ಶಕ್ತಿ ಯೋಜನೆ ಜಾರಿ ಬಳಿಕ ಸರಗಳ್ಳತನ ಹೆಚ್ಚಳ? ದಸರಾ ಹಬ್ಬದ ಸಂಭ್ರಮದಲ್ಲಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಖದೀಮರು!

ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಗೃಹಿಣಿ ವ್ಯಾನಿಟಿ ಬ್ಯಾಗಿನಲ್ಲಿದ್ದ ಲಕ್ಷಾಂತರ ರು. ಮೌಲ್ಯದ ಮಾಂಗಲ್ಯಸರ ಹಾಗೂ ಮೊಬೈಲ್ ಕಳವು ಮಾಡಿರುವ ಘಟನೆ ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಜರುಗಿದೆ.

Gold chain theft case increase after shakti scheme  implementiont in karnataka rav

ಮದ್ದೂರು (ಅ.12): ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಗೃಹಿಣಿ ವ್ಯಾನಿಟಿ ಬ್ಯಾಗಿನಲ್ಲಿದ್ದ ಲಕ್ಷಾಂತರ ರು. ಮೌಲ್ಯದ ಮಾಂಗಲ್ಯಸರ ಹಾಗೂ ಮೊಬೈಲ್ ಕಳವು ಮಾಡಿರುವ ಘಟನೆ ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಜರುಗಿದೆ.
ಪಟ್ಟಣದ ಶಿಕ್ಷಕರ ಬಡಾವಣೆ ಸಿ.ಎಂ.ಚಿರಂಜೀವಿ ಪತ್ನಿ ಆರ್.ಪಿ.ಅಶ್ವಿನಿ ಅವರು ವ್ಯಾನಿಟಿ ಬ್ಯಾಗ್‌ನಲ್ಲಿ ಇಟ್ಟಿದ್ದ 25 ಗ್ರಾಂ ತೂಕದ 1.40 ಲಕ್ಷ ರು. ಮೌಲ್ಯದ ಮಾಂಗಲ್ಯ ಸರ ಹಾಗೂ ಮೊಬೈಲ್ ಅನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡಿಕೊಂಡಿದ್ದ 4 ತಿಂಗಳ ಗರ್ಭಿಣಿ ಮಹಿಳೆ ಅನುಮಾನಾಸ್ಪದ ಸಾವು!

ಆರ್.ಪಿ. ಅಶ್ವಿನಿ ಕಳೆದ ಅಕ್ಟೋಬರ್ 2ರಂದು ಮೈಸೂರಿನಲ್ಲಿರುವ ತನ್ನ ಸೋದರ ಮಾವನ ಮನೆಗೆ ಹೋಗಲು ಮದ್ದೂರು ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ನೂಕು ನುಗ್ಗಲ ನಡುವೆ ಬಸ್ ಹತ್ತುತ್ತಿದ್ದಾಗ ಬ್ಯಾಗಿನಲ್ಲಿದ್ದ ಚಿನ್ನದ ಸರ ಹಾಗೂ ರೆಡ್ಮಿ ಮೊಬೈಲ್ ಅಪಹರಿಸಲಾಗಿದೆ ಎಂದು ಅಶ್ವಿನಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಅಪರಾಧ ವಿಭಾಗದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಫ್ರೀ ಬಸ್ ಬಳಿಕ ಸರಗಳ್ಳತನ ಹೆಚ್ಚಳ:

ಸರ್ಕಾರ ಜಾರಿಗೆ ತಂದಿರುವ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆಯಿಂದ ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರು ಹೆಚ್ಚಿದ್ದು , ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ಬಸ್‌ನೊಳಗೆ ಪ್ರಯಾಣಿಕ ಸೋಗುಹಾಕಿ ಸರಗಳ್ಳತನ ಇಳಿದಿದ್ದಾರೆ.  ಸಾರಿಗೆ ಬಸ್‌ಗಳಲ್ಲೇ ಕಳ್ಳತನ ಪ್ರಕರಣಗಳ ಹೆಚ್ಚುತ್ತಿದ್ದು, ಮಹಿಳೆಯರ ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರು: ಲಾಡ್ಜ್‌ನಲ್ಲಿ ವಾಸ್ತವ್ಯ, ಹಾಸ್ಟೆಲ್‌ನಲ್ಲಿ ಲ್ಯಾಪ್‌ಟಾಪ್‌ ಕಳ್ಳತನ, ಐವರು ಅರೆಸ್ಟ್‌

ಉಚಿತ ಬಸ್ ಪ್ರಯಾಣದಿಂದಾಗಿ ನಿತ್ಯ ನೂಕುನುಗ್ಗಲಿನಲ್ಲಿ ಮಹಿಳೆಯರು ಬಸ್ ಗಳನ್ನು ಹತ್ತುವ ಸಮಯದಲ್ಲಿ ಇದನ್ನೆ ಬಂಡವಾಳ ಮಾಡಿಕೊಂಡಿರುವ ಕಳ್ಳರು ಕುತ್ತಿಗೆ, ವ್ಯಾನಿಟಿ ಬ್ಯಾಗ್ ಗಳಲ್ಲಿ ಮಹಿಳೆಯರು ಹಾಕುವ ಚಿನ್ನಾಭರಣಗಳನ್ನು ಅಪಹರಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸುವ ವೇಳೆ ಸರಗಳ್ಳತನ ಪ್ರಕರಣಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಪೊಲೀಸರು ಈ ಕೃತ್ಯಗಳಲ್ಲಿ ತೊಡಗಿರುವವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

Latest Videos
Follow Us:
Download App:
  • android
  • ios