ಬೀದರ್, [ಫೆ.23]: ಬಸವಕಲ್ಯಾಣ ನಗರದಲ್ಲಿ ಅಬಕಾರಿ ಮಹಿಳಾ ಪಿಎಸ್​ಐ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ರೇಖಾ ಕೋರಿ (29) ಆತ್ಮಹತ್ಯೆಗೆ ಶರಣಾದ ಪಿಎಸ್​ಐ. ಕಳೆದ 8 ತಿಂಗಳಿಂದ ಬಸವಕಲ್ಯಾಣದಲ್ಲಿ ಪ್ರೊಬೆಷನರಿ ಪಿಎಸ್​ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೇಖಾ ಅವರು ಇಂದು [ಭಾನುವಾರ] ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

1 ಕೊಲೆ, 2 ಆತ್ಮಹತ್ಯೆ: ವೈದ್ಯನ ಸೂಸೈಡ್ ಕೇಸ್‌ಗೆ ಬಿಗ್ ಟ್ವಿಸ್ಟ್!

ಇವರು ಮೂಲತಃ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದವರು ಎಂದು ತಿಳಿದುಬಂದಿದ್ದು, ಪತಿ ಹಾಗೂ ಕುಟುಂಬ ಸದಸ್ಯರೊಂದಿಗೆ ಬಸವಕಲ್ಯಾಣದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು.

ಮನೆಯಿಂದ ಪತಿ ಹೊರಗೆ ಹೋದ ಸಂದರ್ಭದಲ್ಲಿ ಫ್ಯಾನ್​ಗೆ ನೇಣುಬಿಗಿದುಕೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ ಆಗಲಿಲ್ಲ. ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾರೆ. ಆದ್ರೆ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇನ್ನು ಈ ಬಗ್ಗೆ ಬಸವಕಲ್ಯಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.