Asianet Suvarna News Asianet Suvarna News

ಉತ್ತರಕನ್ನಡ: ಮುರುಡೇಶ್ವರದ ಹೊಟೇಲ್‌ನಲ್ಲಿ ವೇಶ್ಯಾವಾಟಿಕೆ ದಂಧೆ, ನಾಲ್ವರ ಬಂಧನ

ಮುರ್ಡೇಶ್ವರದ ಬಸ್ತಿಮಕ್ಕಿಯ ಐ ಲ್ಯಾಂಡ್ ಹೊಟೇಲ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಹೈಟೆಕ್ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡ ನಾಲ್ವರನ್ನ ಬಂಧಿಸಲಾಗಿದೆ. 
 

four arrested for Prostitution in hotel at Murudeshwar in Uttara Kannada grg
Author
First Published Sep 1, 2024, 11:03 PM IST | Last Updated Sep 1, 2024, 11:03 PM IST

ಉತ್ತರಕನ್ನಡ(ಸೆ.01):  ಹೊಟೇಲ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ಮಾಡಿ ನಾಲ್ವರ ಬಂಧಿಸಿದ ಘಟನೆ ಇಂದು(ಭಾನುವಾರ) ಜಿಲ್ಲೆಯ ಮುರ್ಡೇಶ್ವರದಲ್ಲಿ ನಡೆದಿದೆ. 

ಮುರ್ಡೇಶ್ವರದ ಬಸ್ತಿಮಕ್ಕಿಯ ಐ ಲ್ಯಾಂಡ್ ಹೊಟೇಲ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಹೈಟೆಕ್ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡ ನಾಲ್ವರನ್ನ ಬಂಧಿಸಲಾಗಿದೆ. 

ಹೊರಗೆ ಪಿಜಿ, ಒಳಗೆ ಮಾಂಸ ದಂಧೆ... ವಾಟ್ಸಪ್‌ನಲ್ಲಿ ಡೀಲ್, ಯುವತಿಯರು ಈ ಜಾಲದಲ್ಲಿ ಸಿಲುಕಿದ್ದೇಗೆ?

ಉತ್ತರಕನ್ನಡ ಜಿಲ್ಲಾ ಎಸ್ಪಿ ನಾರಾಯಣ ಸೂಚನೆ ಮೇರೆಗೆ ಸಿಇಎನ್ ಡಿಎಸ್ಪಿ ಅಶ್ವಿನಿ ನೇತೃತ್ವದಲ್ಲಿ ದಾಳಿ ನಡೆದಿದೆ. ಪೊಲೀಸರು ಹೊಟೇಲ್ ಒಳಗೆ ಹೊಕ್ಕುತ್ತಿದ್ದಂತೇ ಹೊಟೇಲ್ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದಾರೆ. ಪೊಲೀಸರು ಆಗಮಿಸುತ್ತಿದ್ದಂತೇ ವೇಶ್ಯಾವಾಟಿಕೆಗೆ ಬಳಸುತ್ತಿದ್ದ  ಮಹಿಳೆಯರ ಜತೆ ಕೆಲವರು ಪರಾರಿಯಾಗಿದ್ದಾರೆ. 

ಹೊಟೇಲ್ ನ ಸಿಕ್ರೇಟ್ ರೂಂನಲ್ಲಿ ಜಾಲಾಡಿದಾಗ ದೊಡ್ಡ ಪ್ರಮಾಣದಲ್ಲಿ ಕಾಂಡೋಮ್ ಪ್ಯಾಕೇಟ್, ಗ್ರಾಹಕರ ಲಗೇಜ್ ಪತ್ತೆಯಾಗಿವೆ. ವೇಶ್ಯಾವಾಟಿಕೆ ನಡೆಸ್ತಿದ್ದ ಇಬ್ಬರು ಹೋಟೇಲ್ ಸಿಬ್ಬಂದಿ ಹಾಗೂ ಇಬ್ಬರು ಗ್ರಾಹಕರನ್ನು  ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Latest Videos
Follow Us:
Download App:
  • android
  • ios