ಮಹಾರಾಷ್ಟ್ರ ಲೋಹೆಗಾಂವ್‌ನ ಎಂಪಿಎಂಸಿ ಆವರಣದಲ್ಲಿ ಗುರುವಾರ ಸಂಜೆ 4.30ಕ್ಕೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದ್ದು, 44 ವರ್ಷದ ಮಹಿಳೆ ವಿಮಂತಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮುಂಬೈ (ಮೇ 21, 2023): ಪೊಲೀಸ್‌ ಠಾಣೆಗೆ ದೂರು ನೀಡೋಕೆ ಹೋದ ಮಹಿಳೆ ವಿರುದ್ಧ ಅನುಚಿತ ವರ್ತನೆ ತೋರಿದ ಆರೋಪದ ಮೇರೆಗೆ ಮಾಜಿ ಎಸಿಪಿ ವಿರುದ್ಧವೇ ಕೇಸ್‌ ದಾಖಲಾಗಿದೆ. ಮಹಾರಾಷ್ಟ್ರ ಪೊಲೀಸ್ ಮೆಗಾ ಸಿಟಿ (ಎಂಪಿಎಂಸಿ) ನಿರ್ದೇಶಕ ಮತ್ತು ನಿವೃತ್ತ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಸುರೇಶ್ ಭಾಮ್ರೆ ಅವರು ಎಂಪಿಎಂಸಿ ವಸತಿ ಯೋಜನೆಯ ಬಗ್ಗೆ ವಿವರಗಳನ್ನು ಕೇಳಲು ಹೋದಾಗ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಹಾಗೂ, ಆಕೆಯ ಮೊಬೈಲ್ ಫೋನ್ ಕಸಿದುಕೊಂಡಿದ್ದಾರೆ ಎಂಬ ಆರೋಪ ಸಂಬಂಧ ಪ್ರಕರಣ ದಾಖಲಾಗಿದೆ. 

ಮಹಾರಾಷ್ಟ್ರ ಲೋಹೆಗಾಂವ್‌ನ ಎಂಪಿಎಂಸಿ ಆವರಣದಲ್ಲಿ ಗುರುವಾರ ಸಂಜೆ 4.30ಕ್ಕೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದ್ದು, 44 ವರ್ಷದ ಮಹಿಳೆ ವಿಮಂತಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೀಗಾಗಿ ಮಾಜಿ ಎಸಿಪಿ ಸುರೇಶ್ ಭಾಮ್ರೆ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ಅಯ್ಯೋ ಪಾಪ.. ಮಹಿಳಾ ಐಎಎಸ್‌ ಅಧಿಕಾರಿಗೆ ಲೈಂಗಿಕ ಕಿರುಕುಳ: ಐಆರ್‌ಎಸ್‌ ಅಧಿಕಾರಿ ಬಂಧನ

ಲೋಹೆಗಾಂವ್‌ನಲ್ಲಿ ಎಂಪಿಎಂಸಿ ಹೌಸಿಂಗ್ ಸೊಸೈಟಿ ಯೋಜನೆ ಹಲವು ವರ್ಷಗಳಿಂದ ನಡೆಯುತ್ತಿದೆ. ಆಡಳಿತ ಮಂಡಳಿ ವಿರುದ್ಧ ನಾನಾ ಆರೋಪಗಳು ಕೇಳಿಬಂದಿವೆ. ದೂರುದಾರರು ವಸತಿ ಯೋಜನೆಯ ಬಗ್ಗೆ ವಿವರ ಪಡೆಯಲು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಆರೋಪಿ ಹಾಗೂ ಮಾಜಿ ಎಸಿಪಿ ಸುರೇಶ್ ಭಾಮ್ರೆ ಅವರು ಮಹಿಳೆಯ ಮೊಬೈಲ್‌ ಕಿತ್ತುಕೊಂಡಿದ್ದಾರೆ. ನಂತರ ಆಕೆಯ ಕೈ ಹಿಡಿದು ಕೆನ್ನೆ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೇ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ. 

