'ಅಣ್ಣ ನನ್ನ ಬಟ್ಟೆ ಬಿಚ್ಚಿದರು..' ಬದ್ಲಾಪುರದಲ್ಲಿ ಲೈಂಗಿಕ ಶೋಷಣೆಗೆ ಒಳಗಾದ ಬಾಲಕಿಯ ಮಾತು!
ಥಾಣೆಯ ಬದ್ಲಾಪುರದಲ್ಲಿರುವ ನರ್ಸರಿ ಶಾಲೆಯಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ.
ಮುಂಬೈ (ಆ.21): ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದ ನರ್ಸರಿಯಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಬಾಲಕಿಯೊಬ್ಬಳ ಪೋಷಕರು ನೀಡಿದ ದೂರಿನಲ್ಲಿ ಮಗು ಅನುಭವಿಸಿದ ಸಂಕಟದ ವಿವರವಿದೆ. ಎಫ್‌ಐಆರ್‌ನ ಪ್ರಕಾರ, ಘಟನೆಯು ಆಗಸ್ಟ್ 13 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರ ನಡುವೆ ಸಂಭವಿಸಿದೆ. ಒಬ್ಬ ಬಾಲಕಿಯ ಕುಟುಂಬವು ಆಗಸ್ಟ್ 13 ರಂದು ಈ ವಿಚಾರದಲ್ಲಿ ಮೊದಲ ಅನುಮಾನ ತಳೆದಿತ್ತು. ಇನ್ನೊಂದು ಮಗುವಿನ ಕುಟುಂಬ ಸದಸ್ಯರೊಂದಿಗೆ ಮಾತನಾಡಿದ ಬಳಿಕ, ಲೈಂಗಿಕ ದೌರ್ಜನ್ಯದ ದೂರು ದಾಖಲು ಮಾಡಲು ನಿರ್ಧಾರ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬಾಲಕಿಯ ಪೋಷಕರು ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ ಎಂದು ದೂರುದಾರರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ. ವೈದ್ಯಕೀಯ ವರದಿಯಲ್ಲಿ ಆಕೆಯ ಕನ್ಯಾಪೊರೆ ಹರಿದುಹೋಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ವೇಳೆ ಬಾಲಕಿ ಭಯಭೀತಳಾಗಿದ್ದಳು ಎಂದು ದೂರುದಾರರು ಉಲ್ಲೇಖಿಸಿದ್ದಾರೆ. ಶಾಲೆಯಲ್ಲಿ 'ದಾದಾ' (ಮರಾಠಿ ಭಾಷೆಯಲ್ಲಿ ಅಣ್ಣ) ತನ್ನ ಬಟ್ಟೆಗಳನ್ನು ಕಳಚಿ ಖಾಸಗಿ ಭಾಗಗಳನ್ನು ಮುಟ್ಟಿದ್ದಾರೆ ಎಂದು ಕುಟುಂಬಕ್ಕೆ ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಆಗಸ್ಟ್ 16 ರಂದು ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿರುವುದಾಗಿ ಕುಟುಂಬದವರು ತಿಳಿಸಿದ್ದಾರೆ. ಪೊಲೀಸರು 12 ಗಂಟೆಗಳ ನಂತರ ಅಂದರೆ ಆಗಸ್ಟ್ 16 ರಂದು ರಾತ್ರಿ 9 ಗಂಟೆ ಸುಮಾರಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ, ಶಾಲೆಯಲ್ಲಿ ಅಟೆಂಡರ್ ಆಗಿದ್ದ ಆರೋಪಿಗಳು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ನರ್ಸರಿ ಮಕ್ಕಳಿಗೆ ಲೈಂಗಿಕ ದೌರ್ಜನ್ಯ: ಥಾಣೆಯಲ್ಲಿ ಶಾಲಾ ಕಟ್ಟಡ ಧ್ವಂಸ, ರೈಲು ತಡೆ
ಆರೋಪಿಯನ್ನು ಅಕ್ಷಯ್ ಶಿಂಧೆ ಎಂದು ಗುರುತಿಸಲಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಸೆಕ್ಷನ್ 65(2) (ಹನ್ನೆರಡು ವರ್ಷದೊಳಗಿನ ಬಾಲಕಿಯ ಮೇಲೆ ಅತ್ಯಾಚಾರ), 74 (ಆಕ್ರಮಣ ಅಥವಾ ಕ್ರಿಮಿನಲ್ ಬಲದ ಅಡಿಯಲ್ಲಿ ದೌರ್ಜನ್ಯದ ಉದ್ದೇಶ), 75 (ಲೈಂಗಿಕ ಕಿರುಕುಳ ಅಪರಾಧಗಳು), ಮತ್ತು ಭಾರತೀಯ ನ್ಯಾಯ ಸಂಹಿತೆಯ 76 (ವಿವಸ್ತ್ರಗೊಳ್ಳುವ ಉದ್ದೇಶದಿಂದ ಬಳಸಿದ ಆಕ್ರಮಣ ಅಥವಾ ಕ್ರಿಮಿನಲ್ ಬಲ) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಹುಡುಗಿಯರು ಲೈಂಗಿಕ ಕಾಮನೆ ನಿಯಂತ್ರಿಸಿಕೊಳ್ಳಬೇಕು ಎಂಬ ಆದೇಶ ರದ್ದು: ಸುಪ್ರೀಂ ಕೋರ್ಟ್