ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಸೇರಿದಂತೆ ಆರು ಮಂದಿ ಆರೋಪಿಗಳ ತಲೆ ಕೂದಲು, ರಕ್ತ ಮತ್ತು ಮೂತ್ರ ಮಾದರಿಯನ್ನು ಉದ್ದೀಪನಾ ಮದ್ದು ಸೇವನೆ ಪರೀಕ್ಷೆಗಾಗಿ ಹೈದರಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಾಗಿದೆ. 

ಬೆಂಗಳೂರು (ಸೆ.14): ಮಾದಕ ವಸ್ತು ಮಾರಾಟ ಜಾಲದಲ್ಲಿ ಸಿಲುಕಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಸೇರಿದಂತೆ ಆರು ಮಂದಿ ಆರೋಪಿಗಳ ತಲೆ ಕೂದಲು, ರಕ್ತ ಮತ್ತು ಮೂತ್ರ ಮಾದರಿಯನ್ನು ಉದ್ದೀಪನಾ ಮದ್ದು ಸೇವನೆ ಪರೀಕ್ಷೆಗಾಗಿ ಹೈದರಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಾಗಿದೆ.

ಕಳೆದ ಮೂರು ದಿನಗಳ ಹಿಂದೆ ಆರೋಪಿಗಳ ಮೂರು ಮಾದರಿಗಳನ್ನು ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಸಂಗ್ರಹಿಸಲಾಗಿತ್ತು. 

ಬೆಂಗಳೂರಿನಲ್ಲಿ ಉದ್ದೀಪನಾ ಮದ್ದು ಸೇವನೆ ಪರೀಕ್ಷೆ ಮಾಡುವ ವ್ಯವಸ್ಥೆ ಇಲ್ಲದ ಕಾರಣ ಆರೋಪಿಗಳ ಮಾದರಿಯನ್ನು ಹೈದರಾಬಾದ್‌ಗೆ ಕಳುಹಿಸಲಾಗಿದ್ದು, ಒಂದು ವಾರದಲ್ಲಿ ವರದಿ ಬರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.

ವೀರೇನ್‌ ಸ್ನೇಹ ಕೊನೆಗೂ ಒಪ್ಪಿದ ರಾಗಿಣಿ, ಸಂಜನಾ! ...

ಈಗಾಗಲೇ ಹಲವು ಪರೀಕ್ಷೆ ಮಾಡಲಾಗಿದ್ದು, ವಿಚಾರಣೆ ತ್ವರಿತಗತಿಯಲ್ಲಿ ಸಾಗುತ್ತಿದೆ.