 ಈ ಕುರಿತು ಪಿಐ (ಅಪರಾಧ) ಸಂಗೀತಾ ಮಾಲಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. 

ಇದನ್ನೂ ಓದಿ: ವಿವಾಹ ಸಮಾರಂಭದಲ್ಲೇ ಜಗಳವಾಡಿ ವಿಷ ಸೇವಿಸಿದ ವರ - ವಧು: ಮದುವೆ ಗಂಡು ಸಾವು, ಮಹಿಳೆ ಸ್ಥಿತಿ ಗಂಭೀರ

ಮಹಿಳಾ ಐಎಎಸ್‌ ಅಧಿಕಾರಿಗೆ ಲೈಂಗಿಕ ಕಿರುಕುಳ: ಐಆರ್‌ಎಸ್‌ ಅಧಿಕಾರಿ ಬಂಧನ
ಇದೇ ರೀತಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐಆರ್‌ಎಸ್ ಅಧಿಕಾರಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮಹಿಳಾ ಐಎಎಸ್‌ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ರು ಎಂಬ ಆರೋಪವೂ ಕೇಳಿಬಂದಿದೆ. ಐಎಎಸ್ ಅಧಿಕಾರಿಯನ್ನು ಹಿಂಬಾಲಿಸುತ್ತಿದ್ದ ಹಾಗೂ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐಆರ್‌ಎಸ್ ಅಧಿಕಾರಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಬಂಧನದ ಬಳಿಕ ಆರೋಪಿ ಐಆರ್‌ಎಸ್‌ ಅಧಿಕಾರಿಗೆ ಈಗಾಗಲೇ ಜಾಮೀನು ನೀಡಲಾಗಿದೆ ಎಂದೂ ತಿಳಿದುಬಂದಿದೆ. ಈ ಆರೋಪ ಸಂಬಂಧ ರಾಷ್ಟ್ರ ರಾಜಧಾನಿ ದೆಹಲಿಯ ಸಂಸತ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354 (ಹೆಣ್ಣಿನ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲ), 354-ಡಿ (ಹಿಂಬಾಲಿಸುವಿಕೆ), 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಬಾಲ್ಯವಿವಾಹಕ್ಕೆ ಬ್ರೇಕ್‌ ಬೆನ್ನಲ್ಲೇ ಬಹುಪತ್ನಿತ್ವ ಬ್ಯಾನ್‌ ಮಾಡಲು ಮುಂದಾದ ಅಸ್ಸಾಂ ಸಿಎಂ

2020 ರಲ್ಲಿ ಕೋವಿಡ್ -19 ಸಪೋರ್ಟ್‌ ಗ್ರೂಪ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಐಆರ್‌ಎಸ್ ಅಧಿಕಾರಿ ತನ್ನೊಂದಿಗೆ ಸಂಪರ್ಕಕ್ಕೆ ಬಂದರು ಎಂದೂ ಸಂತ್ರಸ್ತೆ ಆರೋಪಿಸಿದ್ದಾರೆ. ಆರೋಪಿ ಅಧಿಕಾರಿ ಹಲವಾರು ಬಾರಿ ತನಗೆ ಕ್ಲೋಸ್‌ ಆಗಲು ಪ್ರಯತ್ನಿಸಿದ್ದರು. ಆದರೆ, ತಾನು ನಿರಾಕರಿಸುತ್ತಿದ್ದೆ ಎಂದೂ ಸಂತ್ರಸ್ತೆ ಮಹಿಳಾ ಅಧಿಕಾರಿ ಹೇಳಿಕೊಂಡಿದ್ದರು. 

ಇದನ್ನೂ ಓದಿ: ಯುವಕನ ಶಿರಚ್ಛೇದ ಮಾಡಿ, ತಲೆ ಮೆರವಣಿಗೆ ಮಾಡಿದ ಪಾಪಿ: ರಸ್ತೆಬದಿಯಲ್ಲಿ ಎಸೆದು ಪರಾರಿ