ಭಾನುವಾರ ರಾತ್ರಿ ನಡೆದ ಜೀ ಟಿವಿಯ ‘ಸರಿಗಮಪ’ ಫಿನಾಲೆ ಸ್ಪರ್ಧೆ| ಕೇವಲ 100 ಮಂದಿ ಭಾಗವಹಿಸಲು ಮಾತ್ರ ಅನುಮತಿ ಪಡೆದುಕೊಂಡಿದ್ದ ಆಯೋಜಕರು| ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗಿ|
ಬೆಂಗಳೂರು(ಡಿ.22): ಕೊರೋನಾ ನಿಯಮ ಉಲ್ಲಂಘನೆ ಆರೋಪದ ಮೇಲೆ ಕನ್ನಡದ ಖಾಸಗಿ ಮನರಂಜನಾ ವಾಹಿನಿಯ ವಿರುದ್ಧ ಬ್ಯಾಟರಾಯನಪುರ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಮೈಸೂರು ರಸ್ತೆಯ ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಕನ್ನಡದ ಖಾಸಗಿ ಮನರಂಜನಾ ವಾಹಿನಿ ಜೀ ಟಿವಿಯ ‘ಸರಿಗಮಪ’ ಫಿನಾಲೆ ಸ್ಪರ್ಧೆ ಆಯೋಜಿಸಲಾಗಿತ್ತು. ಈ ವೇಳೆ ಕೇವಲ 100 ಮಂದಿ ಭಾಗವಹಿಸಲು ಮಾತ್ರ ಆಯೋಜಕರು ಅನುಮತಿ ಪಡೆದುಕೊಂಡಿದ್ದರು. ಆದರೆ, ನೂರಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕೊರೋನಾ ಸಂದರ್ಭದಲ್ಲಿ ಮಾಸ್ಕ್ ಧರಿಸದೆ, ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಕಂಡು ಬಂದಿದೆ. ಕೊರೋನಾ ನಿಯಮ ಉಲ್ಲಂಘಿಸಿದ್ದಾರೆ.
'ಸರಿಗಮಪ ಸೀಸನ್ 17 ' ವಿಜಯದ ಕಿರೀಟ ಮುಡಿಗೇರಿಸಿಕೊಂಡ ಶ್ರೀನಿಧಿ ಶಾಸ್ತ್ರಿ!
ಈ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಪ್ರಾಥಮಿಕ ವರದಿಯನ್ನು ಸಿದ್ಧಪಡಿಸಿ ಕೋರ್ಟ್‌ಗೆ ಸಲ್ಲಿಸಲಾಗಿದೆ. ಈ ವರದಿಯಾಧರಿಸಿ ಕೋರ್ಟ್ ನೀಡುವ ಸೂಚನೆ ಅನ್ವಯ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 22, 2020, 7:51 AM IST