗಾಯಗೊಂಡಿದ್ದು, ಟ್ರಾಮಾ ಸೆಂಟರ್‌ಗೆ ಧಾವಿಸಿದ್ದಾರೆ. ಆದರೆ, ಅಲ್ಲಿಗೆ ಕರೆದೊಯ್ಯುವಷ್ಟರಲ್ಲಿ ಅಮನ್‌ದೀಪ್ ಕೌರ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು, ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಕಾಫಿಗೆ ವಿಷ ಹಾಕಿ ಯೋಧನನ್ನು ಕೊಲ್ಲಲು ಯತ್ನಿಸಿದ ಪಾಪಿ ಮಹಿಳೆ: ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

ಈ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 (ಅಪವೇಗದ ಚಾಲನೆ), 337 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯ  ಉಂಟುಮಾಡುವ ಕ್ರಿಯೆಯಿಂದ ನೋವುಂಟುಮಾಡುವುದು) ಮತ್ತು 304A (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಹಾಗೂ, ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಅದರ ಚಾಲಕನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ, ಅಂದರೆ ತಪ್ಪಿಸಿಕೊಂಡಿರುವ ಚಾಲಕನನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯ ಪ್ರದೇಶದಲ್ಲಿ ಅಪಘಾತ
ಜಲಪಾತದ ಅಂಚಿನಲ್ಲಿ ಕಾರು ನಿಲ್ಲಿಸಿ ಮೋಜು ಮಸ್ತಿ ಮಾಡುತ್ತಿದ್ದ ತಂಡವೊಂದು ಸಂಕಷ್ಟಕ್ಕೆ ಸಿಲುಕಿದೆ. ಕಾರಿನೊಳಗೆ ಮೂವರು ಕುಳಿತಿದ್ದರೆ, ಕಾರಿನ ಹೊರಭಾಗದಲ್ಲಿ ಹಲವರು ಮಸ್ತಿ ಶುರುಮಾಡಿದ್ದರು. ಆದರೆ ಜಲಪಾತದ ಅಂಚಿನಲ್ಲಿದ್ದ ಕಾರು ಒಂದೇ ಸಮನೆ ಮೇಲಿನಿಂದ ಕೆಳಕ್ಕೆ ಉರುಳಿದೆ. ಕಾರಿನಲ್ಲಿದ್ದ ಮೂವರನ್ನು ರಕ್ಷಿಸಲಾಗಿದೆ. ಈ ಭಯಾನಕ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಡೈಲಿ ಒಂದು ಪೆಗ್‌ ಹಾಕಿದ್ರೂ ನೀವು ಸೇಫಲ್ಲ: ನಿಮ್ಮನ್ನೂ ಕಾಡುತ್ತೆ ‘’ಸೈಲೆಂಟ್‌ ಕಿಲ್ಲರ್‌’’!

ಮಧ್ಯಪ್ರದೇಶದ ಇಂದೋರ್‌ ಸಿಮ್ರೋನ್ ಏರಿಯಾದಲ್ಲಿರುವ ಸಣ್ಣ ಜಲಪಾತದಲ್ಲಿ ಈ ಘಟನೆ ನಡೆದಿದೆ. ಕುಟುಂಬವೊಂದು ಕಾರಿನಲ್ಲಿ ಜಲಪಾತಕ್ಕೆ ವೀಕ್ಷಿಸಲು ತೆರಳಿದೆ. ಹಲವು ಪ್ರವಾಸಿಗರು ಈ ಸ್ಥಳಕ್ಕೆ ಆಗಮಿಸಿದ್ದಾರೆ. ಇನ್ನು ಜಲಾಪತದ ಕೆಲ ದೂರದಲ್ಲೂ ಪ್ರವಾಸಿಗರು ಸಂತಸದ ಕ್ಷಣ ಕಳೆಯುತ್ತಿದ್ದರು. ಆದರೆ ಜಲಪಾತದ ಅಂಚಿನಲ್ಲಿ ನಿಲ್ಲಿಸಿದ್ದ ಕಾರು ಏಕಾಏಕಿ ಕೆಳಕ್ಕೆ ಉರುಳಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಅಂಗಡಿ ಲೂಟಿ ಮಾಡಲು ಯತ್ನಿಸಿದ ಕಳ್ಳನಿಗೆ ಥಳಿಸಿದ ಭಾರತೀಯ: ವಿಡಿಯೋ ವೈರಲ್

Latest Videos
Follow Us:
Download App:
  • android
  • ios