Asianet Suvarna News

ಅತ್ಯಾಚಾರ ಆರೋಪ: ನಾಪತ್ತೆಯಾಗಿದ್ದ ಮಾಜಿ ಸಚಿವ ಬೆಂಗಳೂರಿನಲ್ಲಿ ಅರೆಸ್ಟ್

* ಮದುವೆಯಾಗುವುದಾಗಿ ನಂಬಿಸಿ, ನನ್ನ ಮೇಲೆ ಅತ್ಯಾಚಾರ
* ಅತ್ಯಾಚಾರ ಎಸಗಿದ ಆರೋಪದಡಿಯಲ್ಲಿ ಮಾಜಿ ಸಚಿವ ಅರೆಸ್ಟ್
* ಬೆಂಗಳೂರಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಮಾಜಿ ಸಚಿವ

Ex AIADMK minister M Manikandan arrested for allegedly raping Malaysian woman rbj
Author
Bengaluru, First Published Jun 20, 2021, 10:49 PM IST
  • Facebook
  • Twitter
  • Whatsapp

ಬೆಂಗಳೂರು, (ಜೂನ್.20): ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಎಐಎಡಿಎಂಕೆ ಮಾಜಿ ಸಚಿವ ಎಂ ಮಣಿಕಂಠನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಾಜಿ ಸಚಿವ ಎಂ ಮಣಿಕಂಠನ್ ಅವರು ಇಂದು (ಭಾನುವಾರ) ಬೆಂಗಳೂರಿನಲ್ಲಿ ಚೆನ್ನೈ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.  ಕಳೆದ ಐದು ವರ್ಷಗಳಿಂದ ನಾನು ಲಿವ್ ಇನ್ ಸಂಬಂಧದಲ್ಲಿದ್ದೆ, ನನ್ನನ್ನು ಮದುವೆಯಾಗುವುದಾಗಿ ನಂಬಿಸಿ, ನನ್ನ ಮೇಲೆ ಅತ್ಯಾಚಾರವೆಸಲಾಗಿದೆ ಎಂದು ಮಲೇಷ್ಯಾ ಮೂಲದ ಮಹಿಳೆ  ಅಡ್ಯಾರ್ ಮಹಿಳಾ ಪೊಲೀಸ್ ಠಾಣೆಗೆ ಮೇ 28ರಂದು ದೂರು ನೀಡಿದ್ದರು.

ಬೆಚ್ಚಿಬೀಳಿಸುತ್ತೆ ಗ್ರಾಮ ಪಂಚಾಯಿತಿ ಸದಸ್ಯನ ಕಾಮಪುರಾಣ

ಬಳಿಕ ಠಾಣೆಗೆ ಹಾಜರಾಗುವಂತೆ ಪೊಲೀಸರು ಸಮನ್ಸ್ ನೀಡಿದ್ದರು. ಆದರೆ ಅವರು ಹಾಜರಾಗಿರಲಿಲ್ಲ. ಬುಧವಾರ ಅವರ ನಿರೀಕ್ಷಣಾ ಜಾಮೀನನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿತ್ತು. ಅದರ ಬಳಿಕ ಮಣಿಕಂದನ್ ನಾಪತ್ತೆಯಾಗಿದ್ದರು. 

ಮಣಿಕಂದನ್, ತಮಿಳುನಾಡಿನ ಎಐಎಡಿಎಂಕೆ ಸರ್ಕಾರದಲ್ಲಿ 2019ರವರೆಗೂ ಮಾಹಿತಿ ತಂತ್ರಜ್ಞಾನ ಸಚಿವರಾಗಿದ್ದರು.

Follow Us:
Download App:
  • android
  • ios