ಸುಮಾರು ವರ್ಷಗಳಿಂದ ಹೆಡಿಯಾಲ ಗ್ರಾಮದ ಅವರ ತಾತನ ಮನೆಯಲ್ಲಿಯೇ ವಾಸ ಮಾಡುತ್ತಿದ್ದರು ಎನ್ನಲಾಗಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅನುಮಾನಾಸ್ಪದ ರೀತಿಯಲ್ಲಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಣಿಕಂಠ

ನಂಜನಗೂಡು(ಅ.05): ನಂಜನಗೂಡು ತಾಲೂಕಿನ ಈರೇಗೌಡನ ಹುಂಡಿ ಗ್ರಾಮದಲ್ಲಿ ಗಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗ್ರಾಮದ ನಿವಾಸಿ ಮಣಿಕಂಠ (37) ಎಂಬವರು ನೇಣಿಗೆ ಶರಣಾದವರು. ಸುಮಾರು ವರ್ಷಗಳಿಂದ ಹೆಡಿಯಾಲ ಗ್ರಾಮದ ಅವರ ತಾತನ ಮನೆಯಲ್ಲಿಯೇ ವಾಸ ಮಾಡುತ್ತಿದ್ದರು ಎನ್ನಲಾಗಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅನುಮಾನಾಸ್ಪದ ರೀತಿಯಲ್ಲಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮ್ಮ ಜಮೀನಿನಲ್ಲಿ ಟೊಮೊಟೊ, ಬಾಳೆ ಇನ್ನಿತರ ಬೆಳೆಗಳನ್ನು ಬೆಳೆದು ಪ್ರಾಣಿಗಳಿಂದ ರಕ್ಷಿಸಲು ರಾತ್ರಿ ವೇಳೆ ಜಮೀನಿನಲ್ಲೇ ಮರದ ಅಟ್ಟಿನಿಯಲ್ಲಿ ಕಾವಲು ಕಾಯುತ್ತಿದ್ದರು. ತಾಯಿ ಸಣ್ಣದೇವಮ್ಮ ಮೃತ ಮಗನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಂಗಳೂರು: ಬೆಟ್ಟಿಂಗ್ ಗೀಳು, ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಸಿಪಿಐ ಚಂದ್ರಶೇಖರ್, ಎಸ್ ಐ ರಮೇಶ್ ಕರಕಿಕಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.