ತಾಲೂಕಿನ ಜವಳಗೇರಾ ಗ್ರಾಮದ ಬಳಿ ಇರುವ ಬಾಲಯ್ಯ ಕ್ಯಾಂಪ್‌ನಲ್ಲಿ ಸೋಮವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಲಾರಿ ಹಾಗೂ ಕಾರಿನ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಜರುಗಿದೆ. 

ಸಿಂಧನೂರು (ಜು.19): ತಾಲೂಕಿನ ಜವಳಗೇರಾ ಗ್ರಾಮದ ಬಳಿ ಇರುವ ಬಾಲಯ್ಯ ಕ್ಯಾಂಪ್‌ನಲ್ಲಿ ಸೋಮವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಲಾರಿ ಹಾಗೂ ಕಾರಿನ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಜರುಗಿದೆ. ಕಾರು ಬೆಂಗಳೂರಿನಿಂದ ಹೈದರಾಬಾದ್‌ ಕಡೆಗೆ ಹೊರಟಿತ್ತು. 

ಲಾರಿ ತೆಲಂಗಾಣದಿಂದ ಸಿಂಧನೂರಿಗೆ ಬರುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದೆ. ಮೃತರೆಲ್ಲಾ ಹೈದರಾಬಾದ್‌ನವರು ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿ ರಭಸಕ್ಕೆ ಲಾರಿಯೊಳಕ್ಕೆ ಕಾರು ಸಿಲುಕಿಕೊಂಡಿತ್ತು. ಜೆಸಿಬಿ ಮೂಲಕ ಕಾರು, ಶವಗಳನ್ನು ಹೊರತೆಗೆಯಲಾಗಿದೆ. ಚಾಲಕ ಅಮರದೀಪ ಸಕ್ಸೆನಾ (35), ಪತ್ನಿ ಪೂರ್ಣಿಮಾ (30), ಮಕ್ಕಳಾದ ಜತೀನ (12) ಹಾಗೂ ಮಾಯೀನ್‌ (7) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲಾ ಹೈದ್ರಾಬಾದ್‌ ಮೂಲದವರೆಂದು ಪೊಲೀಸರು ತಿಳಿಸಿದ್ದಾರೆ. 

Gadag: ಬೊಲೆರೊ ವಾಹನ ಡಿಕ್ಕಿ: ಬೈಕ್ ಮೇಲೆ ತೆರಳುತ್ತಿದ್ದ ಸರ್ಕಾರಿ ನೌಕರರಿಬ್ಬರ ಸಾವು!

ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಭೇಟಿ ನೀಡಿ ಪರಿಶೀಲಿಸಿದರು. ಅಪಘಾತದ ರಭಸಕ್ಕೆ ಕಾರು ಲಾರಿಯೊಳಗೆ ಸಿಕ್ಕಿಹಾಕಿಕೊಂಡಿತ್ತು. ಜೆಸಿಬಿ ಯಂತ್ರದ ಮೂಲಕ ಕಾರು ಹಾಗೂ ಶವಗಳನ್ನು ಹೊರತೆರೆಯಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಳಗಾನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕದ್ದ ಬೈಕ್‌ನಲ್ಲಿ ಅಪಘಾತ ಎಸಗಿ ಪರಾರಿಯಾದ ಕಳ್ಳ: ಚಾಲಾಕಿ ಚೋರನೊಬ್ಬ ಹಾಡಹಗಲೇ ದ್ವಿಚಕ್ರ ವಾಹನ ಕದ್ದು ಪರಾರಿಯಾಗುವಾಗ ಅಪಘಾತ ಎಸಗಿ ಸ್ಥಳದಲ್ಲೇ ದ್ವಿಚಕ್ರ ವಾಹನ ಬಿಟ್ಟು ಪರಾರಿಯಾಗಿರುವ ಘಟನೆ ಬುಧವಾರ ಜಯನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಯನಗರ 5ನೇ ಬ್ಲಾಕ್‌ನಲ್ಲಿ ಬುಧವಾರ ಬೆಳಗ್ಗೆ 11ರ ಸುಮಾರಿಗೆ ವೀರಣ್ಣ ರಸ್ತೆಯ ಬದಿ ಪಾರ್ಕಿಂಗ್‌ ಸ್ಥಳದಲ್ಲಿ ದ್ವಿಚಕ್ರ ವಾಹನ ನಿಲುಗಡೆ ಮಾಡಿ ಕಾರ್ಯ ನಿಮಿತ್ತ ಕಚೇರಿಗೆ ತೆರಳಿದ್ದಾರೆ. ಈ ವೇಳೆ ದ್ವಿಚಕ್ರ ವಾಹನದಲ್ಲಿ ಕೀ ಬಿಟ್ಟು ತೆರಳಿದ್ದಾರೆ. ಅರ್ಧ ಗಂಟೆ ಬಳಿಕ ಕೆಲಸ ಮುಗಿಸಿ ದ್ವಿಚಕ್ರ ವಾಹನ ನಿಲುಗಡೆ ಮಾಡಿದ್ದ ಸ್ಥಳಕ್ಕೆ ಬಂದಿದ್ದಾರೆ. 

ಮಳೆಯಿಂದ ತಪ್ಪಿಸಿಕೊಳ್ಳಲು ಆಸರೆಗೆ ನಿಂತ ಕುರಿಗಳ ಮೇಲೆ ಹರಿದ ರೈಲು, 96 ಕುರಿ ಸಾವು

ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಹೋಗಲು ಮುಂದಾಗಿದ್ದಾನೆ. ಈ ವೇಳೆ ವೀರಣ್ಣ ಅವರು ಬೆನ್ನತ್ತಿ ಹಿಡಿಯಲು ಪ್ರಯತ್ನಿಸಿ ವಿಫಲವಾಗಿದ್ದಾರೆ. ಚಾಲಾಕಿ ಕಳ್ಳ ವೀರಣ್ಣ ಅವರ ದ್ವಿಚಕ್ರ ವಾಹನ ಕದ್ದು ಪರಾರಿಯಾಗುವಾಗ 24ನೇ ಮುಖ್ಯರಸ್ತೆಯಲ್ಲಿ ಮುಂದೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಎರಡೂ ದ್ವಿಚಕ್ರ ವಾಹನಗಳ ಇಬ್ಬರೂ ಸವಾರರು ರಸ್ತೆಗೆ ಬಿದ್ದಿದ್ದಾರೆ. ಜಂಕ್ಷನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರ ಕಾನ್‌ಸ್ಟೇಬಲ್‌ ಸ್ಥಳಕ್ಕೆ ಧಾವಿಸಿದ್ದಾರೆ. ಅಷ್ಟರಲ್ಲಿ ಚಾಲಾಕಿ ಕಳ್ಳ ಸ್ಥಳದಲ್ಲೇ ದ್ವಿಚಕ್ರ ವಾಹನ ಬಿಟ್ಟು ಪರಾರಿಯಾಗಿದ್ದಾನೆ.