ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದ ಘಟನೆ, ಮಂಜುನಾಥ ರುದ್ರಪ್ಪ ನಾಗನೂರು ಆತ್ಮಹತ್ಯೆಗೆ ಶರಣಾದ ರೈತ.

ಬ್ಯಾಡಗಿ(ಜೂ.23): ಮದುವೆಗೆ ಹೆಣ್ಣು ಸಿಗದೆ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ರುದ್ರಪ್ಪ ನಾಗನೂರು (36) ಆತ್ಮಹತ್ಯೆ ಮಾಡಿಕೊಂಡ ರೈತ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ಎಂಟು ವರ್ಷಗಳಿಂದ ಕನ್ಯೆ ಹುಡುಕುತ್ತಿದ್ದರು. ಇವರು ಕೃಷಿಕರಾಗಿದ್ದು ಯಾರೊಬ್ಬರೂ ಕನ್ಯೆ ನೀಡಿಲ್ಲ. ಇದರಿಂದ ಮನನೊಂದು ಜೂ. 15ರಂದು ಜಮೀನಿಗೆ ತೆರಳಿ ವಿಷ ಸೇವಿಸಿದ್ದರು. ಸುದ್ದಿ ತಿಳಿದು ತಕ್ಷಣ ಪಾಲಕರು ಹಾಗೂ ಗ್ರಾಮಸ್ಥರು ಬ್ಯಾಡಗಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕಿಮ್ಸ್‌ಗೆ ದಾಖಲಿಸಿದ್ದರು. 

ಬಾಡಿಗೆದಾರರ ಕಿರುಕುಳಕ್ಕೆ ಬೇಸತ್ತು, ಆತ್ಮಹತ್ಯೆ ಶರಣಾದ ಮನೆ ಮಾಲಕಿ

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜೂ. 21ರಂದು ಮೃತರಾಗಿದ್ದಾರೆ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.