15 ವರ್ಷದ ಬಾಲಕಿಯನ್ನು ಕೂಡಿಟ್ಟು 13 ತಿಂಗಳಿಂದ ಸಾಮೂಹಿಕ ಅತ್ಯಾಚಾರ!
ಮನೆ ಕೆಲಸ ಕೊಡಿಸುವ ಆಸೆ ತೋರಿಸಿ ಬಾಲಕಿಯ ಕರೆದೊಯ್ದಿದ್ದ ಕಾಮುಕರು| 15 ವರ್ಷದ ಬಾಲಕಿಯನ್ನು ವ್ಯಕ್ತಿಯೊಬ್ಬ 13 ತಿಂಗಳ ಕಾಲ ಒಂದೇ ಕೊಠಡಿಯಲ್ಲಿ ಕೂಡಿಟ್ಟು ಅತ್ಯಾಚಾರ
ನವದೆಹಲಿ(ಜ.16): ಮನೆ ಕೆಲಸ ಕೊಡಿಸುವ ಆಸೆ ತೋರಿಸಿ ಕರೆದೊಯ್ದಿದ್ದ 15 ವರ್ಷದ ಬಾಲಕಿಯನ್ನು ವ್ಯಕ್ತಿಯೊಬ್ಬ 13 ತಿಂಗಳ ಕಾಲ ಒಂದೇ ಕೊಠಡಿಯಲ್ಲಿ ಕೂಡಿಟ್ಟು ನಿರಂತರ ಅತ್ಯಾಚಾರವೆಸಗಿದ ಮತ್ತು ಬಳಿಕ ಹಣದಾಹಕ್ಕಾಗಿ ಆಕೆಯನ್ನು ವೇಶ್ಯಾವಾಟಿಕೆ ದಂಧೆಗೆ ನೂಕಿದ ಪೈಶಾಚಿಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಇತ್ತೀಚೆಗೆ ಸಂತ್ರಸ್ತ ಬಾಲಕಿ ಈ ಕೂಪದಿಂದ ತಪ್ಪಿಸಿಕೊಂಡು ಮನೆ ಸೇರಿದ್ದು, ಆಕೆ ಇದೀಗ 5 ತಿಂಗಳ ಗರ್ಭಿಣಿಯಾಗಿದ್ದಾಳೆ. ಸಂತ್ರಸ್ತೆಯ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಮೇಲೆ ನಿರಂತರ ಅತ್ಯಾಚಾರವೆಸಗಿರುವುದು ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ಬಾಲಕಿ ಪೋಷಕರು ನೀಡಿದ ದೂರಿನ ಮೇರೆಗೆ ಕಾರಾರಯಚರಣೆ ನಡೆಸಿದ ಪೊಲೀಸರು, ಈ ದುಷ್ಕೃತ್ಯದಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ನೇಪಾಳದ ಪ್ರಜೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.