Breaking: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಎಫ್ಐಆರ್‌

ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆ ಆರೋಪಿಸಿದ್ದಾರೆ. 2023 ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ಅರುಣ್ ಪುತ್ತಿಲ ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಲಾಗಿದೆ. ಅರುಣ್ ಪುತ್ತಿಲ ವಿರುದ್ಧ IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 

FIR against BJP leader Arun Puttila on Sexual Harassment on woman case grg

ಮಂಗಳೂರು(ಸೆ.01):  ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್‌ ದಾಖಲಾಗಿದೆ. ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  47 ವರ್ಷದ ಮಹಿಳೆ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದಾರೆ. 

ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆ ಆರೋಪಿಸಿದ್ದಾರೆ. 2023 ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ಅರುಣ್ ಪುತ್ತಿಲ ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಲಾಗಿದೆ. ಅರುಣ್ ಪುತ್ತಿಲ ವಿರುದ್ಧ IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 

ಬಿಜೆಪಿ ಮುಖಂಡ ಅರುಣ್ ಪುತ್ತಿಲ ಅವರದ್ದು ಎನ್ನಲಾದ ರಾಜಕೀಯ ಸಂಬಂಧಿ ಆಡಿಯೋ ವೈರಲ್!

ಅರುಣ್ ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಂಡಾಯ ಸ್ಪರ್ಧೆ ಮಾಡಿದ್ದರು. ಬಿಜೆಪಿಗೆ ಠಕ್ಕರ್ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಫಿದಾ ಆಗಿ, ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ಇದೀಗ ಮಹಿಳೆಯ ದೂರಿನಡಿ ಅರುಣ್ ಪುತ್ತಿಲ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಕೆಲ ದಿನಗಳ ಹಿಂದಷ್ಟೇ ಅರುಣ್ ಪುತ್ತಿಲ ಮತ್ತು ಮಹಿಳೆಯೊಬ್ಬರ ಆಡಿಯೋ ಭಾರೀ ವೈರಲ್ ಆಗಿತ್ತು. 

Latest Videos
Follow Us:
Download App:
  • android
  • ios