25,000ಕ್ಕೆ ನವಜಾತ ಶಿಶು ಮಾರಾಟ: ಆಶಾ ಕಾರ್ಯಕರ್ತೆ ಸಹಿತ ಐವರ ಬಂಧನ
* ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದಲ್ಲಿ ನಡೆದ ಘಟನೆ
* ತಾಯಿಯನ್ನು ಪುಸಲಾಯಿಸಿ ಹೆಣ್ಣುಮಗು ಮಾರಿದ ದುರುಳರು
* ಸಿಡಿಪಿಒ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ
ಹಳಿಯಾಳ(ಏ.27): ಹಣದ ಆಸೆಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶು(Infant) ಮಾರಾಟ ಮಾಡಿದ ಆರೋಪದಡಿ ಐವರನ್ನು ಪೊಲೀಸರು(Police) ಬಂಧಿಸಿದ ಘಟನೆ ಸೋಮವಾರ ಸಂಜೆ ವರದಿಯಾಗಿದೆ.
ತಟ್ಟಿಗೇರಿ ಗ್ರಾಪಂನ ಗೌಳಿವಾಡದ ಸಂತ್ರಸ್ತೆ(Victim) ಸಾವಿತ್ರಿ 6 ದಿನದ ಹಿಂದೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಹಣದಾಸೆಗಾಗಿ ಅವಳ ಸ್ವಂತ ಸಹೋದರ ಭಯ್ಯಾ ಪಟಕಾರೆ (30), ಆಶಾ ಕಾರ್ಯಕರ್ತೆ ರೋಜಿ ದಬಾಲಿ (35), ಅಗಸಲಕಟ್ಟಾಗ್ರಾಮದ ಮಮತಾಜ ಹಳಬ (30) ಅವರು ಸೇರಿ ತಾಯಿಯನ್ನು ಪುಸಲಾಯಿಸಿ ಮಗುವನ್ನು ಕೇವಲ .25 ಸಾವಿರಕ್ಕೆ ಯಲ್ಲಾಪೂರ ತಾಲೂಕಿನ ಕಿರವತ್ತಿಯ ದಂಪತಿ ಅಬ್ದುಲ್ ರೆಹಮಾನ್ ಪಟೇಲ್, ರಾಹತ್ ಪಟೇಲ್ (38) ದಂಪತಿಗಳಿಗೆ ಮಾರಾಟ ಮಾಡಿದ್ದರು.
ಬೆಂಗ್ಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: 82 ಕೆಜಿ ಮಾದಕ ವಸ್ತು ಜಪ್ತಿ, ಇಬ್ಬರ ಬಂಧನ
ಈ ಕುರಿತು ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಿಡಿಪಿಒ ಡಾ. ಲಕ್ಷ್ಮಿದೇವಿ ಅವರು, ಪಿಎಸ್‌ಐ ಶಿವಾನಂದ ನಾವದಗಿ, ಪಿಡಿಒ ಮಹಾಂತೇಶ ಹುರಕಡ್ಲಿ, ವಲಯ ಮೇಲ್ವಿಚಾರಕಿ ರಾಜೇಶ್ವರಿ ಕಟ್ಟಿಮನಿ, ಪೊಲೀಸ್ ಕಾನ್‌ಸ್ಟೇಬಲ್ ರಮ್ಯಾ ಅವರ ಜೊತೆ ಸೋಮವಾರ ಸಂಜೆ ಅರಣ್ಯದ ಅಂಚಿನಲ್ಲಿರುವ ತಟ್ಟಿಗೇರಿ ಗೌಳಿವಾಡಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಪರಿಶೀಲಿಸಿ ಮೂವರು ಆರೋಪಿಗಳನ್ನು(Accused) ಬಂಧಿಸಿದ್ದರು(Arrest).
ಕಾರವಾರದ(Karwar) ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಮಂಗಳವಾರ ಯಲ್ಲಾಪೂರದ ಕಿರವತ್ತಿಯ ದಂಪತಿ ಮನೆಗೆ ತೆರಳಿ ಶಿಶುವನ್ನು ರಕ್ಷಿಸಿದ್ದಾರೆ. ಬಳಿಕ ಶಿರಸಿಯ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿದರು. ಈ ಬಗ್ಗೆ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಆರೋಪಿ ಅರೆಸ್ಟ್
ಚಿಕ್ಕಮಗಳೂರು: ಆನೆ ದಂತದಲ್ಲಿ ಚೆಸ್ ಪಾನ್ ಕೆತ್ತನೆ, ಮಾರಾಟ ಮಾಡುವಾಗ ಸಿಕ್ಕಿಬಿದ್ದ
ಚಿಕ್ಕಮಗಳೂರು : ಆತ ಓದಿರುವುದು ಬರೀ 7 ಕ್ಲಾಸ್ , ಆತ ಮಾಡುತ್ತಿದ್ದ ಕೆಲಸ ಮಾತ್ರ ಭಯಂಕರ , ಕಾಡಂಚಿನ ಗ್ರಾಮದಲ್ಲಿ ವಾಸವಾಗಿರುವ ಈತ ಮಾಡುತ್ತಿದ್ದ ಖತರ್ನಾಕ್ ಕೆಲಸವನ್ನು ಪೊಲೀಸ್ ಸಿಬ್ಬಂದಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆನೆ ದಂತದಲ್ಲಿ ಕೆತ್ತಿದ್ದ ಚೆಸ್ ಪಾನ್ ಮಾರಾಟ ಮಾಡುವ ವೇಳೆಯಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ ಮಲೆನಾಡಿನ ಮೂಲದ ವ್ಯಕ್ತಿ.
ಆನೆ ದಂತದಲ್ಲಿ ಚದುರಂಗದ ಪಾನ್
ಆನೆ ದಂತದಲ್ಲಿ ಚದುರಂಗದ ಪಾನ್ ಹಾಗೂ ಬಾಕ್ಸ್ ನಿರ್ಮಾಣ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಆರೋಪಿ ಸಿಐಡಿ ಅರಣ್ಯ ಸಂಚಾರಿ ಪೊಲೀಸ್ ದಳದ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ನಗರದ ಖಾಸಗಿ ಬಸ್ ನಿಲ್ದಾಣದ ಹಿಂಭಾಗ ಹಾಸನ ಜಿಲ್ಲೆ ಸಕಲೇಶಪುರ ಮೂಲದ ಮೆಲ್ವಿನ್ ಎಂಬ ವ್ಯಕ್ತಿ.