ಬೆಂಗಳೂರು: ಶೀಲ ಶಂಕಿಸಿ ಪತ್ನಿ ಕೊಲೆಗೈದ ಪತಿರಾಯ: ಕಳೆದೊಂದು ವಾರದಲ್ಲಿ 3ನೇ ಪ್ರಕರಣ
*ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
*ಮರದ ದೊಣ್ಣೆಯಿಂದ ಪತ್ನಿಯ ತಲೆಗೆ ಹೊಡೆದು ಕಗ್ಗೋಲೆ
*ಪತ್ನಿ ಪದ್ಮಾಳನ್ನ ಹತ್ಯೆಗೈದ ಪತಿ ಮಾರಪ್ಪ
ಬೆಂಗಳೂರು (ಏ. 23): ಪತ್ನಿ ಶೀಲ ಶಂಕಿಸಿ ಮರದ ದೊಣ್ಣೆಯಿಂದ ಆಕೆಯ ತಲೆಗೆ ಹೊಡೆದು ಪತಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ಪದ್ಮಾಳನ್ನ ಪತಿ ಮಾರಪ್ಪ ಹತ್ಯೆಗೈದಿದ್ದಾನೆ. ತಲಘಟ್ಟಪುರದ ನಾಗೇಗೌಡನಪಾಳ್ಯದಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು ಆರೋಪಿ ಮಾರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ಮುಂದುವೆರೆದಿದೆ.
ಇನ್ನೂ ಬೆಂಗಳೂರಿನಲ್ಲಿ ಕಳೆದ ಒಂದು ವಾರದಲ್ಲಿ ಇದೇ ರೀತಿ ಇನ್ನೆರಡು ಘಟನೆಗಳು ನಡೆದಿವೆ. ಪತ್ನಿಯ ಶೀಲ ಶಂಕಿಸಿ, ಚಾಕುವಿನಿಂದ ಆಕೆಯ ಕತ್ತನ್ನು ಸೀಳಿ ಕೊಲೆ ಬಳಿಕ ತಾನೇ ಪೊಲೀಸರಿಗೆ ಶರಣಾದ ಘಟನೆ ಆನೇಕಲ್‌ನಲ್ಲಿ ನಡೆದಿದೆ. ಇನ್ನು ಸದಾ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಹಿನ್ನೆಲೆಯಲ್ಲಿ ಶೀಲ ಶಂಕಿಸಿ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕ್ಯಾಬ್ ಚಾಲಕನೊಬ್ಬ ಕೊಂದಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆನೇಕಲ್ ಪ್ರಕರಣ: ಇಲ್ಲಿನ ತಿಮ್ಮರಾಯಸ್ವಾಮಿ ದಿಣ್ಣೆಯ ಸರಸ್ವತಿ(35) ಕೊಲೆಯಾದವರು. ಮಲ್ಲೇಶ್ ಕೊಲೆ ಮಾಡಿದ ಪತಿರಾಯ. ಮಲ್ಲೇಶ್ ಬಿಲ್ಡಿಂಗ್ ಕಂಟ್ರಾಕ್ಟರ್ ಆಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಮಾನಸಿಕ ಸ್ಥಿಮಿತ ಕಳೆ ದುಕೊಂಡಿದ್ದ ಆರೋಪಿ(Accused) ತನ್ನನ್ನು ಯಾರೋ ಕೊಲೆ ಮಾಡಲಿದ್ದಾರೆ ಎಂದು ಹೇಳಿಕೊಂಡು ಓಡಾಡುತ್ತಿದ್ದ.
ಇದನ್ನೂ ಓದಿ: 17 ವರ್ಷದ ಯುವತಿಯ ಮೇಲೆ 12 ವರ್ಷದ ಹುಡುಗನಿಂದ ಅತ್ಯಾಚಾರ, ಮಗುವಿಗೆ ಜನ್ಮ ನೀಡಿದ ಹುಡುಗಿ
ಜತೆಗೆ ಫೇಸ್‌ಬುಕ್‌ನಲ್ಲೂ(Facebook) ಈ ಸಂಬಂಧ ಪೋಸ್ಟ್ ಹಾಕಿದ್ದ. ಪೋಸ್ಟ್ ಗಮನಿಸಿದ್ದ ಪೊಲೀಸರು ಕೌನ್ಸಿಲಿಂಗ್ ಮಾಡಿ, ಬುದ್ಧಿವಾದ ಹೇಳಿ ಕಳುಹಿಸಿದ್ದರು ಎಂದು ತಿಳಿದುಬಂದಿದೆ. ಇದಾದ ಬಳಿಕ ಕುಡಿತದ ದಾಸನಾಗಿದ್ದ ಆರೋಪಿ, ಶೀಲ ಶಂಕಿಸಿ ಪತ್ನಿ ಜೊತೆ ನಿತ್ಯ ಜಗಳವಾಡುತ್ತಿದ್ದ. ಸೋಮವಾರ ರಾತ್ರಿ ಸಹ ಜಗಳವಾಗಿದ್ದು, ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಮಾಕ್ಷಿಪಾಳ್ಯ ಪ್ರಕರಣ: ಕಾವೇರಿಪುರದ 13ನೇ ಅಡ್ಡರಸ್ತೆ ನಿವಾಸಿ ವನಜಾಕ್ಷಿ(31) ಕೊಲೆಯಾದ ದುರ್ದೈವಿ. ಈ ಪ್ರಕರಣ ಸಂಬಂಧ ಮೃತಳ ಪತಿ ಅಶೋಕ್‌ನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಮಾತುಕತೆ ವಿಚಾರವಾಗಿ ಭಾನುವಾರ ರಾತ್ರಿ ದಂಪತಿ ಮಧ್ಯೆ ಜಗಳವಾಗಿದೆ. ಆಗ ಮಾತಿಗೆ ಮಾತು ಬೆಳೆದು ಕೆರಳಿದ ಅಶೋಕ್, ಪತ್ನಿ ಕತ್ತು ಹಿಸುಕಿ ಕೊಂದು ಪರಾರಿಯಾಗಿದ್ದ. ಮೃತಳ ಮನೆಗೆ ಬುಧವಾರ ರಾತ್ರಿ ಆಕೆಯ ಸೋದರ ಬಂದಾಗ ಹತ್ಯೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
13 ವರ್ಷಗಳ ಹಿಂದೆ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗಾ ಹೋಬಳಿ ಕೆಂಚೇನಹಳ್ಳಿ ಗ್ರಾಮದ ಅಶೋಕ್ ಹಾಗೂ ವನಜಾಕ್ಷಿ ವಿವಾಹವಾಗಿದ್ದು, ಈ ದಂಪತಿಗೆ ಮೂರು ಮಕ್ಕಳಿದ್ದಾರೆ. ಕಾವೇರಿಪುರದಲ್ಲಿ ಈ ಕುಟುಂಬ ನೆಲೆಸಿತ್ತು. ಮನೆ ಸಮೀಪದ ಗಾರ್ಮೆಂಟ್ಸ್‌ನಲ್ಲಿ ವನಜಾಕ್ಷಿ ನೌಕರಿಯಲ್ಲಿದ್ದರೆ, ಅಶೋಕ್ ಕ್ಯಾಬ್ ಚಾಲಕನಾಗಿದ್ದ.
ಇದನ್ನೂ ಓದಿ: ವಿಮಾನದಲ್ಲಿ ಮಹಿಳೆಯ ಎದೆಗೆ ಕೈಹಾಕಿ ಕಾಮಚೇಷ್ಟೆ: ಕಾಮುಕನ ಬಂಧನ
ಕೆಲ ದಿನಗಳಿಂದ ಕೌಟುಂಬಿಕ ವಿಚಾರವಾಗಿ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಸದಾ ಕಾಲ ಯಾರೊಂದಿಗೋ ಪತ್ನಿ ಮೊಬೈಲ್‌ನಲ್ಲಿ ಮಾತನಾಡುತ್ತಾಳೆ ಎಂಬುದು ಅಶೋಕ್ ಆಕ್ಷೇಪವಾಗಿತ್ತು. ಇದೇ ವಿಚಾರವಾಗಿ ಇಬ್ಬರ ಮಧ್ಯೆ ಆಗಾಗ್ಗೆ ಜಗಳಗಳು ನಡೆದಿದ್ದವು. ಪತ್ನಿಗೆ ಗೊತ್ತಾಗದಂತೆ ಆಕೆಯ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಆತ ಮಾತುಕತೆ ಕೇಳಿಸಿಕೊಂಡಿದ್ದ.