ಸಾರಿಗೆ ಬಸ್ ಬ್ರೇಕ್ ಫೇಲ್ ಆಗಿ ನಿಲ್ದಾಣದ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಗದಗ ನಗರದ ಪುಟ್ಟರಾಜ ಬಸ್ ನಿಲ್ದಾಣದ ಬಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಯುವತಿ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗದಗ (ಮಾ.1):ಸಾರಿಗೆ ಬಸ್ ಬ್ರೇಕ್ ಫೇಲ್ ಆಗಿ ನಿಲ್ದಾಣದ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಗದಗ ನಗರದ ಪುಟ್ಟರಾಜ ಬಸ್ ನಿಲ್ದಾಣದ ಬಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಯುವತಿ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಪ್ರಯಾಣಿಕರನ್ನು ಕೂರಿಸಿಕೊಂಡು ಹಾತಲಗೇರಿಗೆ ಹೊರಟಿದ್ದ ಬಸ್‌. ನಿಲ್ದಾಣದಿಂದ ಆಚೆ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟಿ, ಆಟೋಗೆ ಡಿಕ್ಕಿಯಾಗಿದೆ ಬಳಿಕ ರಸ್ತೆ ಮಧ್ಯೆದ ಡಿವೈಡರ್‌ಗೆ ಡಿಕ್ಕಿ ಹೊಡೆದು ನಿಂತಿದೆ. ಏಕಾಏಕಿ ನಿಯಂತ್ರಣ ತಪ್ಪಿದ್ದಕ್ಕೆ ಆತಂಕಗೊಂಡ ಪ್ರಯಾಣಿಕರು. ಬಸ್ ಡಿವೈಡರ್‌ಗೆ ಡಿಕ್ಕಿಯಾಗ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದ ಚೀರಾಡಿದ್ದಾರೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. 

ಮುಂದುವರಿದ ಬಲಿ; ಕಿಲ್ಲರ್ ಬಿಎಂಟಿಸಿ ಬಸ್‌ಗೆ ಮತ್ತೊಬ್ಬ ಬೈಕ್ ಸವಾರ ಸಾವು!

ಘಟನೆ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