Asianet Suvarna News Asianet Suvarna News

ಗೌರಿಬಿದನೂರು: ಖಾಸಗಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಪ್ರವಹಿಸಿ ವ್ಯಕ್ತಿಯೋರ್ವ ಸಾವು!

ಗೌರಿಬಿದನೂರು ನಗರದ ಶ್ರೀರಾಮಕೃಷ್ಣ ಶಾರದಾದೇವಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. 

Electricity mishap in Gouribidanur, one person died at chikkaballapur rav
Author
First Published Feb 10, 2024, 8:28 PM IST

ಚಿಕ್ಕಬಳ್ಳಾಪುರ : ಗೌರಿಬಿದನೂರು ನಗರದ ಶ್ರೀರಾಮಕೃಷ್ಣ ಶಾರದಾದೇವಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. 

ಕಲ್ಲಂಕರಾಯನಕುಂಟೆ ಗ್ರಾಮದಲ್ಲಿನ ಶಾರದಾ ಶಾಲಾ ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಗಾಳಿಗೆ ಹಾರಿ ವಿದ್ಯುತ್ ತಂತಿಗಳಿಗೆ ಸ್ಪರ್ಶವಾಗಿದೆ. ಹೀಗಾಗಿ ಪೆಂಡಲ್ ಕೆಳಗೆ ಇದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯುತ್ ಪಸರಿಸಿದ್ದು, ಘಟನೆಯಲ್ಲಿ ನಾಗೇನಹಳ್ಳಿ ನಿವಾಸಿ ರಾಘವೇಂದ್ರ ಎಂಬುವರು ಮೃತಪಟ್ಟಿದ್ದಾರೆ. ಇನ್ನು 18ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಗ ದಾಖಲು ಮಾಡಲಾಗಿದೆ

ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ICMR ಒಪ್ಪಿಗೆ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಗಾಯಾಳುಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು, ಇಬ್ಬರು ಪೋಷಕರು ಹಾಗೂ ಇಬ್ಬರು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗೌರಿಬಿದನೂರು ನಗರದ ಅರುಣಾ ಆಸ್ಪತ್ರೆಯಲ್ಲಿ ಹತ್ತು ಮಂದಿಗೆ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಂಟು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸದಾ ಕೊಲ್ಲುವ, ಮುಗಿಸುವ ಮಾತಾಡೋ ಈಶ್ವರಪ್ಪ ಬಿಜೆಪಿ ಪಕ್ಷದ ನಾಯಕನೇ?: ದಿನೇಶ್ ಗುಂಡೂರಾವ್ ಗುಡುಗು

Follow Us:
Download App:
  • android
  • ios