* ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಉದಗಟ್ಟಿ ಗ್ರಾಮದಲ್ಲಿ ನಡೆದ ಘಟನೆ*  70 ಸಾವಿರ ಬೆಳೆ ಸಾಲ, ಖಾಸಗಿ ವ್ಯಕ್ತಿಗಳಿಂದ 3-4 ಲಕ್ಷ ಸಾಲ ಮಾಡಿಕೊಂಡಿದ್ದ ರೈತ*  ಈ ಸಂಬಂಧ ರಾಣಿಬೆನ್ನೂರು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು 

ರಾಣಿಬೆನ್ನೂರು(ಜು.24): ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ತಾಲೂಕಿನ ಉದಗಟ್ಟಿ ಗ್ರಾಮದಲ್ಲಿ ಸಂಭವಿಸಿದೆ. 

ಗ್ರಾಮದ ವೀರೇಶ ಶಿವಾನಂದಪ್ಪ ಜ್ಯೋತಿ (35) ಮೃತ ರೈತ. ಇವರು ಕೃಷಿಗಾಗಿ ನಗರದ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ 70 ಸಾವಿರ ಬೆಳೆ ಸಾಲ, ಖಾಸಗಿ ವ್ಯಕ್ತಿಗಳಿಂದ 3-4 ಲಕ್ಷ ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.

ಚಿಕ್ಕೋಡಿ: ಮೊಬೈಲ್‌ ಟವರ್‌ಗೆ ನೇಣು ಬಿಗಿದು ಆತ್ಮಹತ್ಯೆ

ಆದರೆ, ಕಳೆದ ಎರಡ್ಮೂರು ವರ್ಷಗಳಿಂದ ಸಮರ್ಪಕ ಬೆಳೆ ಬಾರದ ಕಾರಣ ಸಾಲ ತೀರಿಸುವ ಚಿಂತೆಯಿಂದ ಮನನೊಂದು ಮನೆಯ ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.