ಸಿಂಧನೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೊರೇಬಾಳ ಗ್ರಾಪಂ ಮಾಜಿ ಸದಸ್ಯನ ಶವ ಪತ್ತೆ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಗೊರೇಬಾಳ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನೇಣಿಗೆ ಶರಣು
ಸಿಂಧನೂರು(ನ.18): ತಾಲೂಕಿನ ಗೊರೇಬಾಳ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರು ನೇಣಿಗೆ ಶರಣಾಗಿದ್ದು, ಕುಟುಂಬಸ್ಥರಿಂದ ಕೊಲೆಯ ಶಂಕೆ ವ್ಯಕ್ತವಾಗಿದೆ.
ಗ್ರಾಮದ ಶರಣಪ್ಪ ನಂದವಾಡಗಿ (39) ಮೃತ ವ್ಯಕ್ತಿಯಾಗಿದ್ದು, ಮೃತರಿಗೆ ಪತ್ನಿ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಬುಧವಾರ ಮಧ್ಯರಾತ್ರಿ ಸುಮಾರಿಗೆ ಘಟನೆ ನಡೆದಿದ್ದು, ಗೊರೇಬಾಳ ಗ್ರಾಮದ ರೊಡ್ಡ ಶರಣಪ್ಪ ಅವರ ಹೊಲದ ಪಂಪ್‌ಸೆಟ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
Yakshagana Bhagavata; ಕರಾವಳಿಯ ಪ್ರಖ್ಯಾತ ಯಕ್ಷಗಾನ ಭಾಗವತ ನೇಣಿಗೆ ಶರಣು!
ಮೃತನ ಜೇಬಿನಲ್ಲಿ ಫಿನಿಸ್ ಎಂದು ಇಂಗ್ಲಿಷ್‌ನಲ್ಲಿ ಬರೆದ ಚೀಟಿ ಸಿಕ್ಕಿದೆ. ನಂತರ ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ತಂದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಕುಟುಂಬಸ್ಥರು ಹಾಗೂ ದಲಿತ ಸಂಘಟನೆಗಳ ಮುಖಂಡರು ಗ್ರಾಮೀಣ ಪೊಲೀಸ್ ಠಾಣೆಗೆ ತೆರಳಿ ಶರಣಪ್ಪ ನಂದವಾಡಗಿ ಅವರ ಕೊಲೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಆದರೆ, ಸಬ್‌ಇನ್ಸ್‌ಪೆಕ್ಟರ್ ರಾಯಚೂರಿಗೆ ಹೋಗಿದ್ದಾರೆಂಬ ನೆಪವೊಡ್ಡಿ ಸಿಬ್ಬಂದಿ ಪ್ರಕರಣ ದಾಖಲಿಸಿಕೊಳ್ಳಲು ಮೀನಾಮೇಷ ತೋರಿದ್ದರಿಂದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಸಂಜೆ ಕೊಲೆ ಪ್ರಕರಣ ದಾಖಲಿಸಿಕೊಂಡರು.