ಆರ್.ಆರ್.ನಗರದಲ್ಲಿ ಮತ್ತೆ ಚುನಾವಣಾ ಗುರುತಿನ ಚೀಟಿ ಹಗರಣ: ಇಬ್ಬರ ಬಂಧನ
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಗುರುತಿನ ಚೀಟಿ ಸಂಗ್ರ ಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಯಶವಂತಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬೆಂಗಳೂರು (ಏ.19): ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಗುರುತಿನ ಚೀಟಿ ಸಂಗ್ರ ಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಯಶವಂತಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನ ಸಭಾಕ್ಷೇತ್ರ ವ್ಯಾಪ್ತಿಯ ಯಶವಂತಪುರ ವಾರ್ಡ್‌ನ ಡಾ|ಬಿ.ಆರ್.ಅಂಬೇಡ್ಕರ್ ಬಡಾವಣೆಯ ಸುಣ್ಣದಗೂಡು ಕೊಳಗೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತದಾರರ ಗುರುತಿನ ಚೀಟಿ ಸಂಗ್ರಹಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರಕರ್ತರು ಆರೋಪಿಸಿದ್ದಾರೆ.
ಅಲ್ಲದೆ, ಕಾಂಗ್ರೆಸ್ ಕಾರ್ಯಕರ್ತರು ಕೊಳಗೇರಿಗೆ ತೆರಳಿ ಮತದಾರರ ಗುರುತಿನ ಚೀಟಿ ಸಂಗ್ರಹಿಸಿಟ್ಟುಕೊಂಡಿದ್ದವರನ್ನು ಪತ್ತೆ ಮಾಡಿ ಸ್ಥಳೀಯವಾಗಿ ನೇಮಕವಾಗಿರುವ ಚುನಾವಣಾಧಿಕಾರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಚುನಾವಣಾಧಿಕಾರಿ ಯಶವಂತಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮತದಾರರ ಗುರುತಿನ ಚೀಟಿ ಸಂಗ್ರಹಿಸಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಆ ವಿಡಿಯೋ ಹಾಗೂ ಚುನಾವಾಣಧಿಕಾರಿ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಯಶವಂತಪುರ ಪೊಲೀಸರು ಬಿಜೆಪಿ ಕಾರ್ಯಕರ್ತರು ಎಂದು ಹೇಳಲಾದ ವೆಂಕಟೇಶ್ ಮತ್ತು ಸ್ಟಾಲಿನ್‌ನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಮತಗಟ್ಟೆಯಲ್ಲಿ ಮತದಾರರ ಸೇವಾ ಕೇಂದ್ರ ಸ್ಥಾಪನೆ: ಮೂರಕ್ಕಿಂತ ಹೆಚ್ಚಿನ ಮತಗಟ್ಟೆ ಇರುವ ಕಡೆ ಮತದಾರರಿಗೆ ಅಗತ್ಯ ಸಲಹೆ ಸೂಚನೆ, ಮಾರ್ಗದರ್ಶನ ನೀಡಲು ಮತದಾರರ ಸೇವಾ ಕೇಂದ್ರ ಆರಂಭಿಸಲು ಬೆಂಗಳೂರು ಜಿಲ್ಲಾ ಚುನಾವಣಾ ವಿಭಾಗ ಮುಂದಾಗಿದೆ. ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್, ನಗರದಲ್ಲಿ ಮೂರು ಹಾಗೂ ಅದಕ್ಕಿಂತ ಹೆಚ್ಚು ಮತಗಟ್ಟೆಗಳು ಒಂದೇ ಆವರಣದಲ್ಲಿ ಇರುವ 1,409 ಕಡೆ ಮತದಾನಕ್ಕೆ ಆಗಮಿಸುವ ಮತದಾರರಿಗೆ ಯಾವ ಬೂತ್‌ನಲ್ಲಿ ಮತದಾನ ಮಾಡಬೇಕು.
Gadag: ನಗರಸಭೆ ಮಾಜಿ ಉಪಾಧ್ಯಕ್ಷೆ ಮನೆಯಲ್ಲಿ ಮರ್ಡರ್: ಚಾಕುವಿನಿಂದ ಇರಿದು ಮಲಗಿದ್ದ ನಾಲ್ವರ ಹತ್ಯೆ!
ಮತದಾರ ಗುರುತಿನ ಚೀಟಿ ವಿತರಣೆ ಮಾಡುವುದು ಸೇರಿದಂತೆ ಅಗತ್ಯ ಸಲಹೆ ಸೂಚನೆ, ಮಾರ್ಗದರ್ಶನ ನೀಡಲು ಮತದಾರರ ಸೇವಾ ಕೇಂದ್ರ ಆರಂಭಿಸಲು ಸೂಚಿಸಿದ್ದಾರೆ. ಜತೆಗೆ ಮಾದರಿ ನಕ್ಷೆ ರೂಪಿಸಿಕೊಂಡು ಮತಗಟ್ಟೆ ಸ್ಥಳದಲ್ಲಿ ಏನೆಲ್ಲಾ ವ್ಯವಸ್ಥೆಯಿದೆ ಎಂಬ ಸಂಪೂರ್ಣ ವಿವರಗಳ್ಳ ನಿರ್ದೇಶನ ಫಲಕಗಳನ್ನು ಅಳವಡಿಸಬೇಕು. ಮತದಾರರ ಸಹಾಯಕ್ಕಾಗಿ ಸ್ವಯಂ ಸೇವಕರನ್ನು ನಿಯೋಜಿಸಬೇಕು. ಮತಗಟ್ಟೆಗಳ ಸ್ಥಳದಲ್ಲಿ ಪಾರ್ಕಿಂಗ್ ಸೂಚನಾ ಫಲಕ ಅಳವಡಿಸಿ, ಎಷ್ಟು ವಾಹನಗಳನ್ನು ನಿಲ್ಲಿಸಬಹುದು ಎಂಬುದರ ಮಾಹಿತಿ ನೀಡಬೇಕು. ವಾಹನಗಳು ಸರಿಯಾದ ಕ್ರಮದಲ್ಲಿ ನಿಲುಗಡೆ ಮಾಡಲು ವ್ಯವಸ್ಥೆ ಮಾಡಬೇಕು ಎಂದರು.