ಭ್ರೂಣ ಹತ್ಯೆ ಪ್ರಕರಣ: ತಿರುಮಲಶೆಟ್ಟಿಹಳ್ಳಿಯ ಎಸ್ಪಿಜಿ ಆಸ್ಪತ್ರೆಯ ವೈದ್ಯ ಶ್ರೀನಿವಾಸ್ ಅರೆಸ್ಟ್
ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧ ಎಸ್ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ. ಶ್ರೀನಿವಾಸರನ್ನು ಪೊಲೀಸರು ಬಂಧಿಸಿದ್ದಾರೆ. ಭ್ರೂಣ ಹತ್ಯೆ ಪ್ರಕರಣ ಬಯಲಿಗೆ ಬಂದ ನಂತರ ಚೆನ್ನಸಂದ್ರ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಶ್ರೀನಿವಾಸ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೊಸಕೋಟೆ (ಡಿ.17): ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧ ಎಸ್ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ. ಶ್ರೀನಿವಾಸರನ್ನು ಪೊಲೀಸರು ಬಂಧಿಸಿದ್ದಾರೆ. ಭ್ರೂಣ ಹತ್ಯೆ ಪ್ರಕರಣ ಬಯಲಿಗೆ ಬಂದ ನಂತರ ಚೆನ್ನಸಂದ್ರ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಶ್ರೀನಿವಾಸ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಡಾ.ಶ್ರೀನಿವಾಸ್ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶ್ರೀನಿವಾಸ್ ಮೊದಲ ಆರೋಪಿಯಾಗಿದ್ದು ನರ್ಸ್ ಅನಿತಾ ಎ2, ನರ್ಸ್ ನೇತ್ರಾ ಎ3, ರೇವತಿ ಎ4 ಮತ್ತು ರಾಧಿಕಾ ಎ5 ಆರೋಪಿಯಾಗಿದ್ದಾರೆ.
ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಬಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಅಬಾರ್ಷನ್ ವೇಳೆ ರೆಡ್ ಹ್ಯಾಂಡ್ ಆಗಿ ವೈದ್ಯರು ಸಿಕ್ಕಿಬಿದ್ದಿದ್ದರು. ತೀವ್ರ ವಿಚಾರಣೆ ನಂತರ ಒಂದಲ್ಲ, ಎರಡಲ್ಲ, 14 ಹೆಣ್ಣು ಭ್ರೂಣಗಳ ಹತ್ಯೆ ಮಾಡಿರುವುದು ಬಯಲಾಗಿದೆ.
ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಲಿಖಿತ ಅನುಮತಿ ಇಲ್ಲದೆ ಸಂತ್ರಸ್ತೆ ಭೇಟಿಗೆ ಅವಕಾಶವಿಲ್ಲ; ಹೈಕೋರ್ಟ್