ಕಚೇರಿಯಲ್ಲಿ ಕೆಲಸ ಮಾಡುವ ಮಹಿಳೆಗೆ ಕಳೆದ ಆರು ತಿಂಗಳಿಂದ ನಾರಾಯಣಸ್ವಾಮಿ ಕಿರುಕುಳ ಕೊಡುತ್ತಿದ್ದರು ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ರು ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು‌ ನೀಡುತ್ತಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ ಸಂತ್ರಸ್ತ ಮಹಿಳೆ. 

ಬೆಂಗಳೂರು(ಜು.01):  ಸರ್ಕಾರಿ ಅಭಿಯೋಜನಾ ಅಧಿಕಾರಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿ ಬಂದಿದೆ. ಹೌದು, ಅಭಿಯೋಜನಾ ಇಲಾಖೆಯ ಎಓ ನಾರಾಯಣಸ್ವಾಮಿ ಎಂಬುವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಿಸಲಾಗಿದೆ. ಈ ಸಂಬಂಧ ನಾರಾಯಣಸ್ವಾಮಿ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ. 

ಕಚೇರಿಯಲ್ಲಿ ಕೆಲಸ ಮಾಡುವ ಮಹಿಳೆಗೆ ಲೈಂಗಿಕ‌ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಾರಾಯಣಸ್ವಾಮಿ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ 354(A) ಹಾಗೂ 506 ಕಾಯ್ದೆಯಡಿ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. 

ಬೆಂಗಳೂರು: ವಿಮಾನದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟ ಪಿಆರ್‌ಓ ಸೆರೆ

ಕಚೇರಿಯಲ್ಲಿ ಕೆಲಸ ಮಾಡುವ ಮಹಿಳೆಗೆ ಕಳೆದ ಆರು ತಿಂಗಳಿಂದ ನಾರಾಯಣಸ್ವಾಮಿ ಕಿರುಕುಳ ಕೊಡುತ್ತಿದ್ದರು ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ರು ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು‌ ನೀಡುತ್ತಿರುವುದಾಗಿ ಸಂತ್ರಸ್ತ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಆರೋಪಿ ನಾರಾಯಾಣಸ್ವಾಮಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.