Asianet Suvarna News Asianet Suvarna News

ಬೆಂಗಳೂರು: ಕೇರಳ ಮೂಲದ ಯುವತಿಯ ಮೇಲೆ ಗ್ಯಾಂಗ್‌ ರೇಪ್‌

ಕೇರಳ ಮೂಲದ ಯುವತಿಯ ಮೇಲೆ ಇಬ್ಬರು ಯುವಕರಿಂದ ಗ್ಯಾಂಗ್ ರೇಪ್ 

Gang Rape on Young Woman in Bengaluru grg
Author
First Published Nov 29, 2022, 1:06 PM IST

ಬೆಂಗಳೂರು(ನ.29):  ಬೆಂಗಳೂರಿನಲ್ಲೊಂದು ಪೈಶಾಚಿಕ ಕೃತ್ಯ ನಡೆದಿದೆ. ಹೌದು, ಕೇರಳ ಮೂಲದ ಯುವತಿಯ ಮೇಲೆ ಇಬ್ಬರು ಯುವಕರು ಗ್ಯಾಂಗ್ ರೇಪ್ ಮಾಡಿದ ಘಟನೆ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ನಡೆದಿದೆ. ಕಳೆದ ಶುಕ್ರವಾರ ರಾತ್ರಿ ಘಟನೆ ನಡೆದಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. 

ಸಂತ್ರಸ್ತ ಯುವತಿ ಬಿಟಿಎಂ ಲೇಔಟ್‌ನ ಸಂಸ್ಥೆಯೊಂದರಲ್ಲಿ ಫ್ರೀಲ್ಯಾನ್ಸರ್ ಆಗಿ ಕೆಲಸ ಮಾಡಿಕೊಂಡಿದ್ದಳು ಅಂತ ತಿಳಿದು ಬಂದಿದೆ. ಯುವತಿ ಶುಕ್ರವಾರ ರಾತ್ರಿ ರ‍್ಯಾಪಿಡೋ ಬೈಕ್ ಬುಕ್ಕಿಂಗ್ ಮಾಡಿದ್ದಳು. ಬಿಟಿಎಂ ಲೇಔಟ್‌ನಿಂದ ನೀಲಾದ್ರಿ ನಗರಕ್ಕೆ ರ‍್ಯಾಪಿಡೋ ಬೈಕ್ ಬುಕ್ಕಿಂಗ್ ಮಾಡಿದ್ದಳು. ರ‍್ಯಾಪಿಡೋ ಬೈಕ್ ಹುಡುಗ ಪಿಕ್ ಅಪ್ ವೇಳೆ ಯುವತಿ ಮದ್ಯಪಾನ ಮಾಡಿದ್ದಳು ಅಂತ ಹೇಳಲಾಗುತ್ತಿದೆ. 

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ ಕೇವಲ ಐದು ಬಸ್ಕಿಯ ಶಿಕ್ಷೆ

ನೀಲಾದ್ರಿ ನಗರ ತಲುಪುವ ಹೊತ್ತಿಗೆ ಯುವತಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದಳು. ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು  ರ‍ರ‍್ಯಾಪಿಡೋ ಯುವಕ ಡ್ರಾಪ್ ಪಾಯಿಂಟ್ ತಲುಪಿಸಿಲ್ಲ.  ತನ್ನ ಸ್ನೇಹಿತನ ನೆರವಿನಿಂದ ನೀಲಾದ್ರಿ ನಗರದ ತನ್ನ ರೂಮಿಗೆ ಕರೆದೊಯ್ದು ಇಬ್ಬರೂ ಸೇರಿ ಸಾಮಹಿಕ ಅತ್ಯಾಚಾರವೆಸಗಿದ್ದಾರೆ. ರ‍್ಯಾಪಿಡೋ ಬೈಕ್ ಸವಾರ ಮತ್ತು ಆತನ ಸ್ನೇಹಿತ ರೇಪ್ ಮಾಡಿದ್ದಾರೆ. 

ಪ್ರಜ್ಞೆ ಬಂದ ಬಳಿಕ ಆರೋಪಿಗಳು ಯುವತಿಯನ್ನು ಬಿಟ್ಟು ಕಳುಹಿಸಿದ್ದರು. ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಕಳುಹಿಸಿದ್ದರು. ಬಳಿಕ ಸಂತ್ರಸ್ತ ಯುವತಿ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಳು. ಯುವತಿಯ ದೂರು ಆಧರಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

Follow Us:
Download App:
  • android
  • ios