ದುಡ್ಡು ಮಾಡಲು ನಕಲಿ ದಾಖಲೆ ಸೃಷ್ಟಿ: ಸಿಎಂ ಸಿದ್ದರಾಮಯ್ಯ ಆಪ್ತ ಸೋಮಶೇಖರ್ ವಿರುದ್ಧ ಎಫ್‌ಐಆರ್

ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಿರುದ್ಧ ಸುಳ್ಳು ದಾಖಲೆ ಹಾಗೂ ಸರ್ಕಾರಿ ಪತ್ರ ನಖಲಿ ಮಾಡಿರುವ ಆರೋಪ ಕೇಳಿ ಬಂದಿದೆ.   ರೇರಾ ಅಧಿಕಾರಿ ಆದೀಶ್ ಸಾಗರ್ ಅವರು ಸೋಮಶೇಖರ್ ದಂಪತಿ ಹಾಗೂ ಇತರ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. 

FIR against CM Siddaramaiah's Close MK Somashekhar For Creation of Fake Documents grg

ಮೈಸೂರು(ಫೆ.15):  ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ  ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎಂ.ಕೆ.ಸೋಮಶೇಖರ್ ವಿರುದ್ಧ ಎಫ್‌ಐಆರ್ ಮಾಡಿ, ತನಿಖೆ ಮಾಡುವಂತೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.  ಎಂ.ಕೆ.ಸೋಮಶೇಖರ್ ಪತ್ನಿ ಹೆಸರಿನಲ್ಲಿ ಇರುವ ಭೂಮಿಯಲ್ಲಿ ಬಡಾವಣೆ ನಿರ್ಮಿಸುತ್ತಿದ್ದಾರೆ. ಮೈಸೂರು ತಾಲೂಕಿನ ಉದ್ಬೂರು ಗ್ರಾಮ ಸರ್ವೇ ನಂ.315 ಮತ್ತು ಸರ್ವೇ ನಂ,317 ರಲ್ಲಿ ಒಟ್ಟು 9 ಎಕರೆ 21 ಗುಂಟೆ ಜಾಗದಲ್ಲಿ ಬಡಾವಣೆ ನಿರ್ಮಾಣ ಆಗುತ್ತಿದೆ. 

ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಿರುದ್ಧ ಸುಳ್ಳು ದಾಖಲೆ ಹಾಗೂ ಸರ್ಕಾರಿ ಪತ್ರ ನಖಲಿ ಮಾಡಿರುವ ಆರೋಪ ಕೇಳಿ ಬಂದಿದೆ.   ರೇರಾ ಅಧಿಕಾರಿ ಆದೀಶ್ ಸಾಗರ್ ಅವರು ಸೋಮಶೇಖರ್ ದಂಪತಿ ಹಾಗೂ ಇತರ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. 

ಅಕ್ರಮ ಆಸ್ತಿ ಗಳಿಕೆ: ಡಿ.ಕೆ.ಶಿವಕುಮಾರ್ ವಿರುದ್ಧ ಲೋಕಾ ಎಫ್‌ಐಆರ್‌

ಎಂ.ಕೆ.ಸೋಮಶೇಖರ್ ಮತ್ತು ಪತ್ನಿ ಎಲ್.ಕುಸುಮಾ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಕೆಲವು ಅಧಿಕಾರಿಗಳು, ಉದೂರು ಗ್ರಾಮ ಪಂಚಾಯ್ತಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಭೂಮಾಪಕರು ಮತ್ತು ಇನ್ನಿತರರು ಸೇರಿಕೊಂಡ, ಒಳಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ. 

ಅಕ್ರಮವಾಗಿ ಹಣ ಸಂಪಾದಿಸಲು ಕಾನೂನು ಬಾಹಿರ ಲೇಔಟ್ ನಿರ್ಮಾಣ ಮಾಡಿದ್ದಾರೆ. ನಕಲು ಮತ್ತು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಮೋಸ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ. ಸರ್ಕಾರದ ದಾಸ್ತಾವೇಜುಗಳನ್ನು ಖೋಟಾ ಮಾಡಲಾಗಿದೆ ಎಂದು ಆದೀಶ್ ಸಾಗರ್ ಗಂಭೀರವಾದ ಆರೋಪ ಮಾಡಿದ್ದಾರೆ.  

ಆರೋಪಿಗಳ ವಿರುದ್ಧ ತನಿಖೆ ಮಾಡಿ ಎರಡು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಬೆಂಗಳೂರಿನ 42ನೇ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ ಆದೇಶ ಮಾಡಿದೆ. ಕೋರ್ಟ್ ಆದೇಶದ ಅನ್ವಯ ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ 1860 U/s 120B, 406, 409, 420, 425, 427, 464, 465, 468, 471 ಅಡಿ  ಪೊಲೀಸರು ಕೇಸ್ ದಾಖಲಿಸಿದ್ದಾರೆ. 

Latest Videos
Follow Us:
Download App:
  • android
  • ios