ಬೆಳಗಾವಿ(ಜ.28): ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರಾಯಬಾಗ ರೈಲು ನಿಲ್ದಾಣ ಬಳಿ ನಿನ್ನೆ ರಾತ್ರಿ(ಬುಧವಾರ) ನಡೆದಿದೆ.  ಮೃತರನ್ನ ಬೀರಡಿ ಗ್ರಾಮದ ಸಾತಪ್ಪ ಸುತಾರ್(60), ಪತ್ನಿ ಮಹಾದೇವಿ(50), ಮಕ್ಕಳಾದ ದತ್ತಾತ್ರೇಯ (28), ಸಂತೋಷ (25) ಎಂದು ಗುರುತಿಸಲಾಗಿದೆ.

ಒಂದೇ ಕುಟುಂಬದ ವೃದ್ಧ ತಂದೆ, ತಾಯಿ, ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ನಿನ್ನೆ ರಾತ್ರಿ ನಿಜಾಮುದ್ದೀನ್ ಎಕ್ಸ್‌ಪ್ರೆಸ್‌ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಹೊಸದಾಗಿ ಮದುವೆಯಾಗಿದ್ದ ಸೊಸೆ ನಿಗೂಢ ಸಾವಿನ ನಂತರ ಅತ್ತೆಯ ಶವವೂ ಪತ್ತೆ!

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಯಬಾಗ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.