*  ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದಲ್ಲಿ ನಡೆದ ಘಟನೆ*  ಪಾಚರಬೆಟ್ಟು ಕೃಷ್ಣ ಪೂಜಾರಿ ಎಂಬುವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ*  ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿರುವ ಪೊಲೀಸರು 

ಕಾರ್ಕಳ(ಜೂ.19): ಅಂಗವಿಕಲ ಮಗನನ್ನು ಬಾವಿಗೆ ತಳ್ಳಿದ ತಂದೆ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದಲ್ಲಿ ನಿನ್ನೆ(ಶನಿವಾರ) ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಾಚರಬೆಟ್ಟು ಕೃಷ್ಣ ಪೂಜಾರಿ ಆತ್ಮಹತ್ಯೆ ಮಾಡಿಕೊಂಡವರು. ಇವರು ತನ್ನ ಅಂಗವಿಕಲ ಪುತ್ರ 26 ವರ್ಷದ ದೀಪೇಶ್‌ ಎಂಬಾತನನ್ನು ಮನೆ ಸಮೀಪದ ಬಾವಿಗೆ ತಳ್ಳಿದ್ದಾರೆ. ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ಪೂಜಾರಿ ಅವರ ಪತ್ನಿ ಅನಾರೋಗ್ಯಕ್ಕೀಡಾಗಿದ್ದು, ಇದ್ದ ಒಬ್ಬ ಮಗನೂ ಅಂಗವಿಕಲನಾಗಿದ್ದರಿಂದ ಮನನೊಂದು ಈ ಕೃತ್ಯವೆಸಗಿದ್ದಾರೆಂದು ತಿಳಿದುಬಂದಿದೆ.

ಮಾನಸಿಕ ಖಿನ್ನತೆ: ರೈಫಲ್‌ನಿಂದ ಶೂಟ್ ಮಾಡಿಕೊಂಡು ಪೇದೆ ಆತ್ಮಹತ್ಯೆ!

ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ವಿಷ್ಣುವರ್ಧನ್‌, ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್‌, ವೃತ್ತ ನಿರೀಕ್ಷಕ ಸಂಪತ್‌ ಕುಮಾರ್‌, ಅಜೆಕಾರು ಎಸ್‌ಐ ಶುಭಕರ್‌, ಪೊಲೀಸ್‌ ಸಿಬ್ಬಂದಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.