Asianet Suvarna News Asianet Suvarna News

ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಮಧ್ಯೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಆತ್ಮಹತ್ಯೆ

ನಟರಾಜ್‌ ಆತ್ಮಹತ್ಯೆಗೂ ಭ್ರೂಣ ಹತ್ಯೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ, ಅವರು ಕೌಟುಂಬಿಕ ಸಮಸ್ಯೆಯಿಂದ ಬಳಲಿದ್ದರು. ಖಿನ್ನತೆಗೂ ಒಳಗಾಗಿದ್ದರು. ಈ ಹಿಂದೆಯೂ ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಸ್ಪಷ್ಟಪಡಿಸಿದ ಮಂಡ್ಯ ಡಿಎಚ್‌ಒ ಡಾ.ಕೆ.ಮೋಹನ್ 

District Family Welfare Officer Committed Suicide in Mandya grg
Author
First Published Dec 3, 2023, 9:45 PM IST

ಮಂಡ್ಯ(ಡಿ.03):  ಭ್ರೂಣ ಹತ್ಯೆ ಪ್ರಕರಣ ಸದ್ದು ಮಾಡುತ್ತಿರುವ ನಡುವೆಯೇ ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿ ಡಾ.ಎಸ್‌.ಆರ್‌.ನಟರಾಜ್‌ (55) ನಗರದ ತಮ್ಮ ಮಾವನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆದರೆ, ನಟರಾಜ್‌ ಆತ್ಮಹತ್ಯೆಗೂ ಭ್ರೂಣ ಹತ್ಯೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ, ಅವರು ಕೌಟುಂಬಿಕ ಸಮಸ್ಯೆಯಿಂದ ಬಳಲಿದ್ದರು. ಖಿನ್ನತೆಗೂ ಒಳಗಾಗಿದ್ದರು. ಈ ಹಿಂದೆಯೂ ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಮಂಡ್ಯ ಡಿಎಚ್‌ಒ ಡಾ.ಕೆ.ಮೋಹನ್ ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು: ಐಐಎಸ್‌ಸಿ ಕ್ಯಾಂಪಸ್‌ನ ಕಟ್ಟಡದ 6ನೇ ಪ್ಲೋರ್‌ನಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಕೆಲ ದಿನಗಳ ಹಿಂದಷ್ಟೇ ವೈದ್ಯಕೀಯ ಚಿಕಿತ್ಸೆ ಸಲುವಾಗಿ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ತಮ್ಮ ಮಾವನ ಮನೆಗೆ ಪತ್ನಿ ಜತೆ ನಟರಾಜ್ ಬಂದಿದ್ದರು. ಮಲಗುವ ಕೋಣೆಯಲ್ಲಿ ಶುಕ್ರವಾರ ಸಂಜೆ ನೇಣು ಬಿಗಿದುಕೊಂಡು ಅ‍ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಹೊತ್ತಿನ ಬಳಿಕ ಮೃತರ ಕೋಣೆಗೆ ಪತ್ನಿ ಗಾಯಿತ್ರಿ ತೆರಳಿದ್ದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

Latest Videos
Follow Us:
Download App:
  • android
  • ios