ಮುಡಾ ಹಗರಣ ಎಫ್ಐಆರ್: ಸಿದ್ದರಾಮಯ್ಯ ಎ1, ಪಾರ್ವತಿ ಎ2 ಮತ್ತು ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಎ3

ಮುಡಾ ಭೂಮಿ ಹಂಚಿಕೆ ಹಗರಣದಲ್ಲಿ ನ್ಯಾಯಾಲಯ ಸೂಚಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ವಿರುದ್ಧ ಮೈಸೂರು ಲೋಕಾಯುಕ್ತ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

FIR On Siddaramaiah in Muda land Scam at mysuru lokayukta sat

ಮೈಸೂರು (ಸೆ.27): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದ ಭೂಮಿ ಹಂಚಿಕೆ ಹಗರಣದಲ್ಲಿ ನ್ಯಾಯಾಲಯ ಸೂಚಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ವಿರುದ್ಧ ಮೈಸೂರು ಲೋಕಾಯುಕ್ತ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ 14 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪದಲ್ಲಿ ಈಗಾಗಲೇ ಕೋರ್ಟ್‌ನಿಂದ ಲೋಕಾಯುಕ್ತ ತನಿಖೆ ಮಾಡುವಂತೆ ಆದೇಶ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಬೇಕಿತ್ತು. ಇನ್ನು ಲೋಕಾಯುಕ್ತ ತನಿಖೆ ನಡೆಸಿ ಒಟ್ಟು ಮೂರು ತಿಂಗಳಲ್ಲಿ ವರದಿ ನೀಡುವಂತೆ ಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ: ಸುಳಿವು ಕೊಟ್ಟ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ!

ಇನ್ನು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎ1 ಆರೋಪಿ ಆಗಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಎ2, ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಎ3 ಹಾಗೂ ಭೂಮಿ ಮಾರಾಟ ಮಾಡಿದ ದೇವರಾಜು ಎ4  ಆರೋಪಿಗಳನ್ನಾಗಿ ಮಾಡಿ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಇನ್ನು ಎಫ್‌ಐಆರ್‌ ಅನ್ನು ಕೋರ್ಟ್ ನಿರ್ದೇಶನ ನೀಡಿದ್ದ ಸೆಕ್ಷನ್‌ಗಳ ಅಡಿಯಲ್ಲಿಯೇ ದಾಖಲು ಮಾಡಲಾಗಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಮೈಸೂರು ಪ್ರವಾಸದಲ್ಲಿಯೇ ಇದ್ದು, ಅವರನ್ನು ಬಂಧನ ಮಾಡಲಾಗುತ್ತದೆಯೇ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಟಿ.ಜೆ. ಅಬ್ರಾಹಂ ಸೇರಿ ಒಟ್ಟು ಮೂವರು ಪ್ರತ್ಯೇಕವಾಗಿ ರಾಜಪಾಲರಿಗೆ ದೂರು ನೀಡಿದ್ದರು. ಇವರ ದೂರನ್ನು ಆಧರಿಸಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ನೋಟೀಸ್ ಜಾರಿ ಮಾಡಿದ್ದರು. ಆದರೆ, ಪ್ರಾಸಿಕ್ಯೂಷನ್ ನೊಟೀಸ್ ವಜಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಇಲ್ಲಿ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ರಾಜ್ಯಪಾಲರ ತೀರ್ಮಾನವನ್ನು ಎತ್ತಿ ಹಿಡಿದಿತ್ತು. ಜೊತೆಗೆ, ಕೆಳ ಹಂತದ ನ್ಯಾಯಾಲಯಗಳು ವಿಚಾರಣೆ ಮಾಡಿ ತೀರ್ಪು ನೀಡುವುದಕ್ಕೆ ಅನುಮತಿಯನ್ನು ನೀಡಿತ್ತು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಬಗ್ಗೆ ಕೋಡಿಶ್ರೀ ನುಡಿದ ಭವಿಷ್ಯವಾಣಿ ನಿಜವಾಯ್ತು!

ಇದರ ಬೆನ್ನಲ್ಲಿಯೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಿಎಂ ಸಿದ್ದರಾಮಯ್ಯ ಅವರ ಮುಡಾ ಹಗರಣದ ಅರ್ಜಿಯನ್ನು ವಿಚಾರಣೆ ಮಾಡಲಾಯಿತು. ಈ ವೇಳೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಇಲಾಖೆಯಿಂದ 3 ತಿಂಗಳಲ್ಲಿ ತನಿಖೆ ಮಾಡುವಂತೆ ಆದೇಶ ಹೊರಡಿಸಲಾಗಿತ್ತು. ಇದರ ಹಿನ್ನೆಲೆಯಲ್ಲಿ ಮೈಸೂರಿನ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಉದೇಶ್ ಉದೇಶ್ ಅವರು ಎಫ್ಐಆರ್ ದಾಖಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್​ 120 ಬಿ, 166, 403, 420, 426, 465, 468, 340, 351 ಅಡಿ ಎಫ್​ಐಆರ್ ದಾಖಲು ಮಾಡಲಾಗಿದೆ. ಜೊತೆಗೆ, ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಿಸಲಾಗಿದೆ.

Latest Videos
Follow Us:
Download App:
  • android
  • ios