ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಅಸಹಜ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ. ಮೃತ ಅಶೋಕ್ ಅವರು ರಾಮಮೂರ್ತಿನಗರದಲ್ಲಿ ಹಾವನೂರು ಲಾ ಕಾಲೇಜು ನಡೆಸುತ್ತಿದ್ದಾರೆ. ಕಳೆದ 15 ದಿನಗಳಿಂದ ಹೆಚ್ಚಾಗಿ ಯಾರೊಂದಿಗೂ ಬೆರೆಯುತ್ತಿರಲಿಲ್ಲ. ಸದಾ ರೂಮ್‌ನಲ್ಲೇ ಕಾಲ ಕಳೆಯುತ್ತಿದ್ದರು. 

ಬೆಂಗಳೂರು(ಜ.23): ಮಾಜಿ ಕಾನೂನು ಸಚಿವ ದಿವಂಗತ ಎಲ್.ಜಿ.ಹಾವನೂರು ಅವರ ಪುತ್ರ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಾವನೂರು ಲೇಔಟ್ ನಿವಾಸಿ ಅಶೋಕ್‌ ಹಾವನೂರು (62) ಆತ್ಮಹತ್ಯೆ ಮಾಡಿಕೊಂಡವರು. 

ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಅಸಹಜ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ. ಮೃತ ಅಶೋಕ್ ಅವರು ರಾಮಮೂರ್ತಿನಗರದಲ್ಲಿ ಹಾವನೂರು ಲಾ ಕಾಲೇಜು ನಡೆಸುತ್ತಿದ್ದಾರೆ. ಕಳೆದ 15 ದಿನಗಳಿಂದ ಹೆಚ್ಚಾಗಿ ಯಾರೊಂದಿಗೂ ಬೆರೆಯುತ್ತಿರಲಿಲ್ಲ. ಸದಾ ರೂಮ್‌ನಲ್ಲೇ ಕಾಲ ಕಳೆಯುತ್ತಿದ್ದರು. 

ಶಿವಮೊಗ್ಗದಲ್ಲಿ ಪ್ರೀತಿಸಿ ಮದುವೆಯಾಗಿದ್ದ ಮಲೆನಾಡಿನ ಶಮಿತಾ ಆತ್ಮಹತ್ಯೆ!

ಭಾನುವಾರ ಸಂಜೆಯಾದರೂ ರೂಮ್‌ನಿಂದ ಹೊರಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರು ಕಿಟಕಿಯಲ್ಲಿ ನೋಡಿದಾಗ ವೈಯರ್‌ನಿಂದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.