ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಜಾಬ್ ಕಳೆದುಕೊಳ್ಳುವ ಭೀತಿ, ಪೇಟಿಎಂ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!

ಇತ್ತೀಚೆಗೆ ಪೇಟಿಎಂ ಪೇಮೆಂಟ್ಸ್  ಬ್ಯಾಂಕ್ ಮೇಲೆ ಆರ್ ಬಿಐ ನಿರ್ಬಂಧ ವಿಧಿಸಿದ ಬೆನ್ನಲ್ಲೇ  ಉದ್ಯೋಗಿಗಳಿಗೆ ಜಾಬ್ ಕಳೆದುಕೊಳ್ಳುವ ಭಯ ಆರಂಭವಾಗಿದೆ. ಇದೀಗ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ  ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Fearing job loss Paytm Payments Bank employee self death in Indore gow

ಇಂದೋರ್ (ಫೆ.27): ಇತ್ತೀಚೆಗೆ ಪೇಟಿಎಂ ಪೇಮೆಂಟ್ಸ್  ಬ್ಯಾಂಕ್ ಮೇಲೆ ಆರ್ ಬಿಐ ನಿರ್ಬಂಧ ವಿಧಿಸಿದ ಬೆನ್ನಲ್ಲೇ ಅದರಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಜಾಬ್ ಕಳೆದುಕೊಳ್ಳುವ ಭಯ ಆರಂಭವಾಗಿದೆ. ಇದೀಗ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ 35 ವರ್ಷದ ಸಿಬ್ಬಂದಿಯೊಬ್ಬರು ಸಂಭಾವ್ಯ ಉದ್ಯೋಗ ನಷ್ಟದ ಒತ್ತಡದಿಂದಾಗಿ ಇಂದೋರ್‌ನಲ್ಲಿ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಪೇಟಿಎಂ ಸಿಬ್ಬಂದಿ ಗೌರವ್ ಗುಪ್ತಾ ಕಳೆದ ಕೆಲವು ದಿನಗಳಿಂದ ಕಂಪನಿಯು ಮುಚ್ಚಬಹುದು ಮತ್ತು ಕೆಲಸ ಕಳೆದುಕೊಳ್ಳಬಹುದು ಎಂಬ ಭಯದಿಂದ ಒತ್ತಡದಲ್ಲಿದ್ದರು. ಕೆಲಸ ಕಳೆದುಕೊಂಡರೆ ಮುಂದೇನು ಎಂಬ ಭಯ ಅವರನ್ನು ಕಾಡಿತ್ತು. ಹೀಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾವು ಈ  ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ತಾರೇಶ್ ಕುಮಾರ್ ಸೋನಿ ತಿಳಿಸಿದ್ದಾರೆ. 

ಗುಪ್ತಾ ಭಾನುವಾರ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಘಟನೆ ನಡೆದ ಸ್ಥಳದಿಂದ ಪೊಲೀಸರಿಗೆ ಯಾವುದೇ ಡೆತ್‌ನೋಟ್‌ ಸಿಕ್ಕಿಲ್ಲ ಎಂದು ಸೋನಿ ತಿಳಿಸಿದ್ದಾರೆ. ಗಮನಿಸಬೇಕಾದ ವಿಚಾರವೆಂದರೆ ರಿಸರ್ವ್ ಬ್ಯಾಂಕ್ ಮಾರ್ಚ್ 15 ರ ನಂತರದ ಯಾವುದೇ ಗ್ರಾಹಕರಿಂದ ಠೇವಣಿ ಮತ್ತು ಕ್ರೆಡಿಟ್‌ಗಳನ್ನು ಸ್ವೀಕರಿಸದಂತೆ ಪೇಟಿಎಂಗೆ PPBL ಅನ್ನು ನಿರ್ಬಂಧಿಸಿದೆ.

ನೀವು ಪಾವತಿಗೆ ಪೇಟಿಎಂ UPI ಬಳಸುತ್ತಿದ್ದೀರಾ? ಹಾಗಾದರೆ ನಿಮಗಿದೆ ಆರ್‌ಬಿಐ ಸಂದೇಶ!

ಇತ್ತೀಚೆಗೆ ಪೇಟಿಎಂ ಪೇಮೆಂಟ್ಸ್  ಬ್ಯಾಂಕ್ ಮೇಲೆ ಆರ್ ಬಿಐ ನಿರ್ಬಂಧ ವಿಧಿಸಿದ ಬೆನ್ನಲ್ಲೇ ಯುಪಿಐ ಪಾವತಿ ವ್ಯವಸ್ಥೆ ಬಗ್ಗೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ತುಸು ಭಯ ಮೂಡಿರೋದಂತೂ ನಿಜ. ಆರ್ ಬಿಐ ನಿರ್ಧಾರದ ಬೆನ್ನಲ್ಲೇ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮಾರ್ಚ್ 15ರಂದು ಮುಚ್ಚಲ್ಪಡಲಿದೆ.

