ಕುಡುಕ ಗಂಡನಿಂದ ಪತ್ನಿ ಮತ್ತು ಇಬ್ಬರು ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ: ಇಬ್ಬರು ಸಾವು
ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳ ಮೇಲೆ ಮಾರಕಾಸ್ತ್ರದಿಂದ ತೀವ್ರವಾಗಿ ದಾಳಿ ಮಾಡಿ ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಹುಬ್ಬಳ್ಳಿಯಲ್ಲಿ ತಾಲೂಕಿನಲ್ಲಿ ನಡೆದಿದೆ.
ಹುಬ್ಬಳ್ಳಿ (ಫೆ.01): ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳ ಮೇಲೆ ಮಾರಕಾಸ್ತ್ರದಿಂದ ತೀವ್ರವಾಗಿ ದಾಳಿ ಮಾಡಿ ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಹುಬ್ಬಳ್ಳಿಯಲ್ಲಿ ತಾಲೂಕಿನಲ್ಲಿ ನಡೆದಿದೆ.
ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಫಕೀರಪ್ಪ ತನ್ನ ಪತ್ನಿ ಮತ್ತು ಮಕ್ಕಳ ಮೇಲೆ ದಾಳಿ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಪತ್ನಿ ಮತ್ತು ಮಕ್ಕಳ ಮೇಲೆ ಮಾರಕಾಸ್ತ್ರದಿಂದ ದಾಳಿ ಮಾಡಿದ್ದನು. ಇನ್ನು ಈ ದುರ್ಘಟನೆಯಿಂದಾಗಿ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ನೇಣು ಬೇಡಿಕೊಂಡ ಫಕೀರಪ್ಪ ಮನೆಯಲ್ಲಿ ಸಾವನ್ನಪ್ಪಿದ್ದನು. ನಂತರ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಈ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಶ್ರೇಯಸ್ (6) ಮೃತ ಮಗುವಾಗಿದೆ.
ಪಕ್ಕೀರಪ್ಪ ಹಲ್ಲೆ ಮಾಡಿದ ಘಟನೆ ನಂತರ ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಕಿಮ್ಸ್‌ನಲ್ಲಿ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಈಗ ಒಂದು ಮಗು ಸಾವನ್ನಪ್ಪಿದ್ದು, ಉಳಿದಂತೆ ಪತ್ನಿ ಮತ್ತು ಇಬ್ಬರು ಮಕ್ಕಳ ಸ್ಥಿತಿಯೂ ಚಿಂತಾಜನಕವಾಗಿದೆ. ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದ್ದ ಘಟನೆಯಾಗಿದ್ದು, ಕುಡಿದ ಮತ್ತಿನಲ್ಲಿಯೇ ಕೊಡಲಿಯಿಂದ ದಾಳಿ ಮಾಡಿ ಕೃತ್ಯ ಎಸಗಿದ್ದನು. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.