Mangaluru crimes: ವಿವಿಧೆಡೆ ಚಿನ್ನದ ಸರ ಸುಲಿಗೆ, ದ್ವಿಚಕ್ರ ವಾಹನ ಕಳ್ಳತನ: ಇಬ್ಬರ ಸೆರೆ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ಚಿನ್ನದ ಸರ ಸುಲಿಗೆ ಹಾಗೂ ನಾಲ್ಕು ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಮಂಗಳೂರು (ಜೂ.26) : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ಚಿನ್ನದ ಸರ ಸುಲಿಗೆ ಹಾಗೂ ನಾಲ್ಕು ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಬಂಟ್ವಾಳದ ಕಲ್ಲಡ್ಕದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಹಬೀಬ್ ಹಸನ್ ಮತ್ತು ಉಳ್ಳಾಲದ ಮೊಹಮ್ಮದ್ ಫೈಝಲ್ ಬಂಧಿತರು. ಇವರಿಂದ ಒಟ್ಟು 12,48,550 ರುಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ ಮತ್ತು 1.34 ಲಕ್ಷ ರು. ಮೌಲ್ಯದ ನಾಲ್ಕು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೂಡುಬಿದಿರೆ ಮತ್ತು ಸುರತ್ಕಲ್‌ನಲ್ಲಿ ಎರಡು ಚಿನ್ನದ ಸರ ಸುಲಿಗೆ ಪ್ರಕರಣಗಳು ವರದಿಯಾದ ನಂತರ ಆರೋಪಿಗಳ ಪತ್ತೆಗೆ ಎಸಿಪಿ (ಮಂಗಳೂರು ಉತ್ತರ) ಮನೋಜ್ ಕುಮಾರ್ ನಾಯ್‌್ಕ ಮತ್ತು ಸುರತ್ಕಲ್ ಇ®್ಸ…ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿತ್ತು. ಸುಲಿಗೆ ಮಾಡಿದ್ದ ಆಭರಣಗಳನ್ನು ಮಾರಾಟ ಮಾಡಲು ಆರೋಪಿಗಳು ಸುರತ್ಕಲ್‌ಗೆ ತೆರಳುತ್ತಿದ್ದಾಗ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ.
ಹೊನ್ನಾವರ ಪೊಲೀಸ್ ಠಾಣೆಯಲ್ಲೇ ಆರೋಪಿ ಆತ್ಮಹತ್ಯೆ: ಪಿಐ, ಪಿಎಸ್‌ಐ ಸೇರಿ ಐವರು ಅಮಾನತು!
ಆರೋಪಿಗಳು ಮಂಗಳೂರಿನಲ್ಲಿ ಕಳ್ಳತನ ಮಾಡಿದ ಚಿನ್ನ ಮಾರಾಟ ಮಾಡಲು ಪ್ರಯತ್ನಿಸಿದ್ದರೂ ಯಶಸ್ವಿಯಾಗಿರಲಿಲ್ಲ. ಬಳಿಕ ಇವರಿಬ್ಬರು ಸುರತ್ಕಲ್‌ಗೆ ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸುರತ್ಕಲ್‌ನ ಮಧ್ಯ ಮಾಧವನಗರ ಕೊಡಿಪ್ಪಾಡಿಯಲ್ಲಿ ವಾಹನ ತಪಾಸಣೆ ಆರಂಭಿಸಿದ್ದಾರೆ. ಅದೇ ದಾರಿಯಲ್ಲಿ ಹೋಗುತ್ತಿದ್ದ ಆರೋಪಿಗಳ ಸ್ಕೂಟರ್ ನಿಲ್ಲಿಸಲು ಸೂಚಿಸಿದಾಗ ದೂರದಲ್ಲಿ ವಾಹನ ನಿಲ್ಲಿಸಿ ಸ್ಥಳದಿಂದ ಓಡಲು ಆರಂಭಿಸಿದ್ದರು. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಹಿಡಿದು ವಿಚಾರಣೆ ನಡೆಸಿದಾಗ ಬೈಕ್ ಕಳ್ಳತನ ಪ್ರಕರಣಗಳ ಜತೆಗೆ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ನಡೆದ ವಿವಿಧ ಚಿನ್ನದ ಸರ ಸುಲಿಗೆ ಪ್ರಕರಣಗಳನ್ನು ಬಾಯ್ಬಿಟ್ಟಿದ್ದಾರೆ.
ಇವರಿಬ್ಬರು ಕದ್ದ ದ್ವಿಚಕ್ರ ವಾಹನಗಳನ್ನೇ ಸರ ಸುಲಿಗೆಗೆ ಬಳಸುತ್ತಿದ್ದರು ಮತ್ತು ನಿರ್ಜನ ರಸ್ತೆಗಳಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದರು ಎಂದು ಆಯುಕ್ತರು ತಿಳಿಸಿದರು.
ಹಬೀಬ್ ಹಾಸನ್ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 35 ಪ್ರಕರಣಗಳಿದ್ದು, ಫೈಝಲ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 15 ಪ್ರಕರಣಗಳಿವೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣದಲ್ಲಿ ಫೈಝಲ್ ಆರೋಪಿಯಾಗಿದ್ದ. ಬಂಧಿತರನ್ನು ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಅವರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಹಿಳೆಯೊಂದಿಗೆ ಅಶ್ಲೀಲ ವರ್ತನೆ: ಆರೋಪಿ ಜಾಮೀನಿನ ಮೇಲೆ ಬಿಡುಗಡೆ
ಕಾರ್ಯಾಚರಣೆಯ ತಂಡಕ್ಕೆ ಪೊಲೀಸ್ ಆಯುಕ್ತರು ನಗದು ಬಹುಮಾನ ಘೋಷಿಸಿದ್ದಾರೆ. ಡಿಸಿಪಿಗಳಾದ ಅನ್ಶು ಕುಮಾರ್, ದಿನೇಶ್ ಕುಮಾರ್ ಇದ್ದರು.