ಹೆಂಡತಿ ಕೂಲಿ ಕೆಲಸಕ್ಕೆ ಹೊರಗಡೆ ಹೋದಾಗ ತನ್ನ 13 ವರ್ಷದ ಮಗಳ ಮೇಲೆ ತಂದೆ ಅತ್ಯಾಚಾರ ಮಾಡಿದ್ದಾನೆ ಎಂದು ಆತನ ಹೆಂಡತಿ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. 

ತಿಪಟೂರು(ಮೇ.12): ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ನಡೆದಿರುವ ಘಟನೆ ನಗರದ ಗಾಂಧಿನಗರದ ಹಿಪ್ಪೇತೋಪಿನಲ್ಲಿ ಮೇ 6 ರಂದು ನಡೆದಿದ್ದು, ಪ್ರಕರಣ ತಡವಾಗಿ ಬೆಳೆಕಿಗೆ ಬಂದಿದೆ.

ಹೆಂಡತಿ ಕೂಲಿ ಕೆಲಸಕ್ಕೆ ಹೊರಗಡೆ ಹೋದಾಗ ತನ್ನ 13 ವರ್ಷದ ಮಗಳ ಮೇಲೆ ತಂದೆ ಅತ್ಯಾಚಾರ ಮಾಡಿದ್ದಾನೆ ಎಂದು ಆತನ ಹೆಂಡತಿ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಈ ಘಟನೆ ಮೇ 6 ರಂದು ನಡೆದಿದೆ.

ಭಾವ ರೇಪ್ ಮಾಡಿದ ಎಂದು ಸಂಕಟ ಹೇಳಿಕೊಂಡರೆ, 'ನೀನಿನ್ನು ನಂಗೆ ಅತ್ತಿಗೆ' ಎಂದ ಗಂಡ!

ಅತ್ಯಾಚಾರ ಮಾಡಿದ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಪೋಕ್ಸೋ ಕಾಯ್ದೆಯಡಿಯಲ್ಲಿ ಅತ್ಯಾಚಾರಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.