ಹಣ ಪಡೆದು ಮನೆ ಕಟ್ಟಿಕೊಡದ ಬಿಲ್ಡರ್; ಬಡ್ಡಿ ಸಮೇತ ಪರಿಹಾರ, ದಂಡ ಕೊಡಲು ಆದೇಶಿಸಿದ ಕೋರ್ಟ್
- ಮನೆ ಕಟ್ಟಿಕೊಡದ ಬಿಲ್ಡರ್‌ಗೆ ದೂರುದಾರರಿಂದ ಪಡೆದ ಮುಂಗಡ ಹಣ
- ₹3 ಲಕ್ಷ 7 ಸಾವಿರದ 500 ಬಡ್ಡಿಸಮೇತ, ಪರಿಹಾರ ಮತ್ತು ದಂಡ ಕೊಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದ ಆದೇಶ
ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್ ಧಾರವಾಡ
ಧಾರವಾಡ (ಡಿ.7): ಧಾರವಾಡದ ನಿವಾಸಿಗಳಾದ ಮಧು, ಪುಷ್ಪಾ, ಸರೋಜಾ ಕಲವೆಕತಕರ್, ಎಂಬುವವರು ಧಾರವಾಡದ ಶ್ರೀ ವೀರಭದ್ರೇಶ್ವರ ಇನ್‍ಪ್ರಾಸ್ಟ್ರಕ್ಚರ್ ಮತ್ತು ಹೌಸಿಂಗ್ ಪ್ರೈ.ಲಿ. ಇದರ ಆಡಳಿತಾತ್ಮಕ ನಿರ್ದೇಶಕರಾದ ನಾಗನಗೌಡ ಶಿವನಗೌಡ ನೀರಲಗಿ ರವರ ಜೊತೆ ಪೂರ್ಣಿಮಾ ಲೇಔಟ್‍ನಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ನ್ಯಾನೊ ಅಪಾರ್ಟಮೆಂಟ್‍ನಲ್ಲಿ ಪ್ಲಾಟ್ ಕೊಡಲು ಒಪ್ಪಿ ಪ್ರತಿಯೊಬ್ಬ ದೂರುದಾರರಿಂದ ತಲಾ ರೂ.1,02,500/-ಗಳನ್ನು ಪಡೆದುಕೊಂಡು ದಿ:30/08/2010 ರಂದು ಒಪ್ಪಂದ ಮಾಡಿಕೊಂಡಿದ್ದು ಆ ಪೈಕಿ ಒಟ್ಟು ದೂರುದಾರರಿಂದ ರೂ.3,07,500/-ಮುಂಗಡವಾಗಿ ಪಡೆದುಕೊಂಡಿದ್ದರು.
ಮುಂಗಡ ಹಣ ಕೊಟ್ಟು ಒಪ್ಪಂದ ಆಗಿದ್ದರೂ ಬಿಲ್ಡರ್ ತಮಗೆ ಸದರಿ ಅಪಾರ್ಟ್‌ಮೆಂಟ್‍ನಲ್ಲಿ ಮನೆ ನಿರ್ಮಾಣ ಮಾಡಿಕೊಡದೇ ಹಾಗೂ ಖರೀದಿ ಪತ್ರ ಬರೆದುಕೊಡದೇ ಸೇವಾ ನ್ಯೂನತೆ ಎಸಗಿ ಮೋಸ ಮಾಡಿದ್ದಾರೆ ಅಂತಾ ಬಿಲ್ಡರ್ ಮೇಲೆ ಕ್ರಮ ಕೈಗೊಳ್ಳುವಂತೆ ಫಿರ್ಯಾದಿದಾರರು ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಬಿಲ್ಡರ್‌ಗೆ 11 ಲಕ್ಷ ರೂ ದಂಡ ಮತ್ತು ಪರಿಹಾರ ವಿಧಿಸಿದ ಧಾರವಾಡ ಗ್ರಾಹಕ ನ್ಯಾಯಾಲಯ ಆದೇಶ
ಸದರಿ ದೂರಿನ ಬಗ್ಗೆ ಕೂಲಂಕಷವಾಗಿ ವಿಚಾರಣೆ ನಡೆಸಿದ ಆಯೋಗದ ಪ್ರಭಾರೆ ಅಧ್ಯಕ್ಷರಾದ ವಿಶಾಲಾಕ್ಷಿ ಅ. ಬೋಳಶೆಟ್ಟಿ ಮತ್ತು ಸದಸ್ಯ ಪ್ರಭು. ಸಿ ಹಿರೇಮಠ ದೂರುದಾರರಿಂದ ಮುಂಗಡವಾಗಿ ಪಡೆದ ಹಣವನ್ನು ಡೆವೆಲಪರ್ ತಮ್ಮ ವೈಯಕ್ತಿಕ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡು ಅವರಿಗೆ ಪ್ಲ್ಯಾಟ ದೂರುದಾರರ ಸ್ವಾಧೀನಕ್ಕೆ ಕೊಡದೇ ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿರುತ್ತಾರೆ ಅಂತಾ ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.
ಈ ಬಗ್ಗೆ ವೀರಭದ್ರೇಶ್ವರ ಹೌಸಿಂಗ್ ಪ್ರೈ.ಲಿ. ಆಡಳಿತಗಾರ ಎನ್. ಎಸ್. ನೀರಲಗಿ ದೂರುದಾರರಿಂದ ಪಡೆದ ಒಟ್ಟು ರೂ.3,07,500/-ಗಳನ್ನು ಶೇ.8% ರಂತೆ ಬಡ್ಡಿ ಲೆಕ್ಕ ಹಾಕಿ ಹಾಗೂ ಮಾನಸಿಕ ತೊಂದರೆಗೆ ಪ್ರತಿಯೊಬ್ಬ ದೂರುದಾರರಿಗೆ ರೂ.25,000/- ಪರಿಹಾರ ಮತ್ತು ಪ್ರಕರಣದ ಖರ್ಚು ವೆಚ್ಚ ರೂ.10,000/-ಗಳನ್ನು ಈ ಆದೇಶದ ದಿನಾಂಕದಿಂದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ ತೀರ್ಪು ನೀಡಿದೆ. Dharwad: ಕಳಪೆ ಗುಣಮಟ್ಟದ ಮನೆ ಕಟ್ಟಿಕೊಟ್ಟ ಬಿಲ್ಡರ್‌ಗೆ 4 ಲಕ್ಷ ದಂಡ