2024ರ ಫೆಬ್ರವರಿ 29 ರ ನಂತರ ಯಾವುದೇ ಗ್ರಾಹಕ ಖಾತೆಗಳು, ಪ್ರಿಪೇಯ್ಡ್ ಇನ್ಸ್‌ಟ್ರುಮೆಂಟ್‌ಗಳು,  ವ್ಯಾಲೆಟ್‌ಗಳು, ಫಾಸ್ಟ್‌ಟ್ಯಾಗ್‌ಗಳು, ಎನ್‌ಸಿಎಂಸಿ ಕಾರ್ಡ್‌ಗಳು ಇತ್ಯಾದಿಗಳಲ್ಲಿ ಯಾವುದೇ ಬಡ್ಡಿ, ಕ್ಯಾಶ್‌ಬ್ಯಾಕ್ ಅಥವಾ ಮರುಪಾವತಿಗಳನ್ನು ಹೊರತುಪಡಿಸಿ ಯಾವುದೇ ಸಮಯದಲ್ಲಿ ಕ್ರೆಡಿಟ್ ಮಾಡಬಹುದಾದ ಯಾವುದೇ ಹೆಚ್ಚಿನ ಠೇವಣಿ ಅಥವಾ ಕ್ರೆಡಿಟ್ ವಹಿವಾಟುಗಳು ಅಥವಾ ಟಾಪ್ ಅಪ್‌ಗಳನ್ನು ಅನುಮತಿಸಲಾಗುವುದಿಲ್ಲ ಎಂದು ಆರ್‌ಬಿಐ ಸ್ಪಷ್ಟಪಡಿಸಿತ್ತು.ಆದರೆ, ಆ ಬಳಿಕ ಈ ಗಡುವನ್ನು ಮತ್ತೆ 15 ದಿನಗಳ ಕಾಲ ಅಂದರೆ ಮಾರ್ಚ್ 15ರವರೆಗೆ ವಿಸ್ತರಿಸಿತ್ತು.

ಒಂದೇ ದಿನ ಆಪರೇಷನ್‌ ಮಾಡಿಸಿಕೊಂಡ ಮೂವರು ಮಹಿಳೆಯರು ಸಾವು, ಇದೆಂಥಾ ಸರ್ಕಾರಿ ಆಸ್ಪತ್ರೆ!

ಆರ್ ಬಿಐ ನಿರ್ಬಂಧದ ಬಳಿಕ ಸಂಕಷ್ಟಕ್ಕೆ ಸಿಲುಕಿರುವ ಪೇಟಿಎಂ ಸಂಸ್ಥೆ, ತನ್ನ ಕ್ಯುಆರ್ ಕೋಡ್ ಹಾಗೂ ಸೌಂಡ್ ಬಾಕ್ಸ್ ಸೇವೆಗಳು ಮಾರ್ಚ್ 15ರ ನಂತರವೂ ಕಾರ್ಯನಿರ್ವಹಿಸಲಿದೆ ಎಂಬ ಭರವಸೆಯನ್ನು ಗ್ರಾಹಕರಿಗೆ ನೀಡಿದೆ. ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಪೇಟಿಎಂ ಸ್ಥಾಪಕ ಹಾಗೂ ಸಿಇಒ ವಿಜಯ್ ಶಂಕರ್ ಮಾಹಿತಿ ನೀಡಿದ್ದಾರೆ. ಇನ್ನು ಈ ಬಗ್ಗೆ ಆರ್ ಬಿಐ ಬಿಡುಗಡೆಗೊಳಿಸಿರುವ ನಿರಂತರ ಕೇಳಲಾಗುವ ಪ್ರಶ್ನಾವಳಿಗಳಲ್ಲಿ (ಎಫ್ ಎಕ್ಯು) ಈಗಾಗಲೇ ಮಾಹಿತಿ ನೀಡಿದ್ದು, ಕ್ಯುಆರ್ ಕೋಡ್ ಹಾಗೂ ಸೌಂಡ್ ಬಾಕ್ಸ್ ಹಾಗೂ ಇಡಿಸಿ ಬಳಕೆಗೆ ಯಾವುದೇ ಸಮಸ್ಯೆಯಿಲ್ಲ ಎಂಬ ಸ್ಪಷ್ಟನೆ ನೀಡಿದೆ. ಇನ್ನು ಈ ಟ್ವೀಟ್ ಜೊತೆಗೆ ಪೇಟಿಎಂ ಸಿಇಒ ಜಾಹೀರಾತನ್ನು ಕೂಡ ಹಂಚಿಕೊಂಡಿದ್ದು, ಅದರಲ್ಲಿ ಪೇಟಿಎಂ ಸಾಧನಗಳು ಹಾಗೂ ಕ್ಯುಆರ್ ಕೋಡ್ 'ಇಂದು, ನಾಳೆ, ಯಾವಾಗಲೂ' ಬಳಕೆಯಲ್ಲಿರುತ್ತದೆ ಎಂದು ಹೇಳಿದ್ದಾರೆ.

Latest Videos
Follow Us:
Download App:
  • android
  • ios