ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಂದು, ಚಿನ್ನ ದೋಚಿದ್ದ ನಾಲ್ವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳ ಪೈಕಿ ಶ್ರೀಧರ್ ಎಂಬಿಎ ಪದವಿಧರನಾಗಿದ್ದು, ಕ್ರಿಕೆಟ್ ಬೆಟ್ಟಿಂಗ್ ಹುಚ್ಚು ಹತ್ತಿಸಿಕೊಂಡಿದ್ದ. ಇದಕ್ಕಾಗಿ ವಿಪರೀತ ಸಾಲ ಮಾಡಿಕೊಂಡಿದ್ದ.
ಬೆಂಗಳೂರು (ಜು.25): ನಗರದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿ ನಗದು, ಚಿನ್ನಾಭರಣ ದರೋಡೆ ಮಾಡಿದ್ದ ಎಂಬಿಎ ಪದವಿಧರ, ಇಬ್ಬರು ಅಪ್ರಾಪ್ತ ಬಾಲಕರು ಸೇರಿದಂತೆ ನಾಲ್ವರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬ್ಯಾಟರಾಯನಪುರದ ಶ್ರೀಧರ್ (29), ನಿತಿನ್ ರಾಜ್ (18) ಹಾಗೂ ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ. ಅಪ್ರಾಪ್ತರನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಆರೋಪಿಗಳು ಜೂನ್ 2ರಂದು ಬ್ಯಾಂಕ್ ಕಾಲೋನಿ ಬಳಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆಗೈದು .20 ಸಾವಿರ ನಗದು, ಸುಮಾರು .1.70 ಲಕ್ಷ ಮೌಲ್ಯದ ಚಿನ್ನದ ಸರ, ಉಂಗುರ, ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನ ಕಿತ್ತುಕೊಂಡು ಪರಾರಿಯಾಗಿದ್ದರು. ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಆರೋಪಿಗಳ ಪೈಕಿ ಶ್ರೀಧರ್ ಎಂಬಿಎ ಪದವಿಧರನಾಗಿದ್ದು, ಕ್ರಿಕೆಟ್ ಬೆಟ್ಟಿಂಗ್ ಹುಚ್ಚು ಹತ್ತಿಸಿಕೊಂಡಿದ್ದ. ಇದಕ್ಕಾಗಿ ವಿಪರೀತ ಸಾಲ ಮಾಡಿಕೊಂಡಿದ್ದ. ಹೀಗಾಗಿ ಸಾಲಗಾರರು ಆಗಾಗ ಮನೆ ಬಳಿ ಬಂದು ಗಲಾಟೆ ಮಾಡುತ್ತಿದ್ದರು. ಹೀಗಾಗಿ ಮನೆ ತೊರೆದಿದ್ದ ಆರೋಪಿ, ಪುಂಡರ ಜತೆ ಸೇರಿಕೊಂಡು ಗಾಂಜಾ ಸೇರಿದಂತೆ ದುಶ್ಚಟಗಳ ದಾಸನಾಗಿ ಮೋಜು-ಮಸ್ತಿ ಮಾಡುತ್ತಿದ್ದ. ಈ ವೇಳೆ ಆರೋಪಿ ನಿತಿನ್ ರಾಜ್ ಹಾಗೂ ಇಬ್ಬರು ಅಪ್ರಾಪ್ತ ಬಾಲಕರು ಪರಿಚಯವಾಗಿದ್ದರು.
ಗಿರಿನಗರದ ಲೋಕೇಶ್ ಎಂಬುವವರು ಜೂನ್ 2ರಂದು ರಾತ್ರಿ ಬ್ಯಾಂಕ್ ಕಾಲೋನಿಯ ಬಾರ್‌ವೊಂದರಲ್ಲಿ ಮದ್ಯ ಸೇವಿಸಿ ದ್ವಿಚಕ್ರ ವಾಹನದಲ್ಲಿ ಮನೆ ಕಡೆ ಹೊರಟ್ಟಿದ್ದರು. ಈ ವೇಳೆ ಅದೇ ಬಾರ್‌ನಲ್ಲಿ ಮದ್ಯ ಸೇವಿಸಿದ್ದ ಆರೋಪಿಗಳು, ಲೋಕೇಶ್‌ನನ್ನು ಅಡ್ಡಗಟ್ಟಿಮಾರಕಾಸ್ತ್ರಗಳಿಂದ ಹಲ್ಲೆಗೈದು ನಗದು, ಚಿನ್ನಾಭರಣ ಹಾಗೂ ದ್ವಿಚಕ್ರ ವಾಹನ ಕಿತ್ತುಕೊಂಡು ಪರಾರಿಯಾಗಿದ್ದರು.
ಗೋವಾದಲ್ಲಿ ಮೋಜು- ಮಸ್ತಿ ಮಹದೇಶ್ವರ ಬೆಟ್ಟದಲ್ಲಿ ಪೂಜೆ!
ದರೋಡೆ ಬಳಿಕ ಆರೋಪಿಗಳು ಚಿನ್ನದ ಸರ ಹಾಗೂ ಉಂಗುರವನ್ನು ಅಡವಿಟ್ಟು ಹಣ ಪಡೆದು ಗೋವಾಕ್ಕೆ ತೆರಳಿ ಮೋಜು-ಮಸ್ತಿ ಮಾಡಿದ್ದಾರೆ. ಬಳಿಕ ಚಾಮರಾಜ ನಗರದ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಬೆಂಗಳೂರಿಗೆ ವಾಪಸಾಗಿ ಉಳಿದ ಆಭರಣಗಳನ್ನು ಅಡವಿರಿಸಿ ಹಣ ಪಡೆದು ಹಂಚಿಕೊಂಡು ಆರಾಮಾಗಿ ಓಡಾಡಿಕೊಂಡಿದ್ದರು. ಅಷ್ಟರಲ್ಲಿ ತನಿಖೆ ಆರಂಭಿಸಿದ್ದ ಪೊಲೀಸರು, ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಹಾಗೂ ಕಿತ್ತುಕೊಂಡು ಹೋಗಿದ್ದ ದ್ವಿಚಕ್ರ ವಾಹನ ಸಂಚಾರದ ಮೇಲೆ ನಿಗಾವಹಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕಾಣೆಯಾಗಿದ್ದ 4 ವಿದ್ಯಾರ್ಥಿನಿಯರಲ್ಲಿ ಇಬ್ಬರು ಪತ್ತೆ, ಇನ್ನಿಬ್ಬರಿಗಾಗಿ ಶೋಧ
ಜನರನ್ನು ಅಡ್ಡಗಟ್ಟಿ ಮೊಬೈಲ್ ಸುಲಿಯುತ್ತಿದ್ದ ನಾಲ್ವರ ಸೆರೆ, ಮೋಜು ಮಸ್ತಿಗಾಗಿ ಹಣ ಹೊಂದಿಸಲು ಕೃತ್ಯ!
ರಸ್ತೆಯಲ್ಲಿ ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿಮೊಬೈಲ್ ಸುಲಿಗೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಎಚ್‌ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾರತಹಳ್ಳಿ ಬಸವನಗರದ ಮೌನೇಶ್(24), ಕಗ್ಗದಾನಪುರದ ದೇವರಾಜ್(25), ವಿಜ್ಞಾನ ನಗರದ ಕೃಷ್ಣಾರೆಡ್ಡಿ(22), ಪೂವರಸನ್ (24) ಬಂಧಿತರು. ಇವರಿಂದ .55 ಸಾವಿರ ಮೌಲ್ಯದ ಐ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ್ದ ಎರಡು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Bengaluru Crime News: ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಉಗ್ರ ಸಿಸಿಬಿ ವಶಕ್ಕೆ
ಇತ್ತೀಚೆಗೆ ಎಚ್‌ಎಎಲ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಮೊಬೈಲ್‌ನಲ್ಲಿ ಮಾತನಾಡುತ್ತಾ ಹೋಗುವಾಗ ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ಬಂದಿರುವ ನಾಲ್ವರು, ಮೊಬೈಲ್ ಕಸಿದು ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಣ್ಣಪುಟ್ಟಕೆಲಸ ಮಾಡಿಕೊಂಡಿರುವ ಆರೋಪಿಗಳು ಮೋಜು-ಮಸ್ತಿಗೆ ಸುಲಭವಾಗಿ ಹಣ ಹೊಂದಿಸಲು ಮೊಬೈಲ್ ಸುಲಿಗೆಗೆ ಮುಂದಾಗಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಹಿಂದೆ ಆರೋಪಿಗಳು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
