ಸೀಮೆ ಎಣ್ಣೆ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ: ರಕ್ಷಿಸಲು ಹೋದ ಪೊಲೀಸರಿಗೂ ತಗುಲಿದ ಬೆಂಕಿ
* ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದಲ್ಲಿ ನಡೆದ ಘಟನೆ
* ಚಿಕಿತ್ಸೆ ಫಲಕಾರಿಯಾಗದೇ ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿ ಸಾವು
* ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ತುಮಕೂರು(ಮೇ.20): ಪತ್ನಿಯೊಂದಿಗಿನ ಕಲಹಕ್ಕಾಗಿ ಬೇಸತ್ತ ಪತಿಯೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ತಾಲ್ಲೂಕು ಕೋರಾ ಪೊಲೀಸ್ ಠಾಣೆಯ ಲಿಂಗನಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಲಿಂಗನಹಳ್ಳಿ ನಿವಾಸಿ ಗೋವಿಂದರಾಜು ಎಂದು ಗುರುತಿಸಲಾಗಿದೆ.
ಬೆಂಕಿಹೊತ್ತಿಕೊಂಡಿದ್ದ ಗೋವಿಂದರಾಜು ಅವರನ್ನು ರಕ್ಷಣೆ ಮಾಡಲು ಯತ್ನಿಸಿದ ಇಬ್ಬರು ಪೊಲೀಸರಿಗೂ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದು ಬೆಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
Karwar Crime: ನಕಲಿ ನೋಟು ಅದಲು ಬದಲು ಪ್ರಕರಣ: ಮತ್ತೆ ನಾಲ್ವರ ಬಂಧನ
ಗಾಯಗೊಂಡ ಪೊಲೀಸರನ್ನು ಗವಿರಂಗಪ್ಪ ಮತ್ತು 112ರ ಚಾಲಕ ಗುಣಗಾನಪ್ಪ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಪತಿ-ಪತ್ನಿಯ ನಡುವೆ ಕಲಹ ನಡೆದಿತ್ತು. ಈ ಹಿನ್ನೆಲೆಯಲ್ಲಿ 112ಕ್ಕೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಹಾಗಾಗಿ ಪೊಲೀಸರು ಸ್ಥಳಕ್ಕೆ ತೆರಳಿ ಮನೆಯ ಬಾಗಿಲನ್ನು ತೆರೆದು ಬೆಂಕಿ ಹೊತ್ತಿಕೊಂಡಿದ್ದ ಗೋವಿಂದರಾಜು ನನ್ನು ಪಾರು ಮಾಡಲು ಹೋಗಿ ಪೊಲೀಸರಿಗೂ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ. ಕೂಡಲೇ ಗೋವಿಂದರಾಜುನನ್ನು ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಗೋವಿಂದರಾಜು ಮೃತಪಟ್ಟಿದ್ದಾನೆ.
ಬೆಂಕಿಯಿಂದ ಗಾಯಗೊಂಡಿದ್ದ ಪೊಲೀಸ್ ಪೇದೆಯನ್ನು ಹೆಚ್ಚಿನ ಚಿಕಿತ್ಸೆಗಾಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಎಸ್ಪಿ ರಾಹುಲ್ ಕುಮಾರ್ ಶಹಪೂರ್ ವಾಡ್ ಸಿಬ್ಬಂದಿಗಳ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಸಿಬ್ಬಂದಿಗಳ ಆಸ್ಪತ್ರೆ ಖರ್ಚನ್ನು ಭರಿಸುವುದಾಗಿ ತಿಳಿಸಿದ್ದಾರೆ.