ಚಾಮರಾಜನಗರ: ವೀರಪ್ಪನ್ ಊರಲ್ಲಿ ಅರಣ್ಯ ಸಿಬ್ಬಂದಿ, ಬೇಟೆಗಾರರ ಗುಂಡಿನ ಕಾಳಗ
ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಡಿ ಪಾಲಾರ್ ಎಂಬಲ್ಲಿ ಜಿಂಕೆ ಬೇಟೆಯಾಡಿ ತೆರಳುತ್ತಿದ್ದ ಅಂದಾಜು ನಾಲ್ವರು ಕಳ್ಳ ಬೇಟೆಗಾರರು ಹಾಗೂ ಮೂವರು ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಬೇಟೆಗಾರರು ನದಿಗೆ ಹಾರಿ ಪರಾರಿ.
ಹನೂರು(ಫೆ.17): ವೀರಪ್ಪನ್ ಅಳಿದ ಬಳಿಕವೂ ಹನೂರು ತಾಲೂಕಿನ ಗೋಪಿನಾಥಂ, ಪಾಲಾರ್ ಸುತ್ತಮುತ್ತಲೂ ಬೇಟೆಗಾರರು ಹಾವಳಿ ನಡೆಸುತ್ತಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಕಳ್ಳಬೇಟೆ ಗಾರರ ನಡುವೆ ಗುಂಡಿನ ಚಕಮಕಿ ನಡೆದಿರುವ ಆತಂಕಕಾರಿ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.
ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಡಿ ಪಾಲಾರ್ ಎಂಬಲ್ಲಿ ಜಿಂಕೆ ಬೇಟೆಯಾಡಿ ತೆರಳುತ್ತಿದ್ದ ಅಂದಾಜು ನಾಲ್ವರು ಕಳ್ಳ ಬೇಟೆಗಾರರು ಹಾಗೂ ಮೂವರು ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಬೇಟೆಗಾರರು ನದಿಗೆ ಹಾರಿ ಪರಾರಿಯಾಗಿದ್ದಾರೆ.
ಚಾಮರಾಜನಗರ: ಪಾದಯಾತ್ರೆ ಕೈ ಬಿಟ್ಟು ಕಾರಿನಲ್ಲಿ ತೆರಳಿ ಮಾದಪ್ಪನ ದರ್ಶನ ಪಡೆದ ನಿಖಿಲ್
ಸ್ಥಳದಲ್ಲಿ ಬೇಟೆಗಾರರ ಬಳಕೆಯ ಬ್ಯಾಟರಿಗಳು ಪತ್ತೆಯಾಗಿದೆ. ಮಲೆಮಹದೇಶ್ವರ ಬೆಟ್ಟಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆಂದು ಎಸಿಎಫ್ ಅಂಕರಾಜು ಮಾಹಿತಿ ನೀಡಿದ್ದಾರೆ.
ತಮಿಳುನಾಡು ಹಾಗೂ ಕರ್ನಾಟಕದ ನಡುವೆ ಗಡಿಯಂತೆ ಪಾಲಾರ್ ನದಿ ಹರಿಯಲಿದ್ದು, ತಮಿಳುನಾಡು ಭಾಗದಿಂದ ಬೇಟೆಗಾರರು ತೆಪ್ಪದ ಮೂಲಕ ರಾಜ್ಯಕ್ಕೆ ಬಂದು ಜಿಂಕೆ ಬೇಟೆ ಯಾಡುತ್ತಾರೆ ಎನ್ನಲಾಗಿದ್ದು, ಗುಂಡಿನ ಚಕಮಕಿ ನಡೆಸಿದ ಕಳ್ಳ ಬೇಟೆಗಾರರು ಗೋವಿಂದಪ್ಪಾಡಿ ಗ್ರಾಮದವರು ಎಂದು ಶಂಕಿಸಲಾಗಿದೆ.