ಬೆಂಗಳೂರು, (ಜುಲೈ.01): ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. 

ಮುನಿವೆಂಕಟಪ್ಪ (56), ನಾಗವೇಣಿ (50), ಹಿರಿಯ ಪುತ್ರ ರವಿಕುಮಾರ್ (27) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಶರಣಾದ ದಂಪತಿಗಳ ಕಿರಿಯ ಪುತ್ರ ಕೆಲಸದ ನಿಮಿತ್ತ ಹೊರಗೆ ಹೋಗಿದ್ದು, ಮನೆಗೆ ಹಿಂತಿರುಗಿ ಬಂದಾಗ ಮೂವರು ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಬೆಳಕಿಗೆ ಬಂದಿದೆ. 

ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆಗೆ ಸಾಲ ಬಾಧೆ ಕಾರಣವೆಂದು ತಿಳಿಬಂದಿದೆ. ಮುನಿವೆಂಕಟಪ್ಪ ಅವರು ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದು, 27 ಲಕ್ಷ ಸಾಲ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದ್ರೆ, 

ಸಾಲ ನೀಡಿದ್ದ ಜನರು ಕುಟುಂಬಕ್ಕೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ  ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.