ಕಾಂಗ್ರೆಸ್‌ ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ ಕೆಜಿಎಫ್‌ ಸಿನಿಮಾದ ಮ್ಯೂಸಿಕ್‌ ಬಳಸಿ ‘ಹಕ್ಕು ಸ್ವಾಮ್ಯ ಮತ್ತು ಬೌದ್ಧಿಕ ಆಸ್ತಿ ಹಕ್ಕು’ ಉಲ್ಲಂಘಿಸಿದ ಆರೋಪದಡಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಮೂವರ ವಿರುದ್ಧ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. 

ಬೆಂಗಳೂರು (ನ.05): ಕಾಂಗ್ರೆಸ್‌ ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ ಕೆಜಿಎಫ್‌ ಸಿನಿಮಾದ ಮ್ಯೂಸಿಕ್‌ ಬಳಸಿ ‘ಹಕ್ಕು ಸ್ವಾಮ್ಯ ಮತ್ತು ಬೌದ್ಧಿಕ ಆಸ್ತಿ ಹಕ್ಕು’ ಉಲ್ಲಂಘಿಸಿದ ಆರೋಪದಡಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಮೂವರ ವಿರುದ್ಧ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. 

ಎಂಆರ್‌ಟಿ ಮ್ಯೂಸಿಕ್‌ ಕಂಪನಿಯ ಮುಖ್ಯಸ್ಥ ಎಂ.ನವೀನ್‌ ಕುಮಾರ್‌ ನೀಡಿದ ದೂರಿನ ಮೇರೆಗೆ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ಮತ್ತು ಪ್ರಚಾರ ಉಸ್ತುವಾರಿಯೂ ಆದ ಜೈರಾಮ್‌ ರಮೇಶ್‌, ಕಾಂಗ್ರೆಸ್‌ ಸೋಶಿಯಲ್‌ ಮಿಡಿಯಾ ಹಾಗೂ ಡಿಜಿಟೆಲ್‌ ವಿಭಾಗದ ಮುಖ್ಯಸ್ಥೆ ಸುಪ್ರಿಯಾ ಶ್ರೀನೇತ್‌ ಹಾಗೂ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಎಂಆರ್‌ಟಿಸಿ ಮ್ಯೂಸಿಕ್‌ ಕಂಪನಿಯು ಕೆಜಿಎಫ್‌ ಸಿನಿಮಾದ ಹಿಂದಿ, ಕನ್ನಡ ಸೇರಿದಂತೆ ವಿವಿಧ ಭಾಷೆಗಳ ವಿಡಿಯೋ ಹಾಗೂ ಮ್ಯೂಸಿಕ್‌ ಹಕ್ಕು ಹೊಂದಿದೆ. 

ಬಾಲಿವುಡ್‌ ನಟಿ ಆಲಿಯಾ ಭಟ್‌ ಅಕ್ಕನ ಜತೆಗೆ ರಾಹುಲ್‌ ಗಾಂಧಿ ಭಾರತ್ ಜೋಡೋ ಯಾತ್ರೆ..!

ಆದರೆ, ‘ಕಾಂಗ್ರೆಸ್‌ ಪಕ್ಷ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ ನಮ್ಮ ಅನುಮತಿ ಪಡೆಯದೇ ಕೆಜಿಎಫ್‌ ಸಿನಿಮಾ ಮ್ಯೂಸಿಕ್‌ ಬಳಸಿಕೊಳ್ಳಲಾಗಿದೆ. ಕಾಂಗ್ರೆಸ್‌ನ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವಿಡಿಯೊ ಹಾಗೂ ಪೋಸ್ಟ್‌ ಹಾಕಲಾಗಿದೆ. ಈ ಮುಖಾಂತರ ಕಾಂಗ್ರೆಸ್‌ ತಮ್ಮ ಸ್ವಂತ ರಾಜಕೀಯ ಕಾರ್ಯಸೂಚಿಯನ್ನು ಮುಂದುವರೆಸಲು, ಮಾರ್ಕೆಟಿಂಗ್‌ ಹಾಗೂ ಪ್ರಚಾರಕ್ಕಾಗಿ ನಮ್ಮ ಹಕ್ಕು ಸ್ವಾಮ್ಯ ಹಾಗೂ ಬೌದ್ಧಿಕ ಆಸ್ತಿ ಹಕ್ಕನ್ನು ಉಲ್ಲಂಘಿಸಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುಬೇಕು’ ಎಂದು ಕಂಪನಿ ದೂರು ನೀಡಿದೆ.

ಬಿಜೆಪಿ ಜಯ ರಾಹುಲ್‌ ಯಾತ್ರೆಗೆ ಉತ್ತರ: ವಿಜಯಪುರ ಮತ್ತು ಕೊಳ್ಳೇಗಾಲದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಮತ್ತು ಕಲಬುರಗಿಯಲ್ಲಿ ನಡೆದ ಹಿಂದುಳಿದ ವರ್ಗಗಳ ವಿರಾಟ್‌ ಸಮಾವೇಶದಲ್ಲಿ ಭಾಗವಹಿಸಿದ್ದ ಜನರ ಸಂಖ್ಯೆ ಕಾಂಗ್ರೆಸ್ಸಿನ ಭಾರತ್‌ ಜೋಡೋ ಯಾತ್ರೆಗೆ ತಕ್ಕ ಉತ್ತರ ಕೊಟ್ಟಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸಾಧಿಸಿದ ಗೆಲುವು ಪಕ್ಷದ ಪರ ಜನರು ತೋರಿಸುತ್ತಿರುವ ಒಲವನ್ನು ವ್ಯಕ್ತಪಡಿಸಿದೆ ಎಂದು ಅಭಿಪ್ರಾಯಪಟ್ಟರು.

ಗುಜರಾತ್ ಚುನಾವಣೆ ಭವಿಷ್ಯ ನುಡಿದ ರಾಹುಲ್ ಗಾಂಧಿ, ಆಪ್‌ಗೆ ತಳಮಳ, ಬಿಜೆಪಿಗೆ ಕಸಿವಿಸಿ!

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿಜಯಪುರ ನಗರ ಪಾಲಿಕೆ ಫಲಿತಾಂಶ ಹೊರಬಿದ್ದಿದೆ. ವಿಜಯಪುರ ಪಾಲಿಕೆಯಲ್ಲಿ ಬಿಜೆಪಿ ಗೆಲ್ಲುವುದು ಕಷ್ಟಎಂದು ವಿಶ್ಲೇಷಿಸಲಾಗುತ್ತಿತ್ತು. ಆದರೆ ಪಕ್ಷ ಸುಲಭವಾಗಿ ಗೆದ್ದಿದೆ. ಆ ಪಾಲಿಕೆಯ ಒಟ್ಟು 35 ಸೀಟುಗಳಲ್ಲಿ 17 ಸೀಟನ್ನು ಬಿಜೆಪಿ ಗೆದ್ದಿದೆ. ಇಲ್ಲಿ ಯಾವತ್ತೂ ಬಿಜೆಪಿ ಗೆದ್ದಿರಲಿಲ್ಲ. ಇದೊಂದು ಐತಿಹಾಸಿಕ ಗೆಲುವು ಎಂದು ಹರ್ಷ ವ್ಯಕ್ತಪಡಿಸಿದರು. ವಿಜಯಪುರದಲ್ಲಿ ದೊಡ್ಡ ಪ್ರಮಾಣದ ಸಂಭ್ರಮಾಚರಣೆ ನಡೆಯಲಿದೆ. ಕಾರ್ಯಕರ್ತರು ಮತ್ತು ಪ್ರಮುಖರು ಈ ಕುರಿತು ಯೋಜಿಸಿದ್ದಾರೆ. ಕೊಳ್ಳೇಗಾಲದ ನಗರಸಭೆಯ 7 ಸೀಟುಗಳಿಗೆ ಉಪ ಚುನಾವಣೆ ನಡೆದಿದ್ದು, 6 ಸೀಟುಗಳನ್ನು ಬಿಜೆಪಿ ಗೆದ್ದಿದೆ. ಇದು ಬಿಜೆಪಿ ಪರ ವಾತಾವರಣದ ಸಂಕೇತ ಎಂದು ವಿಶ್ಲೇಷಿಸಿದರು